ಕೊಲಂಬೋ : ಶ್ರೀಲಂಕಾದ ಮಾಜಿ ಕ್ರಿಕೆಟಿಗ ಸನತ್ ಜಯಸೂರ್ಯ ದೇಶದ ಪ್ರಸ್ತುತ ಪರಿಸ್ಥಿತಿಯ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ್ದು, ತೀವ್ರ ಆರ್ಥಿಕ ಸಂಕಷ್ಟದ ವೇಳೆ ನೆರವು ನೀಡಿದ ಭಾರತವನ್ನು ನಮ್ಮ ದೇಶದ ”ದೊಡ್ಡಣ್ಣ” ಎಂದು ಕರೆದಿದ್ದಾರೆ.
ಎಎನ್ ಐ ಸುದ್ದಿಸಂಸ್ಥೆಯೊಂದಿಗೆ ನಡೆಸಿದ ಸಂದರ್ಶನದಲ್ಲಿ , ಜಯಸೂರ್ಯ ಅವರು, ”ಜನರು ಈ ಪರಿಸ್ಥಿತಿಯನ್ನು ಎದುರಿಸುತ್ತಿರುವುದು ದುರದೃಷ್ಟಕರ. ಅವರು ಹೀಗೆ ಬದುಕಲು ಸಾಧ್ಯವಿಲ್ಲ ಎಂದು ಪ್ರತಿಭಟನೆ ಆರಂಭಿಸಿದ್ದಾರೆ. ಗ್ಯಾಸ್ ಕೊರತೆ ಉಂಟಾಗಿದ್ದು, ಗಂಟೆಗಟ್ಟಲೆ ವಿದ್ಯುತ್ ಪೂರೈಕೆಯಾಗುತ್ತಿಲ್ಲ” ಎಂದು ಲಂಕಾ ಪರಿಸ್ಥಿತಿಯ ಕುರಿತು ವಿವರಿಸಿದ್ದಾರೆ.
”ಶ್ರೀಲಂಕಾ ಸರ್ಕಾರಕ್ಕೆ ತಾವು ಬಳಲುತ್ತಿರುವುದನ್ನು ತೋರಿಸಲು ಜನರು ಹೊರಗೆ ಬರಲು ಮತ್ತು ಪ್ರತಿಭಟಿಸಲು ಪ್ರಾರಂಭಿಸಿದ್ದಾರೆ. ಸಂಬಂಧಪಟ್ಟವರು ಈ ಬಗ್ಗೆ ಸರಿಯಾಗಿ ಗಮನಹರಿಸದಿದ್ದರೆ ಅನಾಹುತವಾಗುತ್ತದೆ. ಇದರ ಜವಾಬ್ದಾರಿಯು ಪ್ರಸ್ತುತ ಸರ್ಕಾರಕ್ಕೆ ಹೋಗುತ್ತದೆ” ಎಂದು ಅಭಿಪ್ರಾಯ ವ್ಯಕ್ತ ಪಡಿಸಿದ್ದಾರೆ.
”ನಮ್ಮ ದೇಶದ ನೆರೆಯ ಮತ್ತು ದೊಡ್ಡಣ್ಣನಾಗಿ, ಭಾರತ ಯಾವಾಗಲೂ ನಮಗೆ ಸಹಾಯ ಮಾಡಿದೆ. ನಾವು ಭಾರತ ಸರ್ಕಾರ ಮತ್ತು ಪ್ರಧಾನಿ ಮೋದಿಯವರಿಗೆ ಆಭಾರಿಯಾಗಿದ್ದೇವೆ. ಸದ್ಯದ ಸನ್ನಿವೇಶದಿಂದ ನಮಗೆ ಬದುಕುವುದು ಸುಲಭವಲ್ಲ. ಭಾರತ ಮತ್ತು ಇತರ ದೇಶಗಳ ಸಹಾಯದಿಂದ ಇದರಿಂದ ಹೊರಬರಲು ಸಾಧ್ಯವಿದೆ ಎಂದು ನಾವು ಭಾವಿಸುತ್ತೇವೆ” ಎಂದು ಅವರು ಹೇಳಿದ್ದಾರೆ.
ಭಾರತ ನಮಗೆ ದೊಡ್ಡಣ್ಣ ಇದ್ದಂತೆ. ಭಾರತವನ್ನು ಅನುಸರಿಸುವುದೇ ಉತ್ತಮ’ ಎಂದು ಪ್ರತಿಪಕ್ಷ ಮುಖಂಡ, ಮಾಜಿ ಕ್ರಿಕೆಟಿಗ ಅರ್ಜುನ ರಣತುಂಗ, ಚೀನ ರೂಪಿಸಿದ ಸಾಲದ ಕೂಪದಲ್ಲಿ ಬಿದ್ದು ಪರದಾಡುತ್ತಿರುವ ಲಂಕಾ ಸರಕಾರಕ್ಕೆ ಬುದ್ಧಿ ಹೇಳಿದ್ದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…