ಧರ್ಮಸ್ಥಳ: ಕಾಂತಾರ ಚಲನಚಿತ್ರದ ನಟ ರಿಷಬ್ ಶೆಟ್ಟಿ ಮತ್ತು ಪತ್ನಿ ಪ್ರಗತಿ ಶೆಟ್ಟಿ ಬುಧವಾರ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬಂದು ದೇವರ ದರ್ಶನ ಮಾಡಿ ಪೂಜೆ ಸಲ್ಲಿಸಿದರು.
ಬಳಿಕ ಹೆಗ್ಗಡೆಯವರ ಬೀಡಿನಲ್ಲಿ ಡಿ. ವೀರೇಂದ್ರ ಹೆಗ್ಗಡೆಯವರು, ಹೇಮಾವತಿ ವಿ. ಹೆಗ್ಗಡೆ, ಡಿ. ಹರ್ಷೇಂದ್ರ ಕುಮಾರ್ ಮತ್ತು ಸುಪ್ರಿಯಾ ಹಷೇಂದ್ರ ಕುಮಾರ್ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.
ಡಿ. ವೀರೇಂದ್ರ ಹೆಗ್ಗಡೆಯವರು ಕುಟುಂಬ ಸಮೇತರಾಗಿ ಇತ್ತೀಚೆಗೆ ಮಂಗಳೂರಿನಲ್ಲಿ “ಕಾಂತಾರ” ಚಲನಚಿತ್ರ ನೋಡಿದ್ದು ಸಿನಿಮಾದ ಬಗ್ಯೆ ಮೆಚ್ಚುಗೆ ವ್ಯಕ್ತಪಡಿಸಿ ಅಭಿನಂದಿಸಿದರು.
ಹೆಗ್ಗಡೆಯವರು ರಿಷಬ್ ಶೆಟ್ಟಿ ದಂಪತಿಯನ್ನು ಗೌರವಿಸಿ ಅಭಿನಂದಿಸಿದರು.
ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿ, ಸಿನಿಮಾ ತಯಾರಿ ಮೊದಲೆ ಧರ್ಮಸ್ಥಳಕ್ಕೆ ಬಂದು ಪೂಜೆ ಸಲ್ಲಿಸಿ, ಹೆಗ್ಗಡೆಯವರ ಆಶೀರ್ವಾದ ಪಡೆದಿದ್ದೆ. ಕಾಂತಾರದ ದೈವಾರಾಧನೆಗೂ ಧರ್ಮಸ್ಥಳಕ್ಕೂ ಅವಿನಾಭಾವ ಸಂಬಂಧವಿದೆ.
ಹೆಗ್ಗಡೆಯವರು ಸಿನಿಮಾ ನೋಡಿ ಮೆಚ್ಚುಗೆ ವ್ಯಕ್ತಪಡಿಸಿರುವುದು ನಮಗೆ ದೇವರೇ ಸಿನಿಮಾ ನೋಡಿ ಆಶೀರ್ವದಿಸಿದಂತಾಗಿದೆ ಎಂದು ಹೇಳಿದ ರಿಷಬ್ ಶೆಟ್ಟಿ ಎಲ್ಲಾ ಕಡೆಗಳಲ್ಲಿ ಎರಡು ತಿಂಗಳಿಗೂ ಮಿಕ್ಕಿ ಜನರು ಚಲನಚಿತ್ರವನ್ನು ವೀಕ್ಷಿಸಿ ಪ್ರೋತ್ಸಾಹಿಸುತ್ತಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದರು.
ಹಿಂದಿ, ತುಳು ಹಾಗೂ ಇತರ ಭಾಷೆಗಳಲ್ಲ್ಲಿಯೂ ಸದ್ಯದಲ್ಲಿಯೇ ಕಾಂತಾರ ಪ್ರದರ್ಶನವಾಗಲಿದೆ ಎಂದು ಅವರು ಹೇಳಿದರು.
ಪತ್ನಿ ಪ್ರಗತಿ ಶೆಟ್ಟಿ ಮಾತನಾಡಿ ಇನ್ನು ಎರಡು ತಿಂಗಳು ತೀರ್ಥಯಾತ್ರೆ ಮಾಡುವ ಕಾರ್ಯಕ್ರಮವಿದ್ದು ಬಳಿಕ ಕೊಂಚ ವಿಶ್ರಾಂತಿ ಪಡೆಯುವುದಾಗಿ ತಿಳಿಸಿದರು. ನಟ ಪ್ರಮೋದ್ ಶೆಟ್ಟಿ ಕೂಡಾ ಉಪಸ್ಥಿತರಿದ್ದರು.
ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…
ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…
ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…
ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…
ಸಚಿವರ ಮೇಲೆ ಖಾಸಗಿ ಸ್ಟಿಂಗ್ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ…
ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…