ಶ್ರೀನಿವಾಸ ವಿಶ್ವವಿದ್ಯಾಲಯದಿಂದ ಪೇಜಾವರ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿಗಳಿಗೆ ಗೌರವ ಡಾಕ್ಟರೇಟ್ – Vishwanews24
ಮಂಗಳೂರು : ಶ್ರೀನಿವಾಸ ವಿಶ್ವವಿದ್ಯಾಲಯವು ಶಿಕ್ಷಣ, ಆಧ್ಯಾತ್ಮ ಮತ್ತು ಸಾಮಾಜಿಕ ಸುಧಾರಣೆಗೆ ಜೀವಿತಾವಧಿ ಕೊಡುಗೆ ನೀಡಿದ ಪೇಜಾವರ ಶ್ರೀಗಳಿಗೆ ಫೆ. 15 ರಂದು ಪದವಿ ಪ್ರದಾನ,ಘಟಿಕೋತ್ಸವ ಸಮಾರಂಭದಲ್ಲಿ ಪೇಜಾವರ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿ ಅವರನ್ನು ಗೌರವ ಡಾಕ್ಟರೇಟ್ ಗೆ ಆಯ್ಕೆ ಮಾಡಿದೆ.
ಫೆ. 15 ರಂದು ಪದವಿ ಪ್ರದಾನ, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿವಿ ಉಪಕುಲಪತಿ ಡಾ.ಎಸ್ .ಸಚ್ಚಿದಾನಂದ ಪದವೀಧರರು ಮತ್ತು ರ್ಯಾಂಕ್ ವಿಜೇತರಿಗೆ ಪ್ರಮಾಣ ಪತ್ರ ವಿತರಿಸುವರು. ಶ್ರೀನಿವಾಸ ವಿವಿ ಕುಲಪತಿ, ಎ.ಶಾಮ್ ರಾವ್ ಪೌಂಡೇಶನ್ ಅಧ್ಯಕ್ಷ ಸಿಎಎ ರಾಘವೇಂದ್ರ ರಾವ್ ಅಧ್ಯಕ್ಷತೆ ವಹಿಸುವರು ಎಂದು ಶ್ರೀನಿವಾಸ್ ಡೆಂಟಲ್ ಕಾಲೇಜಿನ ಡೀನ್ ಡಾ.ಮನೋಜ್ ವರ್ಮಾ ತಿಳಿಸಿದರು.

