Featured

ಶ್ರೀ ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ : ಮಾ.2ರಂದು ಡಿಸಿಎಂ ಡಿ.ಕೆ. ಶಿವಕುಮಾರ್ ಕಾಪುವಿಗೆ – vishwanews24

ಕಾಂಗ್ರೆಸ್ ಕುಟುಂಬೋತ್ಸವ ಕಾರ್ಯಕ್ರಮದಲ್ಲಿ ಭಾಗಿ

ಉಡುಪಿ: ರಾಜ್ಯದ ಉಪಮುಖ್ಯಮಂತ್ರಿ ಹಾಗೂ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್ ಮಾ.2 ರಂದು ಉಡುಪಿಯ ಕಾಂಗ್ರೆಸ್ ಭವನಕ್ಕೆ ಭೇಟಿ ನೀಡಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯ ಕರ್ತರನ್ನುದ್ದೇಶಿಸಿ ಮಾತನಾಡಲಿದ್ದಾರೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕಕುಮಾರ್ ಕೊಡವೂರು ತಿಳಿಸಿದ್ದಾರೆ.

ನಾಯರ್‌ಕೆರೆಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಅವರು ಈ ವಿಷಯ ತಿಳಿಸಿದರು. ಮಾ.2ರ ರವಿವಾರ ಬೆಳಗ್ಗೆ ಕಾಪುವಿಗೆ ಆಗಮಿಸುವ ಡಿಕೆಶಿ ಅವರು ಅಲ್ಲಿ ಮಾರಿಕಾಂಬಾ ದೇವಿಯ ಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ಭಾಗವಹಿಸುವರು ಎಂದರು.ಆ ಬಳಿಕ ಅಪರ್ನಾ 12:30ರ ಸುಮಾರಿಗೆ ಅವರು ಉಪಮುಖ್ಯಮಂತ್ರಿ ಯಾಗಿ ಮೊದಲ ಬಾರಿ ಜಿಲ್ಲಾ ಕಾಂಗ್ರೆಸ್ ಭವನಕ್ಕೆ ಭೇಟಿ ನೀಡಲಿದ್ದಾರೆ ಎಂದ ಅವರು ಕಾಪುವಿನಲ್ಲಿ ಡಿಕೆಶಿ ಅವರನ್ನು ಸ್ವಾಗತಿಸಿ ಉಡುಪಿಗೆ ಕರೆತರಲಾಗುವುದು ಎಂದರು.

ಇಲ್ಲಿನ ಕಾರ್ಯಕ್ರಮದ ಬಳಿಕ ಅಪರಾಹ್ನ 2ಗಂಟೆಗೆ ಅವರು ವಾಹನಗಳ ಬೃಹತ್ ರ್ಯಾಲಿಯಲ್ಲಿ ಕಾರ್ಕಳಕ್ಕೆ ತೆರಳಲಿದ್ದು 4ಗಂಟೆಗೆ ಕಾರ್ಕಳದ ಗಾಂಧಿ ಮೈದಾನದಲ್ಲಿ ನಡೆಯುವ ಕಾಂಗ್ರೆಸ್ ಕುಟುಂಬೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲಿ ದ್ದಾರೆ ಎಂದರು. ಈ ಕಾರ್ಯಕ್ರಮದಲ್ಲಿ ಜಿಲ್ಲೆಯ 15,000ಕ್ಕೂ ಅಧಿಕ ಕಾಂಗ್ರೆಸ್ ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ ಎಂದವರು ತಿಳಿಸಿದರು.ಪತ್ರಿಕಾಗೋಷ್ಠಿಯಲ್ಲಿ ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ, ಹಿರಿಯ ಕಾಂಗ್ರೆಸ್ ನಾಯಕರಾದ ಎಂ.ಎ.ಗಫೂರ್, ಮುನಿಯಾಲು ಉದಯ ಕುಮಾರ್ ಶೆಟ್ಟಿ, ಕಿಶನ್‌ಹೆಗ್ಡೆ ಕೊಳ್ಕೆಬೈಲ್, ದಿನೇಶ್ ಹೆಗ್ಡೆ ಮೊಳಹಳ್ಳಿ, ಪ್ರಸಾದ್‌ರಾಜ್ ಕಾಂಚನ್, ರಾಜು ಪೂಜಾರಿ, ರಮೇಶ್ ಕಾಂಚನ್, ಡಾ.ಸುನೀತಾ ಶೆಟ್ಟಿ, ಹರೀಶ್ ಕಿಣಿ, ಭಾಸ್ಕರ ರಾವ್ ಕಿದಿಯೂರು ಮುಂತಾದ ವರು ಉಪಸ್ಥಿತರಿದ್ದರು.

Vishwa News 24

Recent Posts

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

19 hours ago

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

21 hours ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

21 hours ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

21 hours ago

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

22 hours ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

22 hours ago