ಶ್ರೀರಂಗಪಟ್ಟಣ: ಶ್ರೀರಂಗಪಟ್ಟಣದ ಜಾಮಿಯಾ ಮಸೀದಿ ಕುರಿತು ಸಾಮಾಜಿಕ ಜಾಲತಾಣದಲ್ಲಿ ವಿವಾದಿತ ಹೇಳಿಕೆ ನೀಡಿ ವಿಡಿಯೋ ಹರಿಬಿಟ್ಟಿದ್ದ ಕಾಳಿ ಮಠದ ಋಷಿಕುಮಾರಸ್ವಾಮಿ ಅವರನ್ನು ಮಂಗಳವಾರ ವಶಕ್ಕೆ ಪಡೆದ ಪೊಲೀಸರು ಶ್ರೀರಂಗಪಟ್ಟಣ ಠಾಣೆಗೆ ಕರೆತಂದು ವಿಚಾರಣೆ ನಡೆಸಿ ಜೆಎಂಎಫ್ಸಿ ಕೋರ್ಟ್ಗೆ ಹಾಜರು ಪಡಿಸಿದ್ದಾರೆ.
ಪೊಲೀಸ್ ಠಾಣೆಗೆ ಕರೆತರುವ ಮುನ್ನ ಆರೋಗ್ಯ ತಪಾಸಣೆ ನಡೆಸಲಾಯಿತು. ಈ ವೇಳೆ ಮಾಧ್ಯಮಗಳ ಮುಂದೆ ಮಾತನಾಡಿದ ಸ್ವಾಮೀಜಿ, ನಾನು ಇತ್ತೀಚೆಗೆ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದ ನಮ್ಮಮ್ಮ ಸೂಪರ್ ಸ್ಟಾರ್ ಖ್ಯಾತಿಯ ಸಮನ್ವಿ ಅಸ್ಥಿ ವಿಸರ್ಜನೆ ನಿಮಿತ್ತ ಭಾನುವಾರ ಶ್ರೀರಂಗಪಟ್ಟಣಕ್ಕೆ ಆಗಮಿಸಿದ್ದೆ. ಈ ವೇಳೆ ಅದೇ ರಸ್ತೆಯಲ್ಲಿ ನನ್ನ ಕಣ್ಣಿಗೆ ಕಾಣಿಸಿತು ಅದು ಮಸೀದಿ ಅಲ್ಲ, ನನ್ನ ಹನುಮ ದೇಗುಲ. ಅ ನನ್ನ ಹೇಳಿಕೆಗೆ ಈಗಲೂ ಬದ್ಧನಿದ್ದೇನೆ. ಅಯೋಧ್ಯೆಯಲ್ಲಿ ರಾಮ ಮಂದಿರ. ಅದೇ ರೀತಿ ಶ್ರೀರಂಗಪಟ್ಟಣದಲ್ಲಿ ಹನುಮ ಮಂದಿರ ಕಟ್ಟುತ್ತೇವೆ. ಮಸೀದಿ ನನಗೆ ದೇವಾಲಯದ ರೀತಿ ಕಾಣಿಸಿದೆ. ಅದನ್ನೇ ಹೇಳಿದ್ದೇನೆ. ಹಿಂದುಪರ ಸಂಘಟನೆಗಳೆಲ್ಲ ಒಂದಾಗಿರಿ, ಶ್ರೀರಂಗಪಟ್ಟಣದಲ್ಲಿ ಮತ್ತೊಮ್ಮೆ ಹನುಮ ಮಂದಿರ ಕಟ್ಟೇ ಕಟ್ಟುತ್ತೀವಿ ಎಂದರು.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…