ಕೊಲಂಬೊ: ಶ್ರೀಲಂಕಾದಲ್ಲಿಸುರಿಯುತ್ತಿರುವ ನಿರಂತರ ಮಳೆಯಿಂದ ಹಲವೆಡೆ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಇದರೊಂದಿಗೆ ಅಲ್ಲಲ್ಲಿ ಭೂಕುಸಿತಗಳೂ ಸಂಭವಿಸಿದ್ದು, ಈವರೆಗೆ ಮೃತಪಟ್ಟವರ ಸಂಖ್ಯೆ 56ಕ್ಕೆ ಏರಿಕೆಯಾಗಿದೆ ಎಂದು ವರದಿಯಾಗಿದೆ.
ನಿರಂತರ ಮಳೆಯಿಂದಾಗಿ ಮನೆಗಳು, ಹೊಲಗಳು, ರಸ್ತೆಗಳು ಜಲಾವೃತವಾಗಿದ್ದು, ಭೂಕುಸಿತ ಸಂಭವಿಸಿದೆ. ಇದುವರೆಗೆ 600ಕ್ಕೂ ಹೆಚ್ಚು ಮನೆಗಳು ತೀವ್ರ ಹಾನಿಗೊಳಗಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹೀಗಾಗಿ ಶುಕ್ರವಾರ (ಇಂದು) ಎಲ್ಲಾ ಸರ್ಕಾರಿ ಕಚೇರಿಗಳು ಮತ್ತು ಶಾಲೆಗಳಿಗೆ ಶ್ರೀಲಂಕಾ ಸರ್ಕಾರ ರಜೆ ಘೋಷಣೆ ಮಾಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಳೆಯ ವಾತಾವರಣ ಮುಂದುವರಿದರೆ, ಬಂದ್ ಮುಂದುವರಿಯಲಿದೆ ಎಂಬುದಾಗಿಯೂ ಹೇಳಿದ್ದಾರೆ.
ರಾಜಧಾನಿ ಕೊಲಂಬೊದಿಂದ ಸುಮಾರು 300 ಕಿಲೋಮೀಟರ್ ಪೂರ್ವಕ್ಕೆ ಇರುವ ಬದುಲ್ಲಾ ಮತ್ತು ನುವಾರ ಎಲಿಯಾ ಕೇಂದ್ರ ಚಹಾ ಬೆಳೆಯುವ ಪ್ರದೇಶಗಳಲ್ಲಿ ಉಂಟಾದ ಭೂಕುಸಿತದಲ್ಲಿ 25ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ, 21 ಜನ ಕಾಣೆಯಾಗಿದ್ದಾರೆ, 14 ಮಂದಿ ಗಾಯಗೊಂಡಿದ್ದಾರೆ ಎಂದು ಸರ್ಕಾರದ ವಿಪತ್ತು ನಿರ್ವಹಣಾ ಕೇಂದ್ರ ಮಾಹಿತಿ ನೀಡಿದೆ.
ಮತ್ತೊಂದು ಕಡೆ ರಕ್ಷಣಾ ತಂಡಗಳು ಭರದ ಕಾರ್ಯಾಚರಣೆ ನಡೆಸುತ್ತಿವೆ.
ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…
ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…
ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…
ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…
ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…
ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…