ಶ್ರೀನಗರ:ಕಣಿವೆ ರಾಜ್ಯದ ರಾಜಧಾನಿ ಶ್ರೀನಗರದಲ್ಲಿರುವ ನಾಗರಿಕ ಸಚಿವಾಲಯದ ಕಟ್ಟಡದ ಮೇಲೆ ಜಮ್ಮು ಮತ್ತು ಕಾಶ್ಮೀರದ ಧ್ವಜದ ಜತೆಯಲ್ಲಿಯೇ ತ್ರಿವರ್ಣ ಧ್ವಜ ಹಾರಾಡುತ್ತಿರುವುದು ವಿಶೇಷವಾಗಿದೆ.
ಸಂವಿಧಾನದ ಆರ್ಟಿಕಲ್ 370ರ ಪ್ರಕಾರ ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ಮತ್ತು ಆರ್ಟಿಕಲ್ 35(ಎ) ಪ್ರಕಾರ ಜಮ್ಮು ಕಾಶ್ಮೀರದ ಜನತೆ ಹೊರತುಪಡಿಸಿ ಹೊರಗಿನವರು ಕಾಶ್ಮೀರದಲ್ಲಿ ಆಸ್ತಿ ಖರೀದಿ ಮತ್ತು ಸ್ಥಿರ ಆಸ್ತಿಯನ್ನು ಹೊಂದಿ ಶಾಶ್ವತವಾಗಿ ನೆಲೆಸುವ ಆಗಿಲ್ಲ ಎಂಬ ವಿಶೇಷ ಅಧಿಕಾರವನ್ನು ಕೇಂದ್ರ ಸರ್ಕಾರ ಕಳೆದ ಸೋಮವಾರ ರದ್ದು ಮಾಡಿದೆ. ಅಲ್ಲದೆ, ಜಮ್ಮು-ಕಾಶ್ಮೀರ ರಾಜ್ಯವನ್ನು ಎರಡು ಕೇಂದ್ರಾಡಳಿತ ಪ್ರದೇಶವನ್ನಾಗಿ ವಿಭಜಿಸುವ ಮಹತ್ವದ ಬಿಲ್ ಅನ್ನು ಸೋಮವಾರ ರಾಜ್ಯಸಭೆಯಲ್ಲಿ ಪಾಸ್ ಮಾಡಲಾಯಿತು.
ಸಂವಿಧಾನದಲ್ಲಿ ಆರ್ಟಿಕಲ್ 370 ಮತ್ತು 35(ಎ)ರ ಅಡಿಯಲ್ಲಿ ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ಮತ್ತು ಅಧಿಕಾರವನ್ನು ಕೇಂದ್ರ ಸರ್ಕಾರ ರದ್ದು ಮಾಡಿದ ಬಳಿಕ ಕಣಿವೆ ರಾಜ್ಯದಲ್ಲಿ ಬದಲಾವಣೆ ಗಾಳಿ ಬೀಸುತ್ತಿದೆ. ಮಾಜಿ ಉಪಮುಖ್ಯಮಂತ್ರಿ ನಿರ್ಮಲ್ ಸಿಂಗ್ ಅವರು ತಮ್ಮ ಕಾರಿನ ಮೇಲಿದ್ದ ಜಮ್ಮ ಮತ್ತು ಕಾಶ್ಮೀರದ ಧ್ವಜವನ್ನು ಮಂಗಳವಾರ ತೆಗೆದು ಹಾಕಿದ್ದಾರೆ.
ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ಮತ್ತು ಅಧಿಕಾರದ ವಿಧಿಯನ್ನು ರದ್ದುಗೊಳಿಸಿರುವ ಬಿಲ್ ಸಂಸತ್ತಿನಲ್ಲಿ ಪಾಸ್ ಆಗಿದೆ. ಇದರಿಂದ ನೆಮ್ಮದಿ ದೊರಕಿದೆ. ಕೊನೆಗೂ ನಮ್ಮ ಹೊರೆಯನ್ನು ತೆಗೆದು ಹೊರಗಡೆ ಎಸೆದಿದ್ದೇವೆ ಎಂದು ಹೇಳಿದರು.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…