Featured

ಶ್ರೀಲಂಕಾ ಬಾಂಬ್ ಸ್ಟೋಟ : ಸಾವಿನ ಸಂಖ್ಯೆ 290ಕ್ಕೆ ಏರಿಕೆ ;ನೆಲಮಂಗಲದ ಇಬ್ಬರು ಸಾವು, ಐದು ಮಂದಿ ನಾಪತ್ತೆ – Vishwanews24

ಬೆಂಗಳೂರು:ಈಸ್ಟರ್ ದಿನವಾದ ರವಿವಾರ ದ್ವೀಪರಾಷ್ಟ್ರ ಶ್ರೀಲಂಕಾದಲ್ಲಿ ಸಂಭವಿಸಿದ್ದ ಭೀಕರ ಆತ್ಮಹತ್ಯಾ ಬಾಂಬ್ ದಾಳಿಯಲ್ಲಿ ಸಾವನ್ನಪ್ಪಿದವರ ಸಂಖ್ಯೆ 290ಕ್ಕೆ ಏರಿದ್ದು, ಬೆಂಗಳೂರಿನ ಇಬ್ಬರು ಕನ್ನಡಿಗರು ಮೃತಪಟ್ಟಿರುವ ಬಗ್ಗೆ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಟ್ವೀಟ್ ಮಾಡುವ ಮೂಲಕ ಖಚಿತಪಡಿಸಿದ್ದಾರೆ.

ಏಳು ಜನರಿರುವ ಜೆಡಿಎಸ್ ತಂಡ ಸ್ಫೋಟದ ಬಳಿಕ ನಾಪತ್ತೆಯಾಗಿದ್ದಾರೆ ಎಂದು ತಿಳಿದು ಇನ್ನಿಲ್ಲದ ಆಘಾತ ಹಾಗೂ ನೋವಾಗಿದೆ. ಈ ಪೈಕಿ ಇಬ್ಬರು ಭಯೋತ್ಪಾದಕರ ದಾಳಿಗೆ ಬಲಿಯಾಗಿದ್ದಾರೆ ಎಂದು ಶಂಕಿಸಲಾಗಿದೆ. ಕಳೆದು ಹೋಗಿರುವವರ ಪತ್ತೆ ಹಚ್ಚಲು ನಾನು ಭಾರತ ರಾಯಭಾರ ಕಚೇರಿಯೊಂದಿಗೆ ಸತತ ಸಂಪರ್ಕದಲ್ಲಿದ್ದೇನೆ ಎಂದು ಸಿಎಂ ಕುಮಾರಸ್ವಾಮಿ ಟ್ವೀಟ್ ಮೂಲಕ ತಿಳಿಸಿದ್ದಾರೆ.

ಬೆಂಗಳೂರಿನ ಯಲಹಂಕ ಶಾಸಕ ಎಸ್​​.ಆರ್​​ ವಿಶ್ವನಾಥ್​ ಸೇರಿದ ತಂಡ ಪ್ರವಾಸಕ್ಕೆಂದು ಶ್ರೀಲಂಕಾ ತೆರಳಿದ್ದರು. ಇದಲ್ಲದೆ ಮಾಜಿ ಸಚಿವ ರಾಮಲಿಂಗಾ ರೆಡ್ಡಿ ಅವರ ಸಂಬಂಧಿ ಪುರುಷೋತ್ತಮ್ ಎಂವರು ಗಂಭೀರವಾಗಿ ಗಾಯಗೊಂಡು ಕೋಮಾ ಸ್ಥಿತಿಯಲಿದ್ದಾರೆ ಎಂದು ತಿಳಿದುಬಂದಿದೆ. ಇವರಿಗೆ ಸ್ಥಳೀಯ ಕೊಲಂಬೋ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇದಲ್ಲದೆ ನೆಲಮಂಗಲ ಮೂಲದ ಕೆ.ಜಿ ಹನುಮಂತರಾಯಪ್ಪ ಮತ್ತು ರಂಗಪ್ಪ ಎಂಬ ಇಬ್ಬರು ಕನ್ನಡಿಗರು ಸಾವನಪ್ಪಿದ್ದಾರೆ ಎಂದು ಶ್ರೀಲಂಕಾ ಸರ್ಕಾರ ಟ್ವೀಟ್​​ ಮಾಡಿದೆ.

ಭೀಕರ ಸರಣಿ ಬಾಂಬ್ ಸ್ಫೋಟದಲ್ಲಿ ಸುರತ್ಕಲ್ ಮೂಲದ ಮಹಿಳೆ ರಝೀನಾ(58) ಮೃತಪಟ್ಟಿದ್ದರು. ಇದೀಗ ಬೆಂಗಳೂರಿನ ಇಬ್ಬರು ಸೇರಿದಂತೆ ಮೂವರು ಕನ್ನಡಿಗರು ಸಾವನ್ನಪ್ಪಿದಂತಾಗಿದೆ.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

9 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

9 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

10 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

10 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

11 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

11 hours ago