Featured

ಶ್ರೀಗೆ ವಿಷಪ್ರಾಷನದ ಶಂಕೆ- ಮರಣೋತ್ತರ ಪರೀಕ್ಷೆಗೆ ಮೃತದೇಹ ರವಾನೆ- ವೈದ್ಯಕೀಯ ಅಧಿಕ್ಷಕ ಅವಿನಾಶ್ ಶೆಟ್ಟಿ ಹೇಳಿಕೆ

ಉಡುಪಿ: ‘ಶೀರೂರು ಮಠದ ಲಕ್ಷ್ಮೀವರ ತೀರ್ಥರ ದೇಹದಲ್ಲಿ ವಿಷದ ಅಂಶ ಪತ್ತೆಯಾಗಿದೆ. ಈ ಕುರಿತು ಪೊಲೀಸರಿಗೆ ಮಾಹಿತಿ ನೀಡಿದ್ದೇವೆ’ ಎಂದು ಶ್ರೀಗಳಿಗೆ ಚಿಕಿತ್ಸೆ ನೀಡಿದ ವೈದ್ಯ ಡಾ.ಅವಿನಾಶ್‌ ಶೆಟ್ಟಿ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.
‘ಹೊಟ್ಟೆನೋವಿನಿಂದ ಬಳಲುತ್ತಿದ್ದ ಸ್ವಾಮೀಜಿಗೆ ಚಿಕಿತ್ಸೆ ಕೊಟ್ಟೆವು. ಆದರೆ ಬಹುಅಂಗಗಳ ವೈಫಲ್ಯದಿಂದ ಸ್ವಾಮೀಜಿ ಮೃತಪಟ್ಟರು’ ಎಂದು ಅವರು ಸ್ಪಷ್ಟಪಡಿಸಿದರು.

‘ಶ್ರೀಗಳನ್ನು ಉಳಿಸಿಕೊಳ್ಳಲು ನಾವು ನಾವು ಸತತ ಪ್ರಯತ್ನ ಪಟ್ವಿ. ಆದರೆ ಪ್ರಯೋಜನವಾಗಲಿಲ್ಲ. ಬೆಳಿಗ್ಗೆ 8.30ಕ್ಕೆ ಅವರು ನಿಧನರಾದರು. ವಿಷಪ್ರಾಶನವಾಗಿರುವ ಶಂಕೆ ಇದೆ. ಈ ಕುರಿತು ಪೊಲೀಸ್ ಇಲಾಖೆಗೆ ಮಾಹಿತಿ ಕೊಟ್ಟಿದ್ದೇವೆ’ ಎಂದು ಅವರು ಹೇಳಿದರು.

ತನಿಖೆಗೆ ಒತ್ತಾಯ

ಲಕ್ಷ್ಮೀವರ ತೀರ್ಥ ಸ್ವಾಮೀಜಿ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಕೆಲ ಸ್ವಾಮೀಜಿಗಳು ಸಹ ಸಮಗ್ರ ತನಿಖಗೆ ಒತ್ತಾಯಿಸಿದ್ದಾರೆ.

ಸ್ವಾಮೀಜಿ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿರುವ ಪೇಜಾವರ ಮಠದಲ್ಲಿ ಈ ಹಿಂದೆ ಪೀಠತ್ಯಾಗ ಮಾಡಿದ್ದ ಕಿರಿಯ ಯತಿ ವಿಶ್ವ ವಿಜಯ ತೀರ್ಥರು ‘ಲಕ್ಷ್ಮೀವರ ತೀರ್ಥರದು ನೈಸರ್ಗಿಕ ಸಾವು ಅಲ್ಲ. ಈ ಕುರಿತು ಸಮಗ್ರ ತನಿಖೆ ಆಗಬೇಕು’ ಎಂದು ಒತ್ತಾಯಿಸಿದ್ದಾರೆ.

‘ಪಟ್ಟದ ದೇವರ ವಿಚಾರವನ್ನು ಲಕ್ಷ್ಮೀವರ ತೀರ್ಥರು ಅತಿಯಾಗಿ ಮನಸಿಗೆ ಹಚ್ಚಿಕೊಂಡಿದ್ದರು. ಅವರ ಆರೋಗ್ಯ ಚೆನ್ನಾಗಿತ್ತು. ಸಾಯುವಂಥ ಅನಾರೋಗ್ಯ ಇರಲಿಲ್ಲ. ನ್ಯಾಯಾಲಯದಲ್ಲಿ ಹೋರಾಟ ನಡೆಸಲು ಸಿದ್ಧತೆ ಮಾಡಿಕೊಂಡಿದ್ದರು’ ಎಂದು ಕೇಮಾರು ಮಠದ ಶ್ರೀಗಳು ಹೇಳಿದ್ದಾರೆ.

‘ವನಮಹೋತ್ಸವ ಕಾರ್ಯಕ್ರಮದ ನಂತರ ಆಹಾರ ಸೇವಿಸಿದ್ದರಿಂದ ಅವರಿಗೆ ಫುಡ್‌ಫಾಯ್ಸನ್ ಆಗಿದೆ ಎನ್ನುವುದು ಸುಳ್ಳು. ಒಂದು ವೇಳೆ ಹೀಗಾಗಿದ್ದರೆ ಅವರ ಜೊತೆಯಲ್ಲಿದ್ದ ಎಲ್ಲರಿಗೂ ವಾಂತಿಯಾಗಬೇಕಿತ್ತು’ ಎಂದು ಅವರು ಅನುಮಾನ ವ್ಯಕ್ತಪಡಿಸಿದ್ದಾರೆ.

‘ಶ್ರೀಗಳ ಅನುಮಾನಾಸ್ಪದ ಸಾವನ್ನು ಸರ್ಕಾರ ಗಂಭೀರವಾಗಿ ತೆಗೆದುಕೊಳ್ಳಬೇಕು. ಸಮಗ್ರ ತನಿಖೆ ನಡೆಸಬೇಕು’ ಎಂದು ಆಗ್ರಹಿಸಿರುವ ಅವರು, ‘ಲಕ್ಷ್ಮೀವರ ತೀರ್ಥರು ಬಡವರ ಪರ ಇದ್ದ, ಜಾತಿಮತದ ಎಲ್ಲೆ ಮೀರಿದ ಸ್ವಾಮೀಜಿ’ ಎಂದು ನೆನಪಿಸಿಕೊಂಡಿದ್ದಾರೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

20 hours ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

2 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

2 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

2 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

2 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

2 days ago