ಶ್ರೀಕಿ ವ್ಯಾಲೆಟ್‌ನಿಂದ ಬಿಟ್ ಕಾಯಿನ್ ನಾಪತ್ತೆಯಾಗಿಲ್ಲ – ಪೊಲೀಸರಿಂದ ಸ್ಪಷ್ಟನೆ

Featured, ರಾಜ್ಯ ನ್ಯೂಸ್

ಬೆಂಗಳೂರು: ಶ್ರೀಕಿ ಅಲಿಯಾಸ್‌ ಶ್ರೀಕೃಷ್ಣನ ವ್ಯಾಲೆಟ್‌ನಿಂದ ಯಾವುದೇ ಬಿಟ್ ಕಾಯಿನ್ ವರ್ಗಾವಣೆ ಆಗಿಲ್ಲ ಮತ್ತು ನಾಪತ್ತೆಯಾಗಿಲ್ಲ ಎಂದು ಬೆಂಗಳೂರು ಪೊಲೀಸರು ಸ್ಪಷ್ಟನೆ ನೀಡಿದ್ದಾರೆ.
ಬಿಟ್‌ ಕಾಯಿನ್‌ ಹಗರಣ ಜೋರಾಗುತ್ತಿದ್ದಂತೆ ಬೆಂಗಳೂರು ನಗರ ಪೊಲೀಸರು ಈ ಸಂಬಂಧ ಸುದೀರ್ಘ ವಿವರಗಳಿರುವ ಮಾಧ್ಯಮ ಪ್ರಕಟಣೆಯನ್ನು ಬಿಡುಗಡೆ ಮಾಡಿದ್ದಾರೆ.