ನವದೆಹಲಿ: ತೀವ್ರ ಆರ್ಥಿಕ ಬಿಕ್ಕಟ್ಟಿನಿಂದ ಕಂಗೆಟ್ಟಿರುವ ಶ್ರೀಲಂಕಾಕ್ಕೆ ಭಾರತವು ಇಂಧನವನ್ನು ಪೂರೈಕೆ ಮಾಡಿದ್ದು,ಇದರಿಂದಾಗಿ ಲಂಕಾದ ದೇಶೀಯ ಆರ್ಥಿಕ ಸ್ಥಿತಿ ಸ್ಥಿರವಾಗಿರಿಸಲು ನೆರವಾಗಲಿದೆ ಎಂದು ವರದಿ ತಿಳಿಸಿದೆ.
ಭಾರತವೂ ಕಳೆದ 24 ಗಂಟೆಗಳಲ್ಲಿ ಒಟ್ಟು 76,000 ಟನ್‌ಗಳಷ್ಟು ಇಂಧನವನ್ನು ನೆರೆ ರಾಷ್ಟ್ರ ಶ್ರೀಲಂಕಾಕ್ಕೆ ತಲುಪಿಸಿದೆ. ಭಾರತದ ನೆರವಿನ ಅಡಿಯಲ್ಲಿ 2,70,000 ಟನ್‌ಗಳಿಗಿಂತ ಹೆಚ್ಚು ಇಂಧನ ಪೂರೈಸಿದೆ.
ಶ್ರೀಲಂಕಾ ರಾಜಕೀಯ ಪ್ರಕ್ಷುಬ್ಧತೆಯಲ್ಲಿ ಸಿಲುಕಿದ್ದು , ಆರ್ಥಿಕ ಬಿಕ್ಕಟ್ಟು ಕೂಡಾ ದ್ವೀಪ ರಾಷ್ಟ್ರವನ್ನು ಕಂಗೆಡಿಸಿದೆ. ಇನ್ನೊಂದೆಡೆ ಜನರ ಪ್ರತಿಭಟನೆಗಳು ಉಲ್ಬಣಗೊಳ್ಳುತ್ತಿತ್ತು ಅಧ್ಯಕ್ಷ ಗೋಟಾಬಯ ರಾಜಪಕ್ಸೆ ರಾಜೀನಾಮೆಗೆ ಒತ್ತಡ ಹೇರುತ್ತಿದ್ದಾರೆ.
ದ್ವೀಪರಾಷ್ಟ್ರ ಶ್ರಿಲಂಕಾದಲ್ಲಿ 22 ಮಿಲಿಯನ್ ಜನರು ತೀವ್ರ ಆಹಾರ ಕೊರತೆ, ಇಂಧನ ಹಾಗೂ ಅಗತ್ಯ ವಸ್ತುಗಳ ಕೊರತೆಯನ್ನು ಎದುರಿಸುತ್ತಿದ್ದಾರೆ. ಲಂಕಾದಲ್ಲಿ ಹಾಲು, ಅಕ್ಕಿ, ಸಕ್ಕರೆ ಸೇರಿದಂತೆ ದಿನಬಳಕೆ ವಸ್ತುಗಳ ಬೆಲೆ ಗಗನಕ್ಕೇರಿದೆ. 1948ರಲ್ಲಿ ಸ್ವತಂತ್ರಗೊಂಡ ನಂತರ ಶ್ರೀಲಂಕಾದಲ್ಲಿ ಇದೇ ಮೊದಲ ಬಾರಿ ತೀವ್ರ ಆರ್ಥಿಕ ಬಿಕ್ಕಟ್ಟು, ಆಹಾರ ಕೊರತೆ ಎದುರಿಸುವಂತಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…