Featured

ಶೋಭಾ ಕರಂದ್ಲಾಜೆ ಸೋಲಿನ ಭಯದಿಂದ ಮೋದಿ ಹೆಸರಿನಲ್ಲಿ ಮತ ನೀಡಿ ಎಂದು ಹೇಳುತ್ತಿರುವುದು :ಪ್ರಮೋದ್‌ ಮಧ್ವರಾಜ್‌

ಉಡುಪಿ: ಕಳೆದ ಬಾರಿ ಮೋದಿ ಅಲೆಯಲ್ಲಿ ಗೆದ್ದವರು ಯಾವುದೇ ಅಭಿವೃದ್ಧಿ ಕೆಲಸ ಮಾಡದೆ ಹೆಸರನ್ನು ಉಳಿಸಿಕೊಳ್ಳಲಿಲ್ಲ. ತನ್ನ ಅಧಿಕಾರಾವಧಿಯಲ್ಲಿ ಜನರ ಸಮಸ್ಯೆಗೆ ಸ್ಪಂದಿಸದೆ ಈಗ ಮೋದಿ ಅವರ ಮುಖ ನೋಡಿ ಮತ ನೀಡಿ ಎಂದು ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಅವರು ಹೇಳುತ್ತಿರುವುದು ತನ್ನ ಸೋಲಿನ ಭಯದಿಂದ ಎಂದು ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಕಾಂಗ್ರೆಸ್‌- ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಪ್ರಮೋದ್‌ ಮಧ್ವರಾಜ್‌ ತಿಳಿಸಿದರು.

ಅವರು ಚಿಕ್ಕಮಗಳೂರಿನ ಉಪ್ಪಳ್ಳಿ ಕ್ರಾಸ್‌ನ ಬಹಿರಂಗ ಚುನಾವಣಾ ಸಭೆಯಲ್ಲಿ ಮತದಾರರನ್ನು ಉದ್ದೇಶಿಸಿ ಮಾತನಾಡಿದರು.

ಮೋದಿ ಅವರೂ ಜನತೆಗೆ ನೀಡಿದ ಭರವಸೆ ಈಡೇರಿಸಿಲ್ಲ. ಶೋಭಾ ಕರಂದ್ಲಾಜೆ ಚಿಕ್ಕಮಗಳೂರಿನ ನೀರಾವರಿ ಸಮಸ್ಯೆ, ನೀರಿನ ಸಮಸ್ಯೆ, ರೈತರ ಸಮಸ್ಯೆಗಾಗಲೀ ಹಾಗೆಯೇ ರಾಷ್ಟ್ರೀಯ ಹೆದ್ದಾರಿ ಸಮಸ್ಯೆಯನ್ನು ಪರಿಹರಿಸುವಲ್ಲಿ ಯಾವುದೇ ಕ್ರಮವನ್ನು ಕೈಗೊಂಡಿಲ್ಲ ಎಂದರು.

ಕಸ್ತೂರಿ ರಂಗನ್‌ ವರದಿ ಅನುಷ್ಠಾನದಂತೆ ಅರಣ್ಯ ಒತ್ತುವರಿ ತೆರವುಗೊಳಿಸುವ ಸಂದರ್ಭ ಮೂಲ ನಿವಾಸಿಗಳಿಗೆ ಪುನರ್ವಸತಿ ಕಲ್ಪಿಸದೆ ತೆರವುಗೊಳಿಸಬಾರದೆಂದು ಸುಪ್ರೀಂ ಕೋರ್ಟ್‌ನಲ್ಲಿ ವಾದ ಮಂಡಿಸಲು ವಕೀಲರನ್ನು ನೇಮಕ ಮಾಡುವಲ್ಲಿ ಕ್ರಮ ಕೈಗೊಳ್ಳದೆ ಶೋಭಾ ಅವರು ತನ್ನ ಜವಾಬ್ದಾರಿಯನ್ನು ನಿರ್ವಹಿಸಲು ವಿಫ‌ಲರಾಗಿದ್ದಾರೆ ಎಂದು ಪ್ರಮೋದ್‌ ಹೇಳಿದರು.

Vishwa News 24

Recent Posts

ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ  ಐಟಿ ಉದ್ಯೋಗಿ – vishwanews24

ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ  ಐಟಿ ಉದ್ಯೋಗಿ ಕಾರವಾರ: ರೀಲ್ಸ್ ಮಾಡಲು ಹೋಗಿ ಐಟಿ ಉದ್ಯೋಗಿಯೊಬ್ಬ  ಸಮುದ್ರಪಾಲಾದ ಘಟನೆ ಉತ್ತರ…

12 hours ago

ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ – vishwanews24

ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ ಚೆನ್ನೈ :ತಮಿಳುನಾಡು ಮುಖ್ಯಮಂತ್ರಿ, ನಟ ದಳಪತಿ…

12 hours ago

ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ – vishwanews24

ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ ಮಲ್ಪೆ :ಉಡುಪಿ ತಾಲೂಕಿನ ಕೊಡವೂರು ಗ್ರಾಮದ ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ…

12 hours ago

ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ – vishwanews24

ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ ಬೆಂಗಳೂರು: ಗೃಹಲಕ್ಷ್ಮಿ, ಗೃಹಜ್ಯೋತಿ ಯೊಜನೆಗಳಲ್ಲಿ ನಕಲಿ…

13 hours ago

ಕಾಸರಗೋಡು: ಬೇಕಲ ಕಡಲತೀರದಲ್ಲಿ ಸಮುದ್ರಪಾಲಾದ ಕೊಟ್ಟಾಯಂನ ಇಬ್ಬರು ವಿದ್ಯಾರ್ಥಿಗಳು; ಮತ್ತಿಬ್ಬರ ರಕ್ಷಣೆ – vishwanews24

ಕಾಸರಗೋಡು: ಬೇಕಲ ಕಡಲತೀರದಲ್ಲಿ ಸಮುದ್ರಪಾಲಾದ ಕೊಟ್ಟಾಯಂನ ಇಬ್ಬರು ವಿದ್ಯಾರ್ಥಿಗಳು; ಮತ್ತಿಬ್ಬರ ರಕ್ಷಣೆ ಕಾಸರಗೋಡು: ಬೇಕಲ ಕೋಟೆಯ ಸಮೀಪವಿರುವ ಪಳ್ಳಿಕೆರೆ ಕಡಲತೀರದಲ್ಲಿ…

13 hours ago

ಹಿಂದಿ ಕಿರುತೆರೆ ಜನಪ್ರಿಯ ನಟಿ ಸಂಚಿತಾ ಉಗಲೆ ನೇಣು ಬಿಗಿದುಕೊಂಡು ಆತ್ಮಹತ್ಯೆ – vishwanews24

ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮುಂಬೈ: ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ…

13 hours ago