ಬೆಂಗಳೂರು: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕಾರು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಚಾಲಕರ ಮೇಲೆ ಎಫ್‍ಐಆರ್ ದಾಖಲಿಸಲಾಗಿದೆ.
ಖಾಸಗಿ ಬಸ್ ಚಾಲಕ ಹಾಗೂ ಫಾರ್ಚೂನರ್ ಕಾರು ಚಾಲಕನ ಮೇಲೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಪ್ರಕರಣ ಸಂಬಂಧ ಮೃತಪಟ್ಟ ಪ್ರಕಾಶ್ ಮಗಳು ದೂರು ನೀಡಿದ್ದಾರೆ. ಹೀಗಾಗಿ ವೇಗ ಮತ್ತು ಅಜಾಗರೂಕತೆ ಚಾಲನೆ ಎಂದು ಕೆ.ಆರ್.ಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಿಜೆಪಿ ಸಭೆ ಇದೆ ಅಂತಾ ಬೆಳಗ್ಗೆ 9 ಗಂಟೆಗೆ ಪ್ರಕಾಶ್ ಮನೆಯಿಂದ ಹೊರಟಿದ್ದರು. 12 ಗಂಟೆ ಸುಮಾರಿಗೆ ಅಪಘಾತ ನಡೆದಿತ್ತು. ಫಾರ್ಚೂನರ್ ಕಾರು ಚಾಲಕ ರಸ್ತೆಯಲ್ಲಿ ವಾಹನ ನಿಲ್ಲಿಸಿ ಹಿಂಬದಿ ಡೋರ್ ತೆಗೆದಿದ್ದ. ಈ ವೇಳೆ ಬೈಕ್ ಡೋರ್ ಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಪ್ರಕಾಶ್ ಅವರು ಆಯಾತಪ್ಪಿ ಬೈಕ್ ಸಮೇತ ರಸ್ತೆ ಮೇಲೆ ಬಿದಿದ್ದಾರೆ. ಇದೇ ಸಂದರ್ಭದಲ್ಲಿ ಅದೇ ರಸ್ತೆಯಲ್ಲಿ ಬರುತ್ತಿದ್ದ ಖಾಸಗಿ ಬಸ್ ಪ್ರಕಾಶ್ ಮೇಲೆ ಹರಿದು ಗಂಭೀರ ಗಾಯಗೊಂಡಿದ್ದರು.
ಕೂಡಲೇ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಪ್ರಕಾಶ್ ಸಾವನ್ನಪ್ಪಿದ್ದಾರೆ. ಘಟನೆ ಸಂಬಂಧ ಪೊಲೀಸರು ಇಬ್ಬರು ಚಾಲಕರ ಮೇಲೆ ಕೇಸ್ ದಾಖಲಿಸಿದ್ದಾರೆ. ಕೆಆರ್ ಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ…
ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…
ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…
ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…
ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…
ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…