ಬೆಳ್ತಂಗಡಿ: ಸ್ಯಾಂಡಲ್ ವುಡ್ ನ ಖ್ಯಾತ ಮ್ಯಾಜಿಕ್ ಕಂಪೋಸರ್, ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಹಾಗೂ ಅವರ ಪತ್ನಿ ಗೀತಾ ಆ.10 ರ ಶನಿವಾರ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದರು.
ಕ್ಷೇತ್ರದಲ್ಲಿ ಮಂಜುನಾಥ ಸ್ವಾಮಿಯ ದರ್ಶನ ಪಡೆದುಕೊಂಡು ವಿಶೇಷ ಪೂಜೆ ಸಲ್ಲಿಸಿದರು. ನಂತರ ಶಾಂತಿವನ ಟ್ರಸ್ಟ್, ಶ್ರೀ ಧ.ಮಂ. ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ವತಿಯಿಂದ ಮಹೋತ್ಸವ ಸಭಾಭವನದಲ್ಲಿ ನಡೆಯಲಿರುವ ಪುಸ್ತಕಗಳ ಲೋಕಾರ್ಪಣೆ ಹಾಗೂ ರಾಜ್ಯ ಮಟ್ಟದ ಅಂಚೆ ಕುಂಚ ಸ್ಪರ್ಧೆ ವಿಜೇತರಿಗೆ ಪುರಸ್ಕಾರ ಸಮಾರಂಭದಲ್ಲಿ ಭಾಗವಹಿಸಿದ್ದಾರೆ.
ಕ್ಷೇತ್ರದ ವತಿಯಿಂದ ಅವರನ್ನು ಗೌರವಿಸಲಾಯಿತು.ಈ ವೇಳೆ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ, ಡಿ.ಹರ್ಷೇಂದ್ರ ಕುಮಾರ್, ಶ್ರೀ ಹಾವೇರಿ ಹುಕ್ಕೇರಿ ಮಠ ಶ್ರಿಮನ್ ನಿರಂಜನ್ ಪ್ರಣವ ಸ್ವರೂಪಿ ಸದಾಶಿವ ಮಹಾಸ್ವಾಮಿಗಳು, ಶಾಂತಿವನ ಟ್ರಸ್ಟ್ ಕಾರ್ಯದರ್ಶಿ ಬಿ.ಸೀತರಾಮ ತೋಳ್ಪಾಡಿತ್ತಾಯ, ಯೋಗ ಮತ್ತು ನೈತಿಕ ಶಿಕ್ಣಣ ಯೋಜನೆ ನಿರ್ದೇಶಕ ಡಾ.ಐ.ಶಶಿಕಾಂತ್ ಜೈನ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪ ನಿರ್ದೇಶಕ ವೆಂಕಟೇಶ ಸುಬ್ರಾಯ ಪಟಗಾರ ಉಪಸ್ಥಿತರಿದ್ದರು.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…