ಒಡಿಯೂರು: ಅಯೋಧ್ಯೆಯಲ್ಲಿ ಶ್ರೀರಾಮಚಂದ್ರನ ಮಂದಿರ ನಿರ್ಮಾಣಕ್ಕೆ ಮುಹೂರ್ತ ನಿಗದಿಯಾಗಿರುವುದು, ರಾಮಭಕ್ತರ ಅರ್ಥಾತ್ ಪ್ರಜ್ಞಾವಂತ ಪ್ರಜೆಗಳ ಕನಸು ನನಸಾಗುವ ಸಮಯ ಒದಗಿ ಬಂದಿರುವುದು ಸಂತಸದ ವಿಚಾರ. ಭಾರತೀಯ ಪರಂಪರೆಯಲ್ಲಿ ರಾಮಾಯಣ ಮಹಾಭಾರತ ಸಂಸ್ಕೃತಿಯ ಕಣ್ಣುಗಳಿದ್ದಂತೆ ಎಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀಗುರುದೇವಾನಂದ ಸ್ವಾಮೀಜಿ ತಿಳಿಸಿದ್ದಾರೆ.
‘ರಾಮ’ ಎನ್ನುವ ಎರಡಕ್ಷರವೇ ಅದ್ಭುತವಾದುದು. ಪರಿಶುದ್ಧವಾದ ಆಕಾಶ, ಅಗ್ನಿ, ವಾಯು ತತ್ವಗಳ ಚಿಂತನೆ ಅಡಗಿರುವುದಲ್ಲದೆ ಪಂಚಭೂತಾತ್ಮಗಳ ಸರ್ವಸ್ವವೂ ಇದರಲ್ಲಿದೆ. ಸುಲಲಿತವಾಗಿ ‘ರಾಮ’ ಎನ್ನಲು ಅನುಕೂಲವಾದುದು. ‘ಆ ಮಂತ್ರ ಈ ಮಂತ್ರ ಜಪಿಸಿ ನೀ ಕೆಡಬೇಡ, ರಾಮ ಮಂತ್ರವ ಜಪಿಸೋ…’ ಎಂದು ದಾಸರು ಕೊಂಡಾಡಿದ್ದಾರೆ.
ಸಾಕ್ಷಾತ್ ಶಿವನೇ ತನ್ನ ಭಾಮೆ ಶಿವೆಗೆ ರಾಮ ಮಂತ್ರವನ್ನು ಬೋಧಿಸಿದ. ಶ್ರೀರಾಮ ಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸವೆಂದರೆ ಧರ್ಮದ ಪುನರುತ್ಥಾನಕ್ಕೆ ನಾಂದಿಯೇ ಸರಿ. ಈ ಸಂಬಂಧ ಮನೆಮನಗಳಲ್ಲಿ ಶ್ರೀರಾಮಜ್ಯೋತಿಯನ್ನು ಬೆಳಗಿಸೋಣ. ಸತ್ಸಂಕಲ್ಪವನ್ನು ಮಾಡೋಣ. ಶೀಘ್ರ ರಾಮ ಮಂದಿರ ನಿರ್ಮಾಣಗೊಂಡು ವಿಶ್ವಕ್ಕೆ ಮಾದರಿಯಾಗಲಿ ಎಂದರು.
ಪ್ರಧಾನಮಂತ್ರಿಯವರ ಮೂಲಕ ಸುಮುಹೂರ್ತದಲ್ಲಿ ಶಿಲಾನ್ಯಾಸ ನಡೆಯುವುದು ಅರ್ಥಪೂರ್ಣವಾಗಿದೆ. ರಾಮ ಪ್ರೇಮವೆಂದರೆ ಅದು ರಾಷ್ಟ್ರ ಪ್ರೇಮವೇ ಸರಿ.
ರಾಮತತ್ವದಲ್ಲಿ ರಾಷ್ಟ್ರೀಯತೆಯನ್ನು ಬೆಳಗುವ ಶಕ್ತಿಯಿದೆ. ಆಧ್ಯಾತ್ಮದ ಅಂದವಿದೆ. ನಾವೆಲ್ಲರೂ ಮಂದಿರ ನಿರ್ಮಾಣಕ್ಕೆ ಕೈಲಾದ ಸೇವೆಯನ್ನು ಆತ್ಮಾರ್ಥವಾಗಿ ಸಲ್ಲಿಸೋಣ. ಆತ್ಮ ಜ್ಞಾನಕ್ಕೆ ಇನ್ನೊಂದು ಹೆಸರಾದ ಆಂಜನೇಯನ ಅನುಗ್ರಹ ಜತೆಗಿರುವಾಗ ಎಲ್ಲವೂ ನಿರ್ವಿಘ್ನವಾಗಿ, ಸಾಂಗವಾಗಿ ನಡೆಯಲಿ ಎಂದು ಸಂದೇಶದಲ್ಲಿ ತಿಳಿಸಿದ್ದಾರೆ
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…