Featured

ಶ್ರೀ ಕೃಷ್ಣ ಮಠದ  ಮಹಾದ್ವಾರ ಫಲಕದಲ್ಲಿ ಕನ್ನಡ ಫಲಕವನ್ನು ತೆಗೆದು ತುಳು, ಸಂಸ್ಕೃತ ಹೊಸ ನಾಮ ಫಲಕ ಅಳವಡಿಕೆ ; ಕನ್ನಡ ಸಂಘಟನೆ ಆಕ್ಷೇಪ, ಮಠದಿಂದ ಸ್ಪಷ್ಟನೆ -Vishwanews24

ಶ್ರೀ ಕೃಷ್ಣ ಮಠದ  ಮಹಾದ್ವಾರ ಫಲಕದಲ್ಲಿ ಕನ್ನಡ ಫಲಕವನ್ನು ತೆಗೆದು ತುಳು, ಸಂಸ್ಕೃತ ಹೊಸ ನಾಮ ಫಲಕ ಅಳವಡಿಕೆ ; ಕನ್ನಡ ಸಂಘಟನೆ
ಆಕ್ಷೇಪ, ಮಠದಿಂದ ಸ್ಪಷ್ಟನೆ -Vishwanews24

ಉಡುಪಿ: ವಿಶ್ವಪ್ರಸಿದ್ದ ಉಡುಪಿ ಶ್ರೀ ಕೃಷ್ಟ ಮಠದ ಮಹಾದ್ವಾರದಲ್ಲಿ ಇದ್ದ ಕನ್ನಡ ಫಲಕವನ್ನು ತೆಗೆದು ತುಳು ಮತ್ತು ಸಂಸ್ಕೃತದಲ್ಲಿ ಹೊಸ ನಾಮ ಫಲಕ ಅಳವಡಿಸಿದ್ದು ಕನ್ನಡ ಸಂಘಟನೆಗಳ ಕೆಂಗಣ್ಣಿಗೆ ಗುರಿಯಾಗಿದ.

ಉಡುಪಿಯ ಕೃಷ್ಟ ಮಠದ ಮಹಾದ್ವಾರದಲ್ಲಿ ಈ ವರೆಗೆ ಕನ್ನಡ ಮತ್ತು ಆಂಗ್ಲ ಭಾಷೆಯಲ್ಲಿ ಫಲಕವಿದು ಅದನ್ನು ತೆಗೆದು ಈಗ ಹೊಸದಾಗಿ ತುಳು ಮತ್ತು ಸಂಸ್ಕೃತದಲ್ಲಿ ಶ್ರೀ ಕೃಷ್ಟ ಮಠ, ರಜತಪೀಠ ಪುರಂ ಎಂದು ಬರೆಯಲಾಗಿದೆ. ಪರ್ಯಾಯ ಅದಮಾರು ಮಠದಿಂದ ಫಲಕ ಬದಲಾವಣೆ ನಡೆದಿದ್ದು ಫಲಕದಲ್ಲಿ ಕನ್ನಡ ಭಾಷೆ ಏಕಿಲ್ಲ ಎನ್ನುವುದು ಸಾರ್ವಜನಿಕರ ಗೊಂದಲಕ್ಕೆ ಕಾರಣವಾಗಿದೆ.

ಈ ಬಗ್ಗೆ ಮಾಧ್ಯಮ ಹೇಳಿಕೆ ನೀಡಿರುವ ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನೀಲಾವರ ಸುರೇಂದ್ರು ಅಡಿಗ ಅವರು ಕೃಷ್ಣ ಮಠದ ನಾಮಫಲಕದಲ್ಲಿ ಕನ್ನಡ ನನ್ನು ತೆಗೆದು ಹಾಕಿದ್ದು ಸರಿಯಾದ ಕ್ರಮವಲ್ಲ ಕನ್ನಡ ಸಾಹಿತ್ಯ ಪರಿಷತ್ ಇದನ್ನು ಉಗ್ರವಾಗಿ ಖಂಡಿಸುತ್ತದೆ. ಕನ್ನಡ ನಾಡಿನಲ್ಲಿ ಮೊದಲು ಕನ್ನಡ ಕ್ಕೆ ಆಧ್ಯತೆ. ನಾಮಫಲಕ ದಲ್ಲಿ ಮೊದಲು ಕನ್ನಡ ಇರಬೇಕು ಆನಂತರ ಇತರ ಭಾಷೆ. ಒಂದು ಧಾರ್ಮಿಕ ಸಂಸ್ಥೆ ಭಾಷೆಗಳ ನಡುವೆ ಕಂದಕ ಸೃಷ್ಟಿಸುವುದು ಸರಿಯಲ್ಲ.

ನಾಮ ಫಲಕದ ಈ ಪ್ರಕರಣ ಸರ್ಕಾರದ ಕಾನೂನಿನ ಸೃಷ್ಟ ಉಲ್ಲಂಘನೆಯಾಗಿದ್ದು, ಇದನ್ನು ಕೂಡಲೇ ಸರಿಪಡಿಸಬೇಕು. ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿ ಮುಂದ ಇದನ್ನು ಸರಿಪಡಿಸುವ ವರೆಗೂ ಹೋರಾಟ ಅನಿವಾರ್ಯ ಎಂದು ಅವರು ಎಚ್ಚರಿಸಿದ್ದಾರೆ ಮೊದಲು ಕನ್ನಡಆನಂತರ ಇತರೆ ಭಾಷೆ ನಾಮಫಲಕದಲ್ಲಿ ಇರಲಿ ಕನ್ನಡ ಮತ್ತು ಸೋದರ ಭಾಷೆ ತುಳುವಿನ ನಡುವೆ ಕಂದಕ ನಿರ್ಮಾಣ ಮಾಡುವುದು ಸಹ ಪರಿಷತ್ ತೀವ್ರ ವಾಗಿ ಖಂಡಿಸುತ್ತದೆ ಎಂದು ಅವರು ತಿಳಿಸಿದ್ದಾರೆ.

ಈ ಬಗ್ಗೆ ಪರ್ಯಾಯ ಅದಮಾರು ಮಠ ಕೂಡ ಸ್ಪಷ್ಟನೆ ನೀಡಿದ್ದು, ಮಠ ಪುನಶ್ಚತನಗೊಳಿಸುವಾಗ ಪರ್ಯಾಯ ಸ್ವಾಮೀಜಿಗಳ ಅಪೇಕ್ಷೆಯಂತೆ ಅಲ್ಲಿರುವ ಪ್ಲಾಸ್ಟಿಕ್ ಬೋರ್ಡನ್ನು ತೆಗೆದು ಮರದಲ್ಲಿ ತಯಾರಾದ ಬೋರ್ಡನ್ನು ಹಾಕುವ ಯೋಜನೆ ಇತ್ತು. ಅದರಲ್ಲಿ ಮೊದಲನೇ ಬೋರ್ಡು ಕನ್ನಡ ಬಂದು ಬಳಿಕ ಸಂಸ್ಕೃತ ಮತ್ತು ತುಳು ಲಿಪಿಯ ಬೋರ್ಡ್ ಹಾಕುವ ಯೋಜನೆ ಇತ್ತು. ಅದರಂತೆ ಫಲಕ ತಯಾರಾಗುವ ವೇಳ ಲಕ್ಷದೀಪ ಬಂದ ಕಾರಣ ಕನ್ನಡ ಭಾಷಯ ಫಲಕ ತಯಾರಾಗುತ್ತಿದ್ದು, ತುಳು ಮತ್ತು ಸಂಸ್ಕೃತ ಭಾಷೆಯ ಬೋರ್ಡ್ ಹಾಕಲಾಗಿದೆ. ತುಳು ಭಾಷೆಗೂ ಗೌರವ ನೀಡಬೇಕು ಯಾಕೆಂದರೆ ಮಠದಲ್ಲಿನ ಗ್ರಂಥಿ ಲಿಪಿ ತುಳು ಭಾಷೆಯಲ್ಲಿದ್ದ ಕಾರಣ ತುಳು ಫಲಕ ಹಾಕಲಾಗಿದೆ. ಕನ್ನಡದ ಫಲಕ ಮೊದಲ ಭಾಗದಲ್ಲಿ ಇರಲಿದ್ದು ಬಳಿಕ ಉಳಿದ ಭಾಷೆಯ ಬೋರ್ಡ್ ಬರಲಿವೆ ಎಂದು ಮಠದ ಮಾನೇಜರ್ ಗೋವಿಂದ್ ರಾಜ್ ಹೇಳಿದ್ದಾರೆ.

Vishwa News 24

Recent Posts

ಉಡುಪಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ, ವಂಚನೆ ಪ್ರಕರಣ: ಪೋಕ್ಸೋ ಕಾಯಿದೆಯಡಿ ಇಬ್ಬರ ಬಂಧನ – vishwanews24

ಉಡುಪಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ, ವಂಚನೆ ಪ್ರಕರಣ: ಪೋಕ್ಸೋ ಕಾಯಿದೆಯಡಿ ಇಬ್ಬರ ಬಂಧನ ಉಡುಪಿ: ಅಪ್ರಾಪ್ತ ಬಾಲಕಿಯೊಬ್ಬಳನ್ನು ಪ್ರೀತಿಯ…

16 hours ago

ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ – vishwanews24

ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ ಕಾಪು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ…

20 hours ago

ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ  – vishwanews24

ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ  ಉಡುಪಿ: ಉಡುಪಿಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಮೀನು ಸಾಗಾಟದ ಲಾರಿಯೊಂದು…

20 hours ago

ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ – vishwanews24

ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ ನವದೆಹಲಿ: ಪೆಟ್ರೋಲ್‌, ಡೀಸೆಲ್‌ ಬಳಿಕ…

20 hours ago

ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು – vishwanews24

ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು ಮಂಗಳೂರು: ದುಬೈನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಕಳೆದ ಕೆಲವು…

21 hours ago

ಗೋ ರಕ್ಷಣೆಯ ಹೆಸರಿನಲ್ಲಿ ನಡೆಯುತ್ತಿರುವ ದೌರ್ಜನ್ಯಗಳ ವಿರುದ್ಧ ಮಂಗಳೂರಿನಲ್ಲಿ SDPI ಪ್ರತಿಭಟನೆ – vishwanews24

ಬಿಜೆಪಿ ಸಂಘಪರಿವಾರವು ದೇಶದ ಕಾನೂನಿಗೆ ವಿರುದ್ಧವಾಗಿದೆ: ರಿಯಾಝ್ ಫರಂಗಿಪೇಟೆ ಗಲಭೆಕೋರರ ವಿರುದ್ಧದ ಪ್ರಕರಣ ಹಿಂಪಡೆದ ಕ್ರಮಕ್ಕೆ SDPI ತೀವ್ರ ವಿರೋಧ…

21 hours ago