ಬೆಂಗಳೂರು:ಈಸ್ಟರ್ ದಿನವಾದ ರವಿವಾರ ದ್ವೀಪರಾಷ್ಟ್ರ ಶ್ರೀಲಂಕಾದಲ್ಲಿ ಸಂಭವಿಸಿದ್ದ ಭೀಕರ ಆತ್ಮಹತ್ಯಾ ಬಾಂಬ್ ದಾಳಿಯಲ್ಲಿ ಸಾವನ್ನಪ್ಪಿದವರ ಸಂಖ್ಯೆ 290ಕ್ಕೆ ಏರಿದ್ದು, ಬೆಂಗಳೂರಿನ ಇಬ್ಬರು ಕನ್ನಡಿಗರು ಮೃತಪಟ್ಟಿರುವ ಬಗ್ಗೆ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಟ್ವೀಟ್ ಮಾಡುವ ಮೂಲಕ ಖಚಿತಪಡಿಸಿದ್ದಾರೆ.
ಏಳು ಜನರಿರುವ ಜೆಡಿಎಸ್ ತಂಡ ಸ್ಫೋಟದ ಬಳಿಕ ನಾಪತ್ತೆಯಾಗಿದ್ದಾರೆ ಎಂದು ತಿಳಿದು ಇನ್ನಿಲ್ಲದ ಆಘಾತ ಹಾಗೂ ನೋವಾಗಿದೆ. ಈ ಪೈಕಿ ಇಬ್ಬರು ಭಯೋತ್ಪಾದಕರ ದಾಳಿಗೆ ಬಲಿಯಾಗಿದ್ದಾರೆ ಎಂದು ಶಂಕಿಸಲಾಗಿದೆ. ಕಳೆದು ಹೋಗಿರುವವರ ಪತ್ತೆ ಹಚ್ಚಲು ನಾನು ಭಾರತ ರಾಯಭಾರ ಕಚೇರಿಯೊಂದಿಗೆ ಸತತ ಸಂಪರ್ಕದಲ್ಲಿದ್ದೇನೆ ಎಂದು ಸಿಎಂ ಕುಮಾರಸ್ವಾಮಿ ಟ್ವೀಟ್ ಮೂಲಕ ತಿಳಿಸಿದ್ದಾರೆ.
ಬೆಂಗಳೂರಿನ ಯಲಹಂಕ ಶಾಸಕ ಎಸ್.ಆರ್ ವಿಶ್ವನಾಥ್ ಸೇರಿದ ತಂಡ ಪ್ರವಾಸಕ್ಕೆಂದು ಶ್ರೀಲಂಕಾ ತೆರಳಿದ್ದರು. ಇದಲ್ಲದೆ ಮಾಜಿ ಸಚಿವ ರಾಮಲಿಂಗಾ ರೆಡ್ಡಿ ಅವರ ಸಂಬಂಧಿ ಪುರುಷೋತ್ತಮ್ ಎಂವರು ಗಂಭೀರವಾಗಿ ಗಾಯಗೊಂಡು ಕೋಮಾ ಸ್ಥಿತಿಯಲಿದ್ದಾರೆ ಎಂದು ತಿಳಿದುಬಂದಿದೆ. ಇವರಿಗೆ ಸ್ಥಳೀಯ ಕೊಲಂಬೋ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇದಲ್ಲದೆ ನೆಲಮಂಗಲ ಮೂಲದ ಕೆ.ಜಿ ಹನುಮಂತರಾಯಪ್ಪ ಮತ್ತು ರಂಗಪ್ಪ ಎಂಬ ಇಬ್ಬರು ಕನ್ನಡಿಗರು ಸಾವನಪ್ಪಿದ್ದಾರೆ ಎಂದು ಶ್ರೀಲಂಕಾ ಸರ್ಕಾರ ಟ್ವೀಟ್ ಮಾಡಿದೆ.
ಭೀಕರ ಸರಣಿ ಬಾಂಬ್ ಸ್ಫೋಟದಲ್ಲಿ ಸುರತ್ಕಲ್ ಮೂಲದ ಮಹಿಳೆ ರಝೀನಾ(58) ಮೃತಪಟ್ಟಿದ್ದರು. ಇದೀಗ ಬೆಂಗಳೂರಿನ ಇಬ್ಬರು ಸೇರಿದಂತೆ ಮೂವರು ಕನ್ನಡಿಗರು ಸಾವನ್ನಪ್ಪಿದಂತಾಗಿದೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…