Featured

ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನ ಶೋಭಾಯಾತ್ರೆ : ಅ.5 ರಿಂದ ಬದಲಿ ವ್ಯವಸ್ಥೆ – Vishwanews24

ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನ ಶೋಭಾಯಾತ್ರೆ : ಅ.5 ರಿಂದ ಬದಲಿ ವ್ಯವಸ್ಥೆ

ಮಂಗಳೂರು: ನಗರದ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನದಿಂದ ನವದುರ್ಗೆಯರು, ಶಾರದೆ, ಗಣೇಶ ವಿಗ್ರಹ, ವಿವಿಧ ಟ್ಯಾಬ್ಲೋಗಳ ಶೋಭಾಯಾತ್ರೆಗೆ ಅಪಾರ ಜನಸಂಖ್ಯೆ ಸೇರುವ ನಿರೀಕ್ಷೆ ಇರುವುದರಿಂದ ಕಾನೂನು ಸುವ್ಯವಸ್ಥೆ, ವಾಹನಗಳ ಸುಗಮ ಸಂಚಾರ ಹಾಗೂ ಸಾರ್ವಜನಿಕ ಸುರಕ್ಷತೆಯ ದೃಷ್ಠಿಯಿಂದ ಭಾರತೀಯ ಮೋಟಾರು ವಾಹನ ಕಾಯ್ದೆ 1988 ಕಲಂ 115 ಮತ್ತು 116ರಲ್ಲಿ ಪ್ರದತ್ತ ಅಧಿಕಾರವನ್ನು ಚಲಾಯಿಸಿ ಅ.05ರ ಬುಧವಾರ ಮಧ್ಯಾಹ್ನ 2 ಗಂಟೆಯಿಂದ ಅ.06ರ ಗುರುವಾರ ಬೆಳಿಗ್ಗೆ 6 ಗಂಟೆಯವರೆಗೆ ವಾಹನ ಸಂಚಾರಕ್ಕೆ ಬದಲಿ ವ್ಯವಸ್ಥೆ ಮಾಡಲಾಗಿದೆ.

ವಿವರ ಇಂತಿದೆ:

ಕೊಟ್ಟಾರ ಚೌಕಿ ಜಂಕ್ಷನ್ ಮುಖಾಂತರ ನಗರಕ್ಕೆ ಬರುವ ವಾಹನಗಳ ನಗರ ಪ್ರವೇಶವನ್ನು ನಿμÉೀಧಿಸಲಾಗಿದೆ ಹಾಗೂ ವಾಹನಗಳು ಕುಂಟಿಕಾನ, ಕೆ.ಪಿ.ಟಿ, ನಂತೂರು ಮಾರ್ಗವಾಗಿ ನಗರ ಪ್ರವೇಶಿಸುವುದು.

ನಗರದಿಂದ ಬ್ರಹ್ಮಶ್ರೀ ನಾರಾಯಣಗುರು ವೃತ್ತದ ಮುಖೇನ ಕೊಟ್ಟಾರ ಚೌಕಿ ಕಡೆಗೆ ಸಂಚರಿಸುವ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ. ನಗರದಿಂದ ಲಾಲ್‍ಬಾಗ್ ಮಾರ್ಗವಾಗಿ ಕುಂಟಿಕಾನ ಹಾಗೂ ಕೆ.ಪಿ.ಟಿ ಕಡೆಗೆ ಸಂಚರಿಸುವ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ. ಕೆ.ಎಸ್.ಆರ್ ರಸ್ತೆಯಿಂದ ಎಂ.ಜಿ ರಸ್ತೆಯಲ್ಲಿ ಸಂಚರಿಸುವ ವಾಹನಗಳು ಪಿ.ವಿ.ಎಸ್ ಮಾರ್ಗವಾಗಿ ಬಂಟ್ಸ್ ಹಾಸ್ಟೆಲ್ ಮೂಲಕ ಸಂಚರಿಸುವುದು. ಅಂಬೇಡ್ಕರ್ ಸರ್ಕಲ್ ಮೂಲಕ ಎಂ.ಜಿ ರಸ್ತೆಗೆ ಸಾಗುವ ವಾಹನಗಳು ಬಂಟ್ಸ್ ಹಾಸ್ಟೆಲ್‍ನಿಂದ ಸಂಚರಿಸುವುದು.

ಮಂಗಳೂರು : ಬ್ರಹ್ಮಶ್ರೀ ನಾರಾಯಣ ಗುರು ವೃತ್ತ ಲೋಕಾರ್ಪಣೆ – Vishwanews24

ನ್ಯೂ ಚಿತ್ರಾ ಜಂಕ್ಷನ್‍ನಿಂದ ಕುದ್ರೋಳಿ ಗೋಕರ್ಣನಾಥೇಶ್ವರ ದೇವಸ್ಥಾನದ ಮಾರ್ಗವಾಗಿ ಬ್ರಹ್ಮಶ್ರೀ ನಾರಾಯಣಗುರು ವೃತ್ತದ ಕಡೆಗೆ ಸಂಚರಿಸುವ ವಾಹನ ಸಂಚಾರವನ್ನು ನಿಷೇಧಿಸಲಾಗಿದೆ, ವಾಹನಗಳು ನ್ಯೂ ಚಿತ್ರಾ ಜಂಕ್ಷನ್‍ನಿಂದ ಕಂಡತ್‍ಪಳ್ಳಿ, ಮಂಡಿ, ಕುದ್ರೋಳಿ, ಬೊಕ್ಕಪಟ್ಟ, ಸುಲ್ತಾನ್‍ಬತ್ತೇರಿ ಮೂಲಕ ಉರ್ವಮಾರ್ಕೆಟ್ ಮಾರ್ಗವಾಗಿ ನಗರದಿಂದ ಹೊರ ಹೋಗುವುದು ಹಾಗೂ ನ್ಯೂ ಚಿತ್ರಾ ಜಂಕ್ಷನ್‍ನಿಂದ ಡೊಂಗರಕೇರಿ ವೆಂಕಟರಮಣ ದೇವಸ್ಥಾನ ಜಂಕ್ಷನ್, ರಾಷ್ಟ್ರ ಕವಿ ಎಂ. ಗೋವಿಂದ ಪೈ ವೃತ್ತ, ಪಿ.ವಿ.ಎಸ್ ಮಾರ್ಗವಾಗಿ ಮುಂದುವರೆದು ಬಂಟ್ಸ್ ಹಾಸ್ಟೆಲ್ ಕಡೆಗೆ ಸಂಚರಿಸುವುದು.

ಬ್ರಹ್ಮಶ್ರೀ ನಾರಾಯಣಗುರು ವೃತ್ತದ ಕಡೆಯಿಂದ ಕುದ್ರೋಳಿ ದೇವಸ್ಥಾನದ ಕಡೆಗೆ ಸಂಚರಿಸುವ ಎಲ್ಲಾ ತರಹದ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ.

ಉರ್ವಾಸ್ಟೋರ್ ಕಡೆಯಿಂದ ಬ್ರಹ್ಮಶ್ರೀ ನಾರಾಯಣ ಗುರು ವೃತ್ತದ ಕಡೆಗೆ ಬರುವ ವಾಹನಗಳು ಕೋಟೆಕಣಿ ರಸ್ತೆಯಾಗಿ ಕೊಟ್ಟಾರಕ್ರಾಸ್, ಕಾಪಿಕಾಡು, ಕೆ.ಎಸ್.ಆರ್.ಟಿ.ಸಿ, ಬಿಜೈ ಮಾರ್ಕೆಟ್ ಜಂಕ್ಷನ್ ಮೂಲಕ ಸಂಚರಿಸುವುದು.

ಪರೇಶ್ ಮೇಸ್ತ ಕೇಸ್‌ನ್ನು ಕೇಂದ್ರ ಸರ್ಕಾರ ರೀ ಓಪನ್ ಮಾಡಬೇಕು..ಉಡುಪಿಯಲ್ಲಿ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಆಗ್ರಹ..

ಕೆ.ಎಸ್.ಆರ್.ಟಿ.ಸಿ. ಜಂಕ್ಷನ್ ಕಡೆಯಿಂದ ಎಂ.ಜಿ. ರಸ್ತೆಗೆÀ (ಲಾಲ್‍ಬಾಗ್ ಜಂಕ್ಷನ್ ಕಡೆಗೆ) ಹಾಗೂ ಬಿಜೈ ಮಾರ್ಕೆಟ್ ಜಂಕ್ಷನ್ ಕಡೆಯಿಂದ ಕೆ.ಎಸ್.ಆರ್.ಟಿ.ಸಿ ಕಡೆಗೆ ಬರುವ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ. ಕುಂಟಿಕಾನ ಕಡೆಯಿಂದ ಬರುವ ವಾಹನಗಳು ಕೆ.ಎಸ್.ಆರ್.ಟಿ.ಸಿ. ಜಂಕ್ಷನ್ ಬಳಿ ಎಡಕ್ಕೆ ತಿರುಗಿ ಬಿಜೈ ಮಾರ್ಕೆಟ್ ಜಂಕ್ಷನ್ ಮೂಲಕ ಸಂಚರಿಸುವುದು. ಬಿಜೈ ಮಾರ್ಕೆಟ್ ಜಂಕ್ಷನ್ ಕಡೆಯಿಂದ ಎಂ.ಜಿ ರಸ್ತೆಗೆ (ಲಾಲ್‍ಬಾಗ್ ಜಂಕ್ಷನ್ ಕಡೆಗೆ) ಬರುವ ವಾಹನಗಳು ಕೆ.ಎಸ್.ಆರ್.ಟಿ.ಸಿ. ಜಂಕ್ಷನ್ ಬಳಿ `ಯು’ ತಿರುವು ಪಡೆದುಕೊಂಡು ಬಿಜೈ ಮಾರ್ಕೆಟ್ ಜಂಕ್ಷನ್ ಕಡೆಗೆ ಸಂಚರಿಸುವುದು.

ಪಶು ಆಸ್ಪತ್ರೆ ಜಂಕ್ಷನ್ (ಕಪುಚಿನ್ ಚರ್ಚ್)ನಿಂದ ಕೋರಿರೊಟ್ಟಿ ಜಂಕ್ಷನ್ (ಎಂ.ಜಿ.ರಸ್ತೆ) ಕಡೆಗೆ ಸಾಗುವ ಎಲ್ಲಾ ವಾಹನ ಸಂಚಾರ ನಿಷೇಧಿಸಲಾಗಿದೆ.

ಕೆ.ಎಸ್.ಆರ್.ಟಿ.ಸಿ. ಬಸ್ಸು ನಿಲ್ದಾಣಕ್ಕೆ ಬಂದು ಹೋಗುವ ಎಲ್ಲಾ ಕೆ.ಎಸ್.ಆರ್.ಟಿ.ಸಿ ಬಸ್ಸುಗಳ ಪೈಕಿ ಪಂಪ್‍ವೆಲ್ ಕಡೆಗೆ ಸಂಚರಿಸುವ ಬಸ್ಸುಗಳು ಕೆ.ಪಿ.ಟಿ ಜಂಕ್ಷನ್ ಮೂಲಕ ಮತ್ತು ಉಡುಪಿ ಕಡೆಗೆ ಸಂಚರಿಸುವ ಬಸ್ಸುಗಳು ಕುಂಟಿಕಾನ ಜಂಕ್ಷನ್ ಮೂಲಕ ಸಂಚರಿಸುವುದು.

ಮೆರವಣಿಗೆ ಹಾದು ಹೋಗುವ ರಸ್ತೆಯ ಇಕ್ಕೆಲಗಳಲ್ಲಿ ವಾಹನಗಳ ನಿಲುಗಡೆಯನ್ನು ನಿಷೇಧಿಸಲಾಗಿದೆ.

ಪರೇಶ್ ಮೇಸ್ತ ಕೊಲೆಯಲ್ಲ ಆಕಸ್ಮಿಕವಾಗಿ ನಡೆದ ಸಾವು : ಸಿಬಿಐ – Vishwanews24

ಕುದ್ರೋಳಿ ನಾರಾಯಣಗುರು ಕಾಲೇಜು ಬಳಿಯಿಂದ ನವದುರ್ಗೆಯರ ಟ್ಯಾಬ್ಲೊಗಳು ತಯಾರಿಗೊಂಡು ದೇವಸ್ಥಾನಕ್ಕೆ ಬರಲಿರುವುದರಿಂದ ಕುದ್ರೋಳಿ ನಾರಾಯಣ ಗುರು ಕಾಲೇಜು ಜಂಕ್ಷನ್ ರಸ್ತೆಯಿಂದ ಬರ್ಕೆ ಜಂಕ್ಷನ್ ತನಕ ಮತ್ತು ಬರ್ಕೆ ಜಂಕ್ಷನ್‍ನಿಂದ ದುರ್ಗಾಮಹಲ್ ಜಂಕ್ಷನ್‍ವರೆಗೆ ಹಾಗೂ ದುರ್ಗಾಮಹಲ್ ಜಂಕ್ಷನ್‍ನಿಂದ ಅಳಕೆ ಬ್ರಿಡ್ಜ್ ತನಕ ರಸ್ತೆಯ ಇಕ್ಕೆಲಗಳಲ್ಲಿ ವಾಹನಗಳ ನಿಲುಗಡೆಯನ್ನು ನಿಷೇಧಿಸಲಾಗಿದೆ.

ಶೋಭಾಯಾತ್ರೆಯಲ್ಲಿ ಪಾಲ್ಗೊಳ್ಳುವ ಎಲ್ಲಾ ಟ್ಯಾಬ್ಲೊಗಳು ಉರ್ವ ಮಾರ್ಕೆಟ್ ಜಂಕ್ಷನ್‍ನಿಂದ, ಗಾಂಧಿನಗರದಿಂದಾಗಿ ಮಣ್ಣಗುಡ್ಡ ಗುರ್ಜಿ ಜಂಕ್ಷನ್‍ನಲ್ಲಿ ಸರದಿ ಸಾಲಿನಲ್ಲಿ ಬಂದು ನಿಂತು ಅಲ್ಲಿಂದ ಸದರಿ ಟ್ಯಾಬ್ಲೊಗಳು ಮೆರವಣಿಗೆಯಲ್ಲಿ ಮುಂದುವರೆಯುದರಿಂದ ಮಣ್ಣಗುಡ್ಡ ಗುರ್ಜಿ ಜಂಕ್ಷನ್‍ನಿಂದ ಉರ್ವ ಮಾರ್ಕೆಟ್ ಜಂಕ್ಷನ್‍ವರೆಗಿನ ರಸ್ತೆಯ ಇಕ್ಕೆಲಗಳಲ್ಲಿ ಹಾಗೂ ಮಣ್ಣಗುಡ್ಡ ಗಾಂಧಿನಗರ ಪಾರ್ಕ್ ಮುಂಭಾಗದ ರಸ್ತೆ ಮತ್ತು ಗಾಂಧಿನಗರ 1ರಿಂದ 8ರವರೆಗಿನ ಅಡ್ಡ ರಸ್ತೆಗಳ ಇಕ್ಕೆಲಗಳಲ್ಲಿ ವಾಹನಗಳ ನಿಲುಗಡೆಯನ್ನು ನಿಷೇಧಿಸಲಾಗಿದೆ ಎಂದು ಮಂಗಳೂರು ನಗರ ಪೆÇಲೀಸ್ ಕಮೀಷನರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

9 hours ago

ಮಂಗಳೂರು: MRPL ಅಪಘಾತದಲ್ಲಿ ಮೃತಪಟ್ಟ ಮನೀಶ್ ಕರ್ಕಡ ಕುಟುಂಬಕ್ಕೆ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಒದಗಿಸಿದ EPFO – vishwanews24

ಮಂಗಳೂರು: MRPL ಅಪಘಾತದಲ್ಲಿ ಮೃತಪಟ್ಟ ಮನೀಶ್ ಕರ್ಕಡ ಕುಟುಂಬಕ್ಕೆ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಒದಗಿಸಿದ EPFO ಮಂಗಳೂರು: ರಿಫೈನರಿ &…

9 hours ago

ಗೃಹಲಕ್ಷ್ಮಿ ಯೋಜನೆ ಮರುಪರಿಶೀಲನೆ : ಹೊಸ ಅರ್ಜಿ, ಹೊಸ ಷರತ್ತುಗಳು ; ಈ ದಾಖಲೆಗಳು ಕಡ್ಡಾಯ – vishwanews24

ಗೃಹಲಕ್ಷ್ಮಿ ಯೋಜನೆ ಮರುಪರಿಶೀಲನೆ : ಹೊಸ ಅರ್ಜಿ, ಹೊಸ ಷರತ್ತುಗಳು ; ಈ ದಾಖಲೆಗಳು ಕಡ್ಡಾಯ  ಬೆಂಗಳೂರು: ಕರ್ನಾಟಕ ಸರ್ಕಾರದ…

9 hours ago

ಉಡುಪಿ: ಉದ್ಯೋಗಕ್ಕಾಗಿ ಅಲೆದಾಡುವ ಯುವಜನರ ಬಳಿಗೇ ಉದ್ಯೋಗಾವಕಾಶ : ಡಾ. ಕೆ. ಪ್ರಕಾಶ್ ಶೆಟ್ಟಿ – vishwanews24

ಉಡುಪಿ: ಉದ್ಯೋಗಕ್ಕಾಗಿ ಅಲೆದಾಡುವ ಯುವಜನರ ಬಳಿಗೇ ಉದ್ಯೋಗಾವಕಾಶ : ಡಾ. ಕೆ. ಪ್ರಕಾಶ್ ಶೆಟ್ಟಿ ಉಡುಪಿ: ಯುವಜನರು ನಿರಂತರ ಪ್ರಯತ್ನದ…

10 hours ago

ಮಂಗಳೂರು:ಕೋರಿಯರ್ ಮೂಲಕ ಎಂಡಿಎಂಎ ಸಾಗಾಟದ ಜಾಲ ಪತ್ತೆ: ₹1.58 ಕೋಟಿ ಮೌಲ್ಯದ ಮಾದಕವಸ್ತು ವಶ – vishwanews24

ಕೋರಿಯರ್ ಮೂಲಕ ವಾಟರ್ ಪ್ಯೂರಿಫೈಯರ್‌ನಲ್ಲಿ ಎಂಡಿಎಂಎ ಸಾಗಾಟ.. ಮಂಗಳೂರು ಸಿಸಿಬಿ ಬಲೆಗೆ ಮೂವರು ಆರೋಪಿಗಳು; ₹1.58 ಕೋಟಿ ಮೌಲ್ಯದ ಸೊತ್ತು…

10 hours ago

ಮಂಗಳೂರು:  ಅನುಮಾನಾಸ್ಪದ ಸಾವು ಪ್ರಕರಣ ; ಎರಡು ತಿಂಗಳ ಬಳಿಕ ಸಮಾಧಿಯಿಂದ ಶವ ಹೊರತೆಗೆದು ಮರಣೋತ್ತರ ಪರೀಕ್ಷೆ – vishwanews24

ಮಂಗಳೂರು:  ಅನುಮಾನಾಸ್ಪದ ಸಾವು ಪ್ರಕರಣ ; ಎರಡು ತಿಂಗಳ ಬಳಿಕ ಸಮಾಧಿಯಿಂದ ಶವ ಹೊರತೆಗೆದು ಮರಣೋತ್ತರ ಪರೀಕ್ಷೆ ಮಂಗಳೂರು: ಅನುಮಾನಾಸ್ಪದ…

10 hours ago