Featured

ಶ್ರೀಲಂಕಾದಲ್ಲಿ ಭಾರೀ ಮಳೆಯಿಂದ ಪ್ರವಾಹ, ಭೂಕುಸಿತ; ಮೃತರ ಸಂಖ್ಯೆ 56ಕ್ಕೆ ಏರಿಕೆ – vishwanews24

ಶ್ರೀಲಂಕಾದಲ್ಲಿ ಭಾರೀ ಮಳೆಯಿಂದ ಪ್ರವಾಹ, ಭೂಕುಸಿತ; ಮೃತರ ಸಂಖ್ಯೆ 56ಕ್ಕೆ ಏರಿಕೆ –600ಕ್ಕೂ ಹೆಚ್ಚು ಮನೆಗಳಿಗೆ ತೀವ್ರ ಹಾನಿ

ಕೊಲಂಬೊ: ಶ್ರೀಲಂಕಾದಲ್ಲಿಸುರಿಯುತ್ತಿರುವ ನಿರಂತರ ಮಳೆಯಿಂದ ಹಲವೆಡೆ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಇದರೊಂದಿಗೆ ಅಲ್ಲಲ್ಲಿ ಭೂಕುಸಿತಗಳೂ  ಸಂಭವಿಸಿದ್ದು, ಈವರೆಗೆ ಮೃತಪಟ್ಟವರ ಸಂಖ್ಯೆ 56ಕ್ಕೆ ಏರಿಕೆಯಾಗಿದೆ ಎಂದು ವರದಿಯಾಗಿದೆ.

ನಿರಂತರ ಮಳೆಯಿಂದಾಗಿ ಮನೆಗಳು, ಹೊಲಗಳು, ರಸ್ತೆಗಳು ಜಲಾವೃತವಾಗಿದ್ದು, ಭೂಕುಸಿತ ಸಂಭವಿಸಿದೆ. ಇದುವರೆಗೆ 600ಕ್ಕೂ ಹೆಚ್ಚು ಮನೆಗಳು ತೀವ್ರ ಹಾನಿಗೊಳಗಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹೀಗಾಗಿ ಶುಕ್ರವಾರ (ಇಂದು) ಎಲ್ಲಾ ಸರ್ಕಾರಿ ಕಚೇರಿಗಳು ಮತ್ತು ಶಾಲೆಗಳಿಗೆ ಶ್ರೀಲಂಕಾ ಸರ್ಕಾರ  ರಜೆ ಘೋಷಣೆ ಮಾಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಳೆಯ ವಾತಾವರಣ ಮುಂದುವರಿದರೆ, ಬಂದ್‌ ಮುಂದುವರಿಯಲಿದೆ ಎಂಬುದಾಗಿಯೂ ಹೇಳಿದ್ದಾರೆ.

ರಾಜಧಾನಿ ಕೊಲಂಬೊದಿಂದ ಸುಮಾರು 300 ಕಿಲೋಮೀಟರ್ ಪೂರ್ವಕ್ಕೆ ಇರುವ ಬದುಲ್ಲಾ ಮತ್ತು ನುವಾರ ಎಲಿಯಾ ಕೇಂದ್ರ ಚಹಾ ಬೆಳೆಯುವ ಪ್ರದೇಶಗಳಲ್ಲಿ ಉಂಟಾದ ಭೂಕುಸಿತದಲ್ಲಿ 25ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ, 21 ಜನ ಕಾಣೆಯಾಗಿದ್ದಾರೆ, 14 ಮಂದಿ ಗಾಯಗೊಂಡಿದ್ದಾರೆ ಎಂದು ಸರ್ಕಾರದ ವಿಪತ್ತು ನಿರ್ವಹಣಾ ಕೇಂದ್ರ ಮಾಹಿತಿ ನೀಡಿದೆ.

ಮತ್ತೊಂದು ಕಡೆ ರಕ್ಷಣಾ ತಂಡಗಳು ಭರದ ಕಾರ್ಯಾಚರಣೆ ನಡೆಸುತ್ತಿವೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

2 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

2 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

2 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

2 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

2 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

2 days ago