Featured

ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಹೆಸರು ದುರ್ಬಳಕೆ ಆರೋಪ ; ಎರಡು ಕಂಪೆನಿಗಳ ಮೇಲೆ ದೂರು ದಾಖಲು – Vishwanews24

ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಹೆಸರು ದುರ್ಬಳಕೆ ಆರೋಪ ; ಎರಡು ಕಂಪೆನಿಗಳ ಮೇಲೆ ದೂರು ದಾಖಲು

ಪುತ್ತೂರು : ಶ್ರೀಕ್ಷೇತ್ರ ಗೆಜ್ಜೆಗಿರಿ ಹೆಸರನ್ನು ದುರ್ಬಳಕೆ ಮಾಡಿಕೊಂಡ ಆರೋಪದ ಮೇಲೆ ಎರಡು ಕಂಪೆನಿಗಳ ಮೇಲೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ದೇಯಿ ಬೈದೇತಿ ಕೋಟಿ-ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಅಧಿಕೃತ ಟ್ರೇಡ್‌ ಮಾರ್ಕ್‌ ಉಲ್ಲಂಘಿಸಿ ಹಾಗೂ ಕ್ಷೇತ್ರದ ಹೆಸರು ದುರುಪಯೋಗಪಡಿಸಿಕೊಂಡು ಅಗರಬತ್ತಿ ತಯಾರಿಸಲಾಗುತ್ತಿದೆ ಎಂದು ಕ್ಷೇತ್ರಾಡಳಿತ ಸಮಿತಿಯು ಪುತ್ತೂರು ಉಪವಿಭಾಗ ಡಿವೈಎಸ್ಪಿಗೆ ದೂರು ಸಲ್ಲಿಸಿದೆ. ಶ್ರೀ ಕ್ಷೇತ್ರ ಗೆಜ್ಜೆಗಿರಿ ಭಾರತ ಸರಕಾರದ ಟ್ರೇಡ್‌ ಮಾರ್ಕ್‌ ರಿಜಿಸ್ಟ್ರಿ ಯಲ್ಲಿ ಗೆಜ್ಜೆಗಿರಿ ಎಂಬ ಟ್ರೇಡ್‌ ಮಾರ್ಕ್‌ ಅನ್ನು ಕ್ಲಾಸ್‌ 3 ಅಡಿಯಲ್ಲಿ ಅಗರಬತ್ತಿ ಉತ್ಪನ್ನ ಹೊಂದಿದೆ. ಈ ಅಧಿಕೃತ ನೋಂದಾವಣೆ ಟ್ರೇಡ್‌ ಮಾರ್ಕ್‌ ಶ್ರೀ ಕ್ಷೇತ್ರ ಹೊಂದಿದ್ದು ಗೆಜ್ಜೆಗಿರಿ ಎಂಬ ಮಾರ್ಕ್‌ ಮೇಲೆ ಬೌದ್ಧಿಕ ಆಸ್ತಿ ಹಕ್ಕಿನ ಕಾನೂನು ಬದ್ಧ ಅಧಿಕಾರ ಹೊಂದಿರುವಾಗ ಗಂಗಗೂಡನಹಳ್ಳಿಯ ಮಿಸ್ಬಾ ಪ್ರಾಗ್ರನೆನ್ಸ್‌ ಗೆಜ್ಜೆಗಿರಿ ಹೆಸರಿನಲ್ಲಿ ಅಗರಬತ್ತಿ ಉತ್ಪಾದಿಸಿ ದಕ್ಷಿಣ ಕನ್ನಡದ ಪ್ರಮುಖ ಮಾರುಕಟ್ಟೆಗಳಲ್ಲಿ ಮಾರಾಟ ಮಾಡುತ್ತಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಇದರ ಜತೆಗೆ ಆರೋಪಿತ ಕಂಪೆನಿಯು ತನ್ನ ಉತ್ಪನ್ನದಲ್ಲಿ ಶ್ರೀ ಕ್ಷೇತ್ರದ ಫೋಟೋ ಅನ್ನು ನಮೂದಿಸಿ ದುರುಪಯೋಗಪಡಿಸಿಕೊಂಡಿದೆ.
ಇದೇ ರೀತಿ ಉಪ್ಪಿನಂಗಡಿಯ ಶುಕ್ರಿಯಾ ಟ್ರೇಡರ್ಸ್‌ನ ಮಾಲಕ ಶುಕೂರ್‌ ಕೂಡ ಗೆಜ್ಜೆಗಿರಿ ಹೆಸರಿನ ಅಗರಬತ್ತಿ ಮಾರಾಟ ಮಾಡುತ್ತಿದ್ದು, ಶ್ರೀ ಕ್ಷೇತ್ರದ ಹೆಸರನ್ನು, ಫೋಟೋವನ್ನು ಉತ್ಪನ್ನಕ್ಕೆ ಉಪಯೋಗಿಸುತ್ತಿರುವುದು ಕಂಡುಬಂದಿದೆ. ಉತ್ಪನ್ನಗಳನ್ನು ಮುಟ್ಟು ಗೋಲು ಹಾಕಿ ಕ್ರಮ ಕೈಗೊಳ್ಳುವಂತೆ ಕ್ಷೇತ್ರಾಡಳಿತ ಸಮಿತಿ ಪರವಾಗಿ ಉಪಾಧ್ಯಕ್ಷ ರವಿ ಪೂಜಾರಿ ದೂರು ಸಲ್ಲಿಸಿದ್ದಾರೆ.

ಕಾಪು ಹೆದ್ದಾರಿಯ ಹೊಂಡ ತಪ್ಪಿಸಲು ಹೋಗಿ ಡೈವರ್ಷನ್ ಏರಿ ಕಂಬಕ್ಕೆ ಡಿಕ್ಕಿ ಹೊಡೆದ ಕಾರು:ಪ್ರಾಣಪಾಯದಿಂದ ಪಾರಾದ ಚಾಲಕಿ vishwanews24

Vishwa News 24

Recent Posts

ಸತೀಶ್ ಕಡತನಮಲೆ 6 ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ  – vishwanews24

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ  ಬೆಂಗಳೂರು: ರಾಜ್ಯ ರೈತ…

19 minutes ago

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…

32 minutes ago

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ – vishwanews24

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…

37 minutes ago

ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು  – vishwanews24

ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು …

1 hour ago

ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್‌ ವಿತರಣೆ – vishwanews24

ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್‌ ವಿತರಣೆ ಮಂಗಳೂರು: ತಡೆಗೋಡೆ…

2 hours ago

ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ರಿಯಾಕ್ಷನ್ – vishwanews24

ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ಫಸ್ಟ್ ರಿಯಾಕ್ಷನ್ ಆಡಿಯೋ ಧ್ವನಿ ತಮ್ಮದಲ್ಲ ಎಂದು ಸದಾನಂದಗೌಡರೇ ಹೇಳಿದ್ದಾರೆ ;…

2 hours ago