Featured

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಡಿ. 8 ರಿಂದ 12 ರವರೆಗೆ ಲಕ್ಷ ದೀಪೋತ್ಸವ ಸಂಭ್ರಮ – vishwanews24

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಡಿ. 8 ರಿಂದ 12 ರವರೆಗೆ ಲಕ್ಷ ದೀಪೋತ್ಸವ ಸಂಭ್ರಮ

ಬೆಳ್ತಂಗಡಿ : ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಡಿಸೆಂಬರ್ 8 ರಿಂದ 12 ರವರೆಗೆ ಕಾರ್ತಿಕಮಾಸದಲ್ಲಿ ನಡೆಯುವ ಲಕ್ಷದೀಪೋತ್ಸವ ಕಾರ್ಯಕ್ರಮಗಳು ನಡೆಯಲಿದೆ ಎಂದು ದೇವಸ್ಥಾನ ಆಡಳಿತ ಮಂಡಳಿ ತಿಳಿಸಿದೆ. ಡಿಸೆಂಬರ್ 11ರಂದು ಸೋಮವಾರ ಸಂಜೆ 5 ಗಂಟೆಗೆ ಸರ್ವಧರ್ಮ ಸಮ್ಮೇಳನದ 91ನೇ ಅಧಿವೇಶನವನ್ನು ವಿದ್ವಾಂಸ ಗುರುರಾಜ ಕರಜಗಿ ಉದ್ಘಾಟಿಸುವರು. ತುಮಕೂರು ಸಿದ್ಧಗಂಗಾ ಮಠದ ಸಿದ್ಧಲಿಂಗ ಸ್ವಾಮೀಜಿ ಅಧ್ಯಕ್ಷತೆ ವಹಿಸುವರು.

ಸುಪ್ರೀಂ ಕೋರ್ಟ್ ವಕೀಲ ಎಂ.ಆರ್.ವೆಂಕಟೇಶ್, ಬೆಂಗಳೂರಿನ ವಿಭು ಅಕಾಡೆಮಿ ಮುಖ್ಯಸ್ಥ ವಿಜಯಪುರದ ಮಹಮ್ಮದ್ ಗೌಸ್ ಹವಾಲ್ದಾರ ಧಾರ್ಮಿಕ ಉಪನ್ಯಾಸ ನೀಡುವರು. ರಾತ್ರಿ 8.30ರಿಂದ ಬೆಂಗಳೂರಿನ ಅನುರಾಧಾ ವಿಕ್ರಾಂತ್, ಬಳಗದವರಿಂದ ನೃತ್ಯ ಪ್ರದರ್ಶನವಿದೆ. ಡಿಸೆಂಬರ್ 12ರಂದು ಸಂಜೆ 5ಗಂಟೆಗೆ ಸಾಹಿತ್ಯ ಸಮ್ಮೇಳನದ 91ನೇ ಅಧಿವೇಶನವನ್ನು ಬೆಂಗಳೂರಿನ ಇಸ್ರೊದ ಅಧ್ಯಕ್ಷ ಎಸ್.ಸೋಮನಾಥ್ ಉದ್ಘಾಟಿಸುವರು. ಬೆಂಗಳೂರಿನ ಗಮಕಿ ಎ.ವಿ.ಪ್ರಸನ್ನ ಅಧ್ಯಕ್ಷತೆ ವಹಿಸುವರು. ಹೊನ್ನಾವರದ ನಿವೃತ್ತ ಉಪನ್ಯಾಸಕ ಶ್ರೀಪಾದ ಶೆಟ್ಟಿ, ಬೆಂಗಳೂರಿನ ರಂಗಕರ್ಮಿ ಪ್ರಕಾಶ್ ಬೆಳವಾಡಿ, ಬಂಟ್ವಾಳದ ಅಜಕ್ಕಳ ಗಿರೀಶ್ ಭಟ್ ಉಪನ್ಯಾಸ ನೀಡುವರು. ರಾತ್ರಿ 8.30ರಿಂದ ಬೆಂಗಳೂರಿನ ಜತಿನ್ ನೃತ್ಯ ಅಕಾಡೆಮಿಯ ವಿದುಷಿ ಅರ್ಚನಾ ಪುಣ್ಯೇಶ್ ಮತ್ತು ಬಳಗದವರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.ಡಿಸೆಂಬರ್ 8ರಂದು ಶುಕ್ರವಾರ ಬೆಳಿಗ್ಗೆ 10.30ಕ್ಕೆ ಧರ್ಮಸ್ಥಳ ಪ್ರೌಢಶಾಲೆ ವಠಾರದಲ್ಲಿ ರಾಜ್ಯಮಟ್ಟದ ವಸ್ತುಪ್ರದರ್ಶನವನ್ನು ಪುತ್ತೂರು ಉಪವಿಭಾಗಾಧಿಕಾರಿ ಗಿರೀಶ್‌ನಂದನ್ ಉದ್ಘಾಟಿಸುವರು. ವಸ್ತುಪ್ರದರ್ಶನ ಮಂಟಪದಲ್ಲಿ ಪ್ರತಿದಿನ ಸಂಜೆ 6ರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಡಿ.10ರಂದು ಸಂಜೆ 7ರಿಂದ 10ರ ವರೆಗೆ ಅಮೃತವರ್ಷಿಣಿ ಸಭಾಭವನದಲ್ಲಿ ಸಂಗೀತ ನಿರ್ದೇಶಕ ಗುರುಕಿರಣ್ ಮತ್ತು ಬಳಗದವರಿಂದ ಗಾನ, ನೃತ್ಯ ವೈವಿಧ್ಯ ಕಾರ್ಯಕ್ರಮ ನಡೆಯಲಿದೆ. ಡಿ.12ರಂದು ರಾತ್ರಿ 12 ಗಂಟೆ ಬಳಿಕ ಲಕ್ಷದೀಪೋತ್ಸವ ನಡೆಯಲಿದೆ.

ಡಿಸೆಬರ್ 8ರಂದು ಹೊಸಕಟ್ಟೆ ಉತ್ಸವ, 9ರಂದು ಕೆರೆಕಟ್ಟೆ ಉತ್ಸವ, 10ರಂದು ಲಲಿತೋದ್ಯಾನ ಉತ್ಸವ, 11ರಂದು ಕಂಚಿಮಾರುಕಟ್ಟೆ ಉತ್ಸವ, 12ರಂದು ಗೌರಿಮಾರುಕಟ್ಟೆ ಉತ್ಸವ, ಲಕ್ಷದೀಪೋತ್ಸವ, 13ರಂದು ಸಂಜೆ 7ರಿಂದ ಭಗವಾನ್ ಶ್ರೀಚಂದ್ರನಾಥ ಸ್ವಾಮಿ ಬಸದಿಯ ಆವರಣದಲ್ಲಿ ಸಮವಸರಣ ಪೂಜೆ ನಡೆಯಲಿದೆ.

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

18 hours ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

19 hours ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

19 hours ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

20 hours ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

20 hours ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

20 hours ago