Featured

ಶ್ರೀನಗರದಲ್ಲಿ ಕಾಶ್ಮೀರ ಧ್ವಜದ ಜೊತೆಗೆ ಹಾರಾಡುತ್ತಿರುವ ಭಾರತದ ತ್ರಿವರ್ಣ ಧ್ವಜ -Vishwanews24

ಶ್ರೀನಗರ:ಕಣಿವೆ ರಾಜ್ಯದ ರಾಜಧಾನಿ ಶ್ರೀನಗರದಲ್ಲಿರುವ ನಾಗರಿಕ ಸಚಿವಾಲಯದ ಕಟ್ಟಡದ ಮೇಲೆ ಜಮ್ಮು ಮತ್ತು ಕಾಶ್ಮೀರದ ಧ್ವಜದ ಜತೆಯಲ್ಲಿಯೇ ತ್ರಿವರ್ಣ ಧ್ವಜ ಹಾರಾಡುತ್ತಿರುವುದು ವಿಶೇಷವಾಗಿದೆ.

ಸಂವಿಧಾನದ ಆರ್ಟಿಕಲ್​ 370ರ ಪ್ರಕಾರ ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ಮತ್ತು ಆರ್ಟಿಕಲ್​ 35(ಎ) ಪ್ರಕಾರ ಜಮ್ಮು ಕಾಶ್ಮೀರದ ಜನತೆ ಹೊರತುಪಡಿಸಿ ಹೊರಗಿನವರು ಕಾಶ್ಮೀರದಲ್ಲಿ ಆಸ್ತಿ ಖರೀದಿ ಮತ್ತು ಸ್ಥಿರ ಆಸ್ತಿಯನ್ನು ಹೊಂದಿ ಶಾಶ್ವತವಾಗಿ ನೆಲೆಸುವ ಆಗಿಲ್ಲ ಎಂಬ ವಿಶೇಷ ಅಧಿಕಾರವನ್ನು ಕೇಂದ್ರ ಸರ್ಕಾರ ಕಳೆದ ಸೋಮವಾರ ರದ್ದು ಮಾಡಿದೆ. ಅಲ್ಲದೆ, ಜಮ್ಮು-ಕಾಶ್ಮೀರ ರಾಜ್ಯವನ್ನು ಎರಡು ಕೇಂದ್ರಾಡಳಿತ ಪ್ರದೇಶವನ್ನಾಗಿ ವಿಭಜಿಸುವ ಮಹತ್ವದ ಬಿಲ್​ ಅನ್ನು ಸೋಮವಾರ ರಾಜ್ಯಸಭೆಯಲ್ಲಿ ಪಾಸ್​ ಮಾಡಲಾಯಿತು.

ಸಂವಿಧಾನದಲ್ಲಿ ಆರ್ಟಿಕಲ್​ 370 ಮತ್ತು 35(ಎ)ರ ಅಡಿಯಲ್ಲಿ ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ಮತ್ತು ಅಧಿಕಾರವನ್ನು ಕೇಂದ್ರ ಸರ್ಕಾರ ರದ್ದು ಮಾಡಿದ ಬಳಿಕ ಕಣಿವೆ ರಾಜ್ಯದಲ್ಲಿ ಬದಲಾವಣೆ ಗಾಳಿ ಬೀಸುತ್ತಿದೆ. ಮಾಜಿ ಉಪಮುಖ್ಯಮಂತ್ರಿ ನಿರ್ಮಲ್​ ಸಿಂಗ್​ ಅವರು ತಮ್ಮ ಕಾರಿನ ಮೇಲಿದ್ದ ಜಮ್ಮ ಮತ್ತು ಕಾಶ್ಮೀರದ ಧ್ವಜವನ್ನು ಮಂಗಳವಾರ ತೆಗೆದು ಹಾಕಿದ್ದಾರೆ.

ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ಮತ್ತು ಅಧಿಕಾರದ ವಿಧಿಯನ್ನು ರದ್ದುಗೊಳಿಸಿರುವ ಬಿಲ್​ ಸಂಸತ್ತಿನಲ್ಲಿ ಪಾಸ್​ ಆಗಿದೆ. ಇದರಿಂದ ನೆಮ್ಮದಿ ದೊರಕಿದೆ. ಕೊನೆಗೂ ನಮ್ಮ ಹೊರೆಯನ್ನು ತೆಗೆದು ಹೊರಗಡೆ ಎಸೆದಿದ್ದೇವೆ ಎಂದು ಹೇಳಿದರು.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

5 hours ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

1 day ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

1 day ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

1 day ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

1 day ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

1 day ago