ತಿರುವನಂತಪುರಂ : ವಿವಿಧ ಗುಂಪುಗಳ ನಡುವೆ ದ್ವೇಷ ಉತ್ತೇಜನಕಾರಿ ಹೇಳಿಕೆ ನೀಡಿದ್ದಾರೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಅವರ ವಿರುದ್ಧ ಕೇರಳ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಶೋಭಾ ಕರಂದ್ಲಾಜೆ ಅವರು, “ಕೇರಳವು ಇನ್ನೊಂದು ಕಾಶ್ಮೀರ ಆಗುವತ್ತ ಅಂಬೆಗಾಲು ಇಡುತ್ತಿದೆ. ಪೌರತ್ವ ತಿದ್ದುಪಡಿ ಕಾಯ್ದೆಗೆ ಬೆಂಬಲ ನೀಡಿದ ಹಿನ್ನಲೆಯಲ್ಲಿ ಮಲಪ್ಪುರಂನ ಕುಟ್ಟಿಪುರಂ ಪಂಚಾಯತ್‍ನ ಹಿಂದೂಗಳಿಗೆ ನೀರು ಸರಬರಾಜು ಮಾಡುವುದನ್ನು ನಿರಾಕರಿಸಲಾಗಿದೆ. ಈ ಪ್ರದೇಶಕ್ಕೆ ಈಗ ಸೇವಾ ಭಾರತಿ ನೀರು ಸರಬರಾಜು ಮಾಡುತ್ತಿದೆ” ಎಂದು ಜನವರಿ 22ರಂದು ಟ್ವೀಟ್ ಮಾಡಿದ್ದರು.
ನಂತರ ಈ ಟ್ವೀಟ್, ಕುಟ್ಟಿಪುರಂ ಜನರ ಧಾರ್ಮಿಕ ಸಾಮರಸ್ಯಕ್ಕೆ ಧಕ್ಕೆ ಉಂಟು ಮಾಡುತ್ತದೆ ಎಂದು ಸುಪ್ರೀಂ ಕೋರ್ಟ್ ವಕೀಲ ಮತ್ತು ಮಲಪ್ಪುರಂ ಮೂಲದ ಸುಭಾಷ್ ಚಂದ್ರನ್ ಕೆ ಆರ್ ಪೊಲೀಸರಿಗೆ ದೂರು ನೀಡಿ ಪ್ರಕರಣ ದಾಖಲಿಸಿಕೊಂಡಿದ್ದರು. ಹಾಗೆಯೇ ಈ ಪ್ರಕರಣದ ಮೊದಲ ಆರೋಪಿ ಶೋಭಾ ಕರಂದ್ಲಾಜೆ ಹಾಗು ಇತತರ ವಿರುದ್ಧ ಪ್ರಕರಣ ದಾಖಲು ಮಾಡಲಾಗಿತ್ತು.
ಕೇರಳ ಪೊಲೀಸರು ಶೋಭಾ ಕರಂದ್ಲಾಜೆ ಅವರ ವಿರುದ್ಧ ಐಪಿಸಿ ಸೆಕ್ಷನ್ 153 ಎ (ಧರ್ಮ, ಜನಾಂಗ ಆಧಾರದವಾಗಿ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು) ಅಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಪೊಲೀಸರು ಈ ಬಗ್ಗೆ ಸ್ಪಷ್ಟನೆ ನೀಡಿ, “ಈ ಪ್ರದೇಶದಲ್ಲಿ ಕಳೆದ 2 ತಿಂಗಳಿನಿಂದ ನೀರಿನ ಸಮಸ್ಯೆ ಉಂಟಾಗಿದೆ. ಹಾಗಾಗಿ ಹತ್ತಿರದ ವ್ಯಕ್ತಿಯೋರ್ವರು ಬೋರ್‌ನ ನೀರು ನೀಡುತ್ತಿದ್ದರು. ಆದರೆ ಈಗ ಕೇರಳ ರಾಜ್ಯ ವಿದ್ಯುತ್ ಮಂಡಳಿಯಿಂದ ಕೃಷಿ ಉದ್ದೇಶಕ್ಕಾಗಿ ಈ ಬೋರ್ ನೀರನ್ನು ಬಳಕೆ ಮಾಡಿದಲ್ಲಿ ನೀರು ನೀಡುವುದನ್ನು ನಿಲ್ಲಿಸಿದ್ದಾರೆ. ಆ ನಂತರ ಸೇವಾ ಭಾರತಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿತ್ತು. ಅದನ್ನು ಶೋಭಾ ಕರಂದ್ಲಾಜೆ ಅವರು ಈ ರೀತಿ ಟ್ವೀಟ್ ಮಾಡಿದ್ದಾರೆ” ಎಂದು ಹೇಳಿದ್ದಾರೆ.
ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.
ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್
8088827292
ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…