ಶ್ರೀ ಕ್ಷೇತ್ರ ಧರ್ಮಸ್ಥಳದಿಂದ 10 ಸರಕಾರಿ ಶಾಲೆಗಳ ದತ್ತು ಸ್ವೀಕಾರ -Vishwanews24

Featured, ದಕ್ಷಿಣ ಕನ್ನಡ, ರಾಜ್ಯ ನ್ಯೂಸ್

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ 10 ಸರಕಾರಿ ಶಾಲೆಗಳ ದತ್ತು ಸ್ವೀಕಾರ -Vishwanews24

ಸರಕಾರಿ ಶಾಲೆಗಳನ್ನು ದತ್ತು ತೆಗೆದುಕೊಳ್ಳುವುದಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ವಿಧಾನ ಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ನಡೆದ ಕಾರ್ಯಕ್ರಮವನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಸುರೇಂದ್ರ ಕುಮಾರ್ ಅವರು ಉದ್ಘಾಟಿಸಿದರು.ಈ ಸಂದರ್ಭ ಎಸ್‌ಡಿಎಂ ವಿಶ್ವವಿದ್ಯಾನಿಲಯ ಧಾರವಾಡ ವತಿಯಿಂದ 10 ಶಾಲೆಗಳನ್ನು ದತ್ತು ಸ್ವೀಕರಿಸಿ ಅದನ್ನು ಅಭಿವೃದ್ಧಿ ಪಡಿಸುವ ಸಂಬಂಧ ರೂಪುರೇಷೆಗಳ ಬಗ್ಗೆ ಚರ್ಚಿಸಲಾಯಿತು.

ರಾಜ್ಯದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ನಡೆಯುತ್ತಿರುವ ಹತ್ತು ಹಲವು ಅಭಿವೃದ್ಧಿ ಕೆಲಸ ಕಾರ್ಯಗಳ ಬಗ್ಗೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಶ್ಲಾಘಸಿದರು.

ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಶಿಕ್ಷಣ ಸಚಿವ ಸುರೇಶ್‌ ಕುಮಾರ್‌, ಆರೋಗ್ಯ ಸಚಿವ ಶ್ರೀರಾಮುಲು ಉಪಸ್ಥಿತರಿದ್ದರು..