ಕೊಲಂಬೋ: ಈಸ್ಟರ್ ಭಾನುವಾರದ ವೇಳೆ ನಡೆದ ದಾಳಿಗಳಲ್ಲಿ ಬುರ್ಖಾ ಧರಿಸಿದ್ದ ಮಹಿಳೆಯರು ಭಾಗಿಯಾಗಿರುವ ಬಗ್ಗೆ ವಿಚಾರಣೆಯಿಂದ ತಿಳಿದುಬಂದಿರುವ ಹಿನ್ನೆಲೆಯಲ್ಲಿ ಬುರ್ಖಾ ನಿಷೇಧಿಸುವ ಬಗ್ಗೆ ಶ್ರೀಲಂಕಾ ಸರ್ಕಾರ ಚಿಂತನೆ ನಡೆಸಿದೆ.
ಬುರ್ಖಾ ಧರಿಸಿದ ಮಹಿಳಾ ಬಾಂಬರ್ ಆತ್ಮಾಹುತಿ ದಾಳಿಯಲ್ಲಿ ಭಾಗಿಯಾಗಿರುವ ಬಗ್ಗೆ ಮಾಹಿತಿ ಹೊರಬೀಳುತ್ತಿದ್ದಂತೆ, ದ್ವೀಪ ರಾಷ್ಟ್ರದ ಕೆಲ ಸಂಸದರು ಬುರ್ಖಾ ನಿಷೇಧಗೊಳಿಸುವಂತೆ ಧ್ವನಿ ಎತ್ತಿದ್ದಾರೆ. ಯು ಎನ್ ಪಿ ಪಕ್ಷದ ನಾಯಕ ಅಶು ಮಾರಸಿಂಘೆ, ತಮ್ಮ ಫೇಸ್ ಬುಕ್ ಖಾತೆಯಲ್ಲಿ ಬರೆದುಕೊಂಡಿದ್ದು ’ಬುರ್ಖಾ ಧರಿಸಿದ ಮಹಿಳೆ ಬಾಂಬ್ ದಾಳಿಯಲ್ಲಿ ನೇರ ಭಾಗಿಯಾಗಿರುವುದು ಕಂಡುಬಂದಿದೆ. ಮಾತ್ರವಲ್ಲದೆ ಅನೇಕ ಉಗ್ರರು ಬುರ್ಖಾ ಧರಿಸಿ ಪರಾರಿಯಾಗುವಲ್ಲಿ ಸಫಲರಾಗಿದ್ದಾರೆ. ಬುರ್ಖಾ ಎನ್ನುವುದು ಮುಸ್ಲಿಂ ಮಹಿಳೆಯರ ಸಾಂಪ್ರದಾಯಿಕ ವಸ್ತ್ರ ಅಲ್ಲ, ದೇಶದ ಕೆಲ ಭಾಗದಲ್ಲಿ ಮುಸ್ಲಿಂ ಸಮುದಾಯದ ಮಹಿಳೆಯರು ಪ್ರವೇಶಿಸುವಾಗ ಬುರ್ಖಾ ಕಡ್ಡಾಯವಾಗಿ ತೆಗೆಯಬೇಕೆಂಬ ಸೂಚನೆ ನೀಡಲಾಗಿತ್ತು ’ ಎಂದು ಬರೆದುಕೊಂಡಿದ್ದಾರೆ.
ಉಗ್ರರು ತಮ್ಮ ಕೃತ್ಯಗಳಿಗೆ ಮಹಿಳೆಯರ ನೆರವು ಪಡೆಯುವ ನಿಟ್ಟಿನಲ್ಲಿ ಅವರಿಗೆ ಬುರ್ಖಾ ಧರಿಸಿ ಕರೆತರುವುದು ಇತ್ತೀಚಿನ ವರ್ಷಗಳಲ್ಲಿ ಹೆಚ್ಚಾಗಿದೆ. ಇದೇ ಕಾರಣಕ್ಕಾಗಿ ಈಗಾಗಲೇ ಚಾದ್, ಕ್ಯಾಮರೂನ್, ಗಬಾನ್, ಮೊರಾಕ್ಕೋ, ಆಸ್ಟ್ರೀಯಾ, ಬಲ್ಗೇರಿಯಾ, ಡೆನ್ಮಾರ್ಕ್, ಫ್ರಾನ್ಸ್, ಬೆಲ್ಜಿಯಂ ಸೇರಿದಂತೆ ಹಲವು ದೇಶಗಳಲ್ಲಿ ಸಾರ್ವಜನಿಕ ಪ್ರದೇಶಗಳಲ್ಲಿ ಬುರ್ಖಾ ಧರಿಸುವುದಕ್ಕೆ ಅಲ್ಲಿನ ಸರ್ಕಾರ ನಿಷೇಧ ಹೇರಿದೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…