Featured

ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದ ಅಧ್ಯಕ್ಷನಾಗಿ ಹರೀಶ್ ಇಂಜಾಡಿ ಆಯ್ಕೆ ; ಬಿಜೆಪಿ ಆಕ್ರೋಶ – vishwanews24

ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದ ಅಧ್ಯಕ್ಷನಾಗಿ ಹರೀಶ್ ಇಂಜಾಡಿ ಆಯ್ಕೆ ; ರೌಡಿಶೀಟರ್‌ಗೆ ಕುಕ್ಕೆ ಅಧ್ಯಕ್ಷ ಸ್ಥಾನ  , ಬಿಜೆಪಿ ಟೀಕೆ

ಮಂಗಳೂರು: ಶ್ರೀಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದ ಅಧ್ಯಕ್ಷನಾಗಿ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ರೌಡಿಶೀಟರ್‌ವೊಬ್ಬನನ್ನು ಆಯ್ಕೆ ಮಾಡಲಾಗಿದೆ. ಭಾರಿ ವಿರೋಧದ ನಡುವೆಯೂ ಮಾಜಿ ರೌಡಿಶೀಟರ್‌ನನ್ನು ಸರ್ಕಾರ ಆಯ್ಕೆ ಮಾಡಿದೆ.

ಗ್ರಾಪಂ ಸದಸ್ಯನೂ ಆಗಿರುವ ಹರೀಶ್ ಇಂಜಾಡಿಗೆ ಅಧ್ಯಕ್ಷ ಪಟ್ಟ ಸಿಕ್ಕಿದೆ. ಈತ ದೇವಸ್ಥಾನದ ಆಡಳಿತ ಮಂಡಳಿಗೆ ದೋಖಾ ಮಾಡಿ ಜೈಲುಪಾಲಾಗಿದ್ದ. ಈತನಿಗೆ ಅಧ್ಯಕ್ಷ ಸ್ಥಾನಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಶಿಫಾರಸು ಮಾಡಿದ್ದರು. ಅದರಂತೆ ಹರೀಶ್‌ಗೆ, ಕುಕ್ಕೆ ವ್ಯವಸ್ಥಾಪನ ಆಡಳಿತ ಮಂಡಳಿಯ ಅಧ್ಯಕ್ಷ ಸ್ಥಾನ ಒಲಿದಿದೆ. ಆಡಳಿತ ಮಂಡಳಿ ಸಂಸ್ಥೆಯ ಹಿತಾಸಕ್ತಿಗೆ ವಿರುದ್ಧ ಇದ್ದವರು ಸದಸ್ಯರಾಗಬಾರದು ಎಂಬ ನಿಯಮ ಮೀರಿ ಆಯ್ಕೆ ಮಾಡಲಾಗಿದೆ.

ನಕಲಿ ಚೆಕ್ ನೀಡಿ ಹಣ್ಣು-ಕಾಯಿ ಟೆಂಡರ್ ಮಾಡಿ ದೇವಸ್ಥಾನಕ್ಕೆ ವಂಚನೆ ಮಾಡಿದ್ದ ಆರೋಪವನ್ನು ಹರೀಶ್ ಇಂಜಾಡಿ ಎದುರಿಸುತ್ತಿದ್ದಾನೆ. ಈ ಪ್ರಕರಣದಲ್ಲಿ ಬಂಧನವೂ ಆಗಿತ್ತು. ಹರೀಶ್‌ಗೆ ಸದಸ್ಯ ಸ್ಥಾನ ನೀಡಲು ಸುಬ್ರಹ್ಮಣ್ಯ ಗ್ರಾಮಸ್ಥರಿಂದ ವಿರೋಧ ವ್ಯಕ್ತವಾಗಿತ್ತು. ಧಾರ್ಮಿಕದತ್ತಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿಗೆ ಸ್ಥಳೀಯರು ಪತ್ರ ಬರೆದಿದ್ದರು. ರೌಡಿಶೀಟರ್ ಆಗಿದ್ದ ಹರೀಶ್ ಇಂಜಾಡಿಯನ್ನು ಅಧ್ಯಕ್ಷನನ್ನಾಗಿ ಮಾಡಬೇಡಿ ಅಂತಾ ಪತ್ರದಲ್ಲಿ ಉಲ್ಲೇಖಿಸಲಾಗಿತ್ತು. ಮರಳು ಮಾಫಿಯಾ ಮತ್ತು ಮರ ಕಳ್ಳ ಸಾಗಣೆ ಆರೋಪ ಈತ ಮೇಲಿದೆ ಎಂದು ಗಮನ ಸೆಳೆದಿದ್ದಾನೆ.

ಕುಕ್ಕೆ ಸುಬ್ರಹ್ಮಣ್ಯ ಅಧ್ಯಕ್ಷಗಾದಿಗೆ ಹರೀಶ್ ಇಂಜಾಡಿ ಆಯ್ಕೆ ಬೆನ್ನಲ್ಲೇ ಆಕ್ರೋಶ ವ್ಯಕ್ತವಾಗಿದೆ. ಸಾಮಾಜಿಕ ತಾಣಗಳಲ್ಲಿ ಕಾಂಗ್ರೆಸ್ ವಿರುದ್ಧ ಬಿಜೆಪಿ ಆಕ್ರೋಶ ಹೊರಹಾಕಿದೆ. ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ರೌಡಿಶೀಟರ್ ಎಂದಿದ್ದ ಕಾಂಗ್ರೆಸ್ ಆತನ ಮನೆಗೆ ಭೇಟಿ ನೀಡಿರಲಿಲ್ಲ. ಇದೀಗ ದಿನೇಶ್ ಗುಂಡೂರಾವ್ ಅವರ ಶಿಫಾರಸಿನಂತೆ ಮಾಜಿ ರೌಡಿಶೀಟರ್‌ಗೆ ಕುಕ್ಕೆ ಅಧ್ಯಕ್ಷ ಸ್ಥಾನ ನೀಡಲಾಗಿದೆ ಎಂದು ಬಿಜೆಪಿ ಟೀಕಾಪ್ರಹಾರ ನಡೆಸಿದೆ.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

17 hours ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

2 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

2 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

2 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

2 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

2 days ago