ಮಂಗಳೂರು: ಶ್ರೀಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದ ಅಧ್ಯಕ್ಷನಾಗಿ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ರೌಡಿಶೀಟರ್‌ವೊಬ್ಬನನ್ನು ಆಯ್ಕೆ ಮಾಡಲಾಗಿದೆ. ಭಾರಿ ವಿರೋಧದ ನಡುವೆಯೂ ಮಾಜಿ ರೌಡಿಶೀಟರ್‌ನನ್ನು ಸರ್ಕಾರ ಆಯ್ಕೆ ಮಾಡಿದೆ.
ಗ್ರಾಪಂ ಸದಸ್ಯನೂ ಆಗಿರುವ ಹರೀಶ್ ಇಂಜಾಡಿಗೆ ಅಧ್ಯಕ್ಷ ಪಟ್ಟ ಸಿಕ್ಕಿದೆ. ಈತ ದೇವಸ್ಥಾನದ ಆಡಳಿತ ಮಂಡಳಿಗೆ ದೋಖಾ ಮಾಡಿ ಜೈಲುಪಾಲಾಗಿದ್ದ. ಈತನಿಗೆ ಅಧ್ಯಕ್ಷ ಸ್ಥಾನಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಶಿಫಾರಸು ಮಾಡಿದ್ದರು. ಅದರಂತೆ ಹರೀಶ್‌ಗೆ, ಕುಕ್ಕೆ ವ್ಯವಸ್ಥಾಪನ ಆಡಳಿತ ಮಂಡಳಿಯ ಅಧ್ಯಕ್ಷ ಸ್ಥಾನ ಒಲಿದಿದೆ. ಆಡಳಿತ ಮಂಡಳಿ ಸಂಸ್ಥೆಯ ಹಿತಾಸಕ್ತಿಗೆ ವಿರುದ್ಧ ಇದ್ದವರು ಸದಸ್ಯರಾಗಬಾರದು ಎಂಬ ನಿಯಮ ಮೀರಿ ಆಯ್ಕೆ ಮಾಡಲಾಗಿದೆ.
ನಕಲಿ ಚೆಕ್ ನೀಡಿ ಹಣ್ಣು-ಕಾಯಿ ಟೆಂಡರ್ ಮಾಡಿ ದೇವಸ್ಥಾನಕ್ಕೆ ವಂಚನೆ ಮಾಡಿದ್ದ ಆರೋಪವನ್ನು ಹರೀಶ್ ಇಂಜಾಡಿ ಎದುರಿಸುತ್ತಿದ್ದಾನೆ. ಈ ಪ್ರಕರಣದಲ್ಲಿ ಬಂಧನವೂ ಆಗಿತ್ತು. ಹರೀಶ್‌ಗೆ ಸದಸ್ಯ ಸ್ಥಾನ ನೀಡಲು ಸುಬ್ರಹ್ಮಣ್ಯ ಗ್ರಾಮಸ್ಥರಿಂದ ವಿರೋಧ ವ್ಯಕ್ತವಾಗಿತ್ತು. ಧಾರ್ಮಿಕದತ್ತಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿಗೆ ಸ್ಥಳೀಯರು ಪತ್ರ ಬರೆದಿದ್ದರು. ರೌಡಿಶೀಟರ್ ಆಗಿದ್ದ ಹರೀಶ್ ಇಂಜಾಡಿಯನ್ನು ಅಧ್ಯಕ್ಷನನ್ನಾಗಿ ಮಾಡಬೇಡಿ ಅಂತಾ ಪತ್ರದಲ್ಲಿ ಉಲ್ಲೇಖಿಸಲಾಗಿತ್ತು. ಮರಳು ಮಾಫಿಯಾ ಮತ್ತು ಮರ ಕಳ್ಳ ಸಾಗಣೆ ಆರೋಪ ಈತ ಮೇಲಿದೆ ಎಂದು ಗಮನ ಸೆಳೆದಿದ್ದಾನೆ.
ಕುಕ್ಕೆ ಸುಬ್ರಹ್ಮಣ್ಯ ಅಧ್ಯಕ್ಷಗಾದಿಗೆ ಹರೀಶ್ ಇಂಜಾಡಿ ಆಯ್ಕೆ ಬೆನ್ನಲ್ಲೇ ಆಕ್ರೋಶ ವ್ಯಕ್ತವಾಗಿದೆ. ಸಾಮಾಜಿಕ ತಾಣಗಳಲ್ಲಿ ಕಾಂಗ್ರೆಸ್ ವಿರುದ್ಧ ಬಿಜೆಪಿ ಆಕ್ರೋಶ ಹೊರಹಾಕಿದೆ. ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ರೌಡಿಶೀಟರ್ ಎಂದಿದ್ದ ಕಾಂಗ್ರೆಸ್ ಆತನ ಮನೆಗೆ ಭೇಟಿ ನೀಡಿರಲಿಲ್ಲ. ಇದೀಗ ದಿನೇಶ್ ಗುಂಡೂರಾವ್ ಅವರ ಶಿಫಾರಸಿನಂತೆ ಮಾಜಿ ರೌಡಿಶೀಟರ್‌ಗೆ ಕುಕ್ಕೆ ಅಧ್ಯಕ್ಷ ಸ್ಥಾನ ನೀಡಲಾಗಿದೆ ಎಂದು ಬಿಜೆಪಿ ಟೀಕಾಪ್ರಹಾರ ನಡೆಸಿದೆ.
ಮಲ್ಪೆ : ಸೈಂಟ್‌ಮೇರೀಸ್ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…
ಜೂನ್ 21ರಂದು ನೀಟ್ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್ 21 ರಂದು ನೀಟ್–ಯುಜಿ ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…