ಅಯೋಧ್ಯೆ: ರೈಲ್ವೆ ನಿಲ್ದಾಣದ ಮರುವಿನ್ಯಾಸದ ಯೋಜನೆ ಬಳಿಕ ಇದೀಗ ಅಯೋಧ್ಯೆ ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ದರ್ಜೆಗೆ ಏರಿಸಲು ಉತ್ತರ ಪ್ರದೇಶ ಸರಕಾರ ನಿರ್ಧರಿಸಿದೆ.
ಅಯೋಧ್ಯೆಗೆ ಭೇಟಿ ನೀಡಿದ್ದ ಉ.ಪ್ರ. ನಾಗರಿಕ ವಿಮಾನಯಾನ ಸಚಿವ ನಂದಗೋಪಾಲ್ ಗುಪ್ತಾ ನಂದಿ, “ಅಯೋಧ್ಯೆ ವಿಮಾನ ನಿಲ್ದಾಣವನ್ನು ಜಾಗತಿಕ ದರ್ಜೆಗೆ ಏರಿಸಲಾಗುವುದು. ಏರ್‌ಪೋರ್ಟ್‌ಗೆ ಶ್ರೀರಾಮನ ಹೆಸರನ್ನು ಇಡಲಾಗುವುದು’ ಎಂದು ತಿಳಿಸಿದರು.
“ಏರ್‌ಪೋರ್ಟ್ ಕಾಮಗಾರಿ ಪೂರ್ಣಗೊಂಡ ಬಳಿಕ ವಿದೇಶದ ಪ್ರಮುಖ ನಗರ ಗಳಿಗೆ ವಾಯುಸಂಪರ್ಕ ಕಲ್ಪಿಸಲಾಗುತ್ತದೆ. 777 ಬೋಯಿಂಗ್ ಮತ್ತು ಡಬಲ್ ಡೆಕ್ಕರ್ ವಿಮಾನಗಳಿಗೆ ಲ್ಯಾಂಡಿಂಗ್ ಸೌಲಭ್ಯವಿ ರಲಿದೆ. ರಾಮಮಂದಿರ ನಿರ್ಮಾಣ ದೊಂದಿಗೆ ವಿಮಾನ ನಿಲ್ದಾಣದ ಮೊದಲ ಹಂತದ ಯೋಜನೆಗಳೂ ಪೂರ್ಣಗೊಳ್ಳಲಿವೆ’ ಎಂದು ಭರವಸೆ ನೀಡಿದರು.
ಪ್ರಸ್ತುತವಿರುವ ಸಣ್ಣ ವಿಮಾನ ನಿಲ್ದಾಣ ಅಭಿವೃದ್ಧಿಗೆ ಈ ಹಿಂದೆ 285 ಎಕರೆ ಭೂಮಿ ಯನ್ನು ಸ್ವಾಧೀನ ಪಡಿಸಿಕೊಳ್ಳಲಾಗಿತ್ತು. ಈಗ 600 ಎಕರೆಗೆ ವಿಮಾನ ನಿಲ್ದಾಣ ವಿಸ್ತರಿಸಲು ರಾಜ್ಯ ಸರಕಾರ ನಿರ್ಧರಿಸಿದೆ. ಈಗಾಗಲೇ ಅಯೋಧ್ಯೆ ಏರ್‌ಪೋರ್ಟ್‌ಗೆ 525 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗಿದೆ.
ಪ್ರಾದೇಶಿಕ ಸಂಪರ್ಕ ಯೋಜನೆ (ಆರ್‌ಸಿಎಸ್) ಅಡಿಯಲ್ಲಿ ರಾಜ್ಯ ಸರಕಾರ ಅಯೋಧ್ಯೆಯಲ್ಲಿ ವಿಮಾನ ನಿಲ್ದಾಣ ಅಭಿವೃದ್ಧಿಪಡಿಸಲು ಉ.ಪ್ರ., ಕೇಂದ್ರ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು. ಈಗ ಅದನ್ನು ನವೀಕರಿಸಿ, ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಾಗಿಸಲು ನಿರ್ಧರಿಸಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…