Featured

ಷೇರು ಮಾರುಕಟ್ಟೆ ಹೂಡಿಕೆ ಹೆಸರಿನಲ್ಲಿ 10 ಲಕ್ಷ ರೂ.ವಂಚನೆ ಪ್ರಕರಣ: ಮಹಿಳೆ ಬಂಧನ – vishwanews24

ಷೇರು ಮಾರುಕಟ್ಟೆ ಹೂಡಿಕೆ ಹೆಸರಿನಲ್ಲಿ 10 ಲಕ್ಷ ರೂ.ವಂಚನೆ ಪ್ರಕರಣ: ಮುಂಬಯಲ್ಲಿ ಉಡುಪಿ ಮೂಲದ ಮಹಿಳೆ ಬಂಧನ

ಮುಂಬೈ,: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭ ದೊರೆಯುತ್ತದೆ ಎಂದು ನಂಬಿಸಿ ಮಹಿಳೆ ಹಾಗೂ ಆಕೆಯ ಸಹೋದರನಿಗೆ ಸುಮಾರು 10 ಲಕ್ಷ ರೂ. ವಂಚನೆ ಮಾಡಿದ ಆರೋಪದ ಮೇಲೆ ಉಡುಪಿ ಮೂಲದ ಮಹಿಳೆಯನ್ನು ಕಾಂದಿವಲಿ ಪಶ್ಚಿಮ ಪೊಲೀಸರು ಬಂಧಿಸಿದ್ದಾರೆ. ಚೆಕ್ ಬೌನ್ಸ್ ಹಾಗೂ ವಂಚನೆ ಪ್ರಕರಣಗಳಲ್ಲಿ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಬಂಧಿತ ಆರೋಪಿಯನ್ನು ಉಡುಪಿ ಜಿಲ್ಲೆಯ ಕೊಳಲಗಿರಿ-ಕುಕ್ಕಿಕಟ್ಟೆ ಮೂಲದ ದೀಪಿಕಾ ಮನೋಜ್ ಶೆಟ್ಟಿ ಎಂದು ಗುರುತಿಸಲಾಗಿದೆ. ರಜನಿ(60) ದಯಾನಂದ ಶೆಟ್ಟಿ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಪೊಲೀಸರ ಪ್ರಕಾರ, ದೂರುದಾರೆ ರಜನಿ ಅವರ ಸೋದರಸಂಬಂಧಿ ಹರೀಶ್ ಶೆಟ್ಟಿ ಅವರು ನಿರ್ಮಲ್ ಬಂಗ್ ಎಂಬ ಸ್ಟಾಕ್ ಬ್ರೋಕಿಂಗ್ ಏಜೆನ್ಸಿಯಲ್ಲಿ ಖಾತೆಯನ್ನು ಹೊಂದಿದ್ದರು. ಅದೇ ಏಜೆನ್ಸಿಯಲ್ಲಿ ಕೆಲಸ ಮಾಡುತ್ತಿದ್ದ ಕಾರಣ ರಜನಿ ಅವರಿಗೆ ದೀಪಿಕಾ ಪರಿಚಯವಾಗಿದ್ದಳು.

2024ರ ಸೆಪ್ಟೆಂಬರ್‌ನಲ್ಲಿ ಕಮಲಾ ವಿಹಾರ್ ಸ್ಪೋರ್ಟ್ಸ್ ಕ್ಲಬ್‌ನಲ್ಲಿ ನಡೆದ ಭೇಟಿಯ ವೇಳೆ, 1 ಲಕ್ಷ ಹೂಡಿಕೆ ಮಾಡಿದರೆ ಮೂರು ತಿಂಗಳ ಬಳಿಕ ಪ್ರತಿ ತಿಂಗಳು 20 ಶೇಕಡಾ ಲಾಭದಂತೆ 60,000 ರೂ. ಆದಾಯ ಸಿಗುತ್ತದೆ ಎಂದು ದೀಪಿಕಾ ರಜನಿ ಅವರಿಗೆ ಭರವಸೆ ನೀಡಿದ್ದಳು ಎನ್ನಲಾಗಿದೆ.

ಆಕೆಯ ಮಾತುಗಳನ್ನು ನಂಬಿದ ರಜನಿ, 2024ರ ಅಕ್ಟೋಬರ್‌ನಿಂದ ಡಿಸೆಂಬರ್ ನಡುವೆ ಹಂತ ಹಂತವಾಗಿ ತಮ್ಮ ಆಕ್ಸಿಸ್ ಬ್ಯಾಂಕ್ ಖಾತೆಯಿಂದ ಆರ್‌ಟಿಜಿಎಸ್ ಮೂಲಕ ದೀಪಿಕಾ ಅವರ ಪಂಜಾಬ್ ನ್ಯಾಷನಲ್ ಬ್ಯಾಂಕ್ ಖಾತೆಗೆ ಒಟ್ಟು 9 ಲಕ್ಷ ರೂ. ವರ್ಗಾಯಿಸಿದ್ದಾರೆ. ಇದೇ ವೇಳೆ, ರಜನಿಯ ಸಹೋದರ ಹರೀಶ್ ಶೆಟ್ಟಿ ಅವರು ತಮ್ಮ ಭಾರತ್ ಬ್ಯಾಂಕ್ ಖಾತೆಯಿಂದ 2 ಲಕ್ಷ ರೂ.ಯನ್ನು ದೀಪಿಕಾ ಖಾತೆಗೆ ವರ್ಗಾಯಿಸಿದ್ದರು.

ನಂತರ, ದೀಪಿಕಾ ಅವರು ಲಾಭಾಂಶವನ್ನೂ ನೀಡಲಿಲ್ಲ, ಅಸಲು ಹಣವನ್ನೂ ಹಿಂದಿರುಗಿಸಲಿಲ್ಲ. ಹಣ ಮರಳಿಸುವಂತೆ ಒತ್ತಾಯಿಸಿದಾಗ, ದೀಪಿಕಾ ತಮ್ಮ ಪಂಜಾಬ್ ನ್ಯಾಷನಲ್ ಬ್ಯಾಂಕ್ ಹಾಗೂ ಕೆನರಾ ಬ್ಯಾಂಕ್ ಖಾತೆಗಳಿಂದ 8,58,600 ರೂ. ಮೌಲ್ಯದ ಚೆಕ್‌ಗಳನ್ನು ನೀಡಿದ್ದಳು. ಆದರೆ, ಖಾತೆಯಲ್ಲಿ ಸಾಕಷ್ಟು ಹಣ ಇಲ್ಲದ ಕಾರಣ ಚೆಕ್‌ಗಳು ಬೌನ್ಸ್ ಆಗಿದ್ದು, ಬಳಿಕ ದೀಪಿಕಾ ಸಂಪರ್ಕ ತಪ್ಪಿಸಲು ಆರಂಭಿಸಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ತಾವು ಸುಮಾರು 10 ಲಕ್ಷ ವಂಚನೆಗೆ ಒಳಗಾಗಿರುವುದು ಅರಿತ ರಜನಿ, ಕಾಂದಿವಲಿ ಪೊಲೀಸ್ ಠಾಣೆಯಲ್ಲಿ ಅಧಿಕೃತ ದೂರು ದಾಖಲಿಸಿ ಆರೋಪಿಯ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.

ಕಾಂದಿವಲಿ ಪೊಲೀಸ್ ಠಾಣೆಯ ಸಹಾಯಕ ಪೊಲೀಸ್ ನಿರೀಕ್ಷಕ ಸೋಹನ್ ಸುರೇಶ್ ರಾವ್ ಕಡಂ ಅವರು ಮುಖ್ಯ ಪೊಲೀಸ್ ನಿರೀಕ್ಷಕ ಕರಣ್ ಗುಣಾಜಿ ಸೋನಿ ಅವರ ಮಾರ್ಗದರ್ಶನದಲ್ಲಿ ಪ್ರಕರಣದ ತನಿಖೆ ನಡೆಸಿದರು. ಬಳಿಕ ದೀಪಿಕಾ ಶೆಟ್ಟಿಯನ್ನು ಬಂಧಿಸಿದ ಪೊಲೀಸರು, ವಂಚನೆಗೆ ಒಳಗಾದ ಹಣವನ್ನು ಮರುಪಾವತಿಸಲು ವಿಫಲವಾದ ಹಿನ್ನೆಲೆಯಲ್ಲಿ ಆಕೆಯನ್ನು ಮುಂಬೈ ನಾಗಪಾಡಾದಲ್ಲಿರುವ ಬೈಕುಲ್ಲಾ ಮಹಿಳಾ ಕಾರಾಗೃಹಕ್ಕೆ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದ್ದಾರೆ.

Vishwa News 24

Recent Posts

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ – vishwanews24

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…

6 hours ago

ಬದುಕಿದ್ದಾಗ ಭಿಕ್ಷುಕಿಯಾಗಿದ್ದ ವೃದ್ಧೆ ಸತ್ತ ಮೇಲೆ ಲಕ್ಷಾಧಿಪತಿ ..- vishwanews24

ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…

9 hours ago

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ – vishwanews24

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…

9 hours ago

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ – vishwanews24

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…

9 hours ago

ಉಡುಪಿ : 25 ಗಂಟೆಗಳ ಕಾಲ ಗಾಯನ ; ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ ದಾಖಲೆ – vishwanews24

25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್‌ ಬುಕ್‌ಆಫ್‌ ವರ್ಲ್ಡ್ ರೆಕಾರ್ಡ್‌ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…

9 hours ago

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ – vishwanews24

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]

10 hours ago