Featured

ಸಂಕ್ರಾಂತಿ ನಂತರ ಯಡಿಯೂರಪ್ಪ ಅವರು ಅಧಿಕಾರದಲ್ಲಿ ಇರುವುದಿಲ್ಲ : ಕಾಂಗ್ರೆಸ್ ನಾಯಕ ಬೇಳೂರು ಗೋಪಾಲಕೃಷ್ಣ ಭವಿಷ್ಯ -Vishwanews24

ಸಂಕ್ರಾಂತಿ ನಂತರ ಯಡಿಯೂರಪ್ಪ ಅವರು ಅಧಿಕಾರದಲ್ಲಿ ಇರುವುದಿಲ್ಲ : ಕಾಂಗ್ರೆಸ್ ನಾಯಕ ಬೇಳೂರು ಗೋಪಾಲಕೃಷ್ಣ ಭವಿಷ್ಯ -Vishwanews24

ಶಿವಮೊಗ್ಗ : ಸಿಎಂ ಬಿ.ಎಸ್. ಯಡಿಯೂರಪ್ಪಗೆ ಸಿಗಂದೂರು ದೇವಿಯ ಶಾಪ ತಟ್ಟಿದ್ದು, ಸಂಕ್ರಾಂತಿ ನಂತರ ಯಡಿಯೂರಪ್ಪ ಅವರು ಅಧಿಕಾರದಲ್ಲಿ ಇರುವುದಿಲ್ಲ ಎಂದು ಕಾಂಗ್ರೆಸ್ ನಾಯಕ ಬೇಳೂರು ಗೋಪಾಲಕೃಷ್ಣ ಭವಿಷ್ಯ ನುಡಿದಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಸ್ಥಾನದಲ್ಲಿ ಬದಲಾವಣೆ ಆಗುತ್ತೆ ಎಂದು ಭವಿಷ್ಯ ಹೇಳುತ್ತಿಲ್ಲ. ತನಗೆ ಬಂದ ಮಾಹಿತಿ ಪ್ರಕಾರ ಯಡಿಯೂರಪ್ಪ ಅವರನ್ನು ಕೆಳಗಿಳಿಸಲು ಪ್ರಯತ್ನಗಳು ನಡೆಯುತ್ತಿವೆ. ಜನವರಿ 16 ರ ನಂತರ ಅವರು ಅಧಿಕಾರದಲ್ಲಿ ಮುಂದುವರಿಯುವ ಸಾಧ್ಯತೆ ಇಲ್ಲ ಎಂದು ಹೇಳಿದ್ದಾರೆ.

ಸಿಗಂದೂರು ಕ್ಷೇತ್ರದ ವಿಚಾರದಲ್ಲಿ ಮಧ್ಯಪ್ರವೇಶ ಮಾಡಿ ಯಡಿಯೂರಪ್ಪ ದೇವಿಯ ಶಾಪಕ್ಕೆ ತುತ್ತಾಗಿದ್ದಾರೆ. ಹೀಗಾಗಿಯೇ ಅವರ ವಿರುದ್ಧ ಮತ್ತೊಂದು ಡೀನೋಟಿಫಿಕೇಶನ್ ಪ್ರಕರಣ ಬಂದಿದೆ. ಇದು ದೇವಿಯ ಶಾಪ ತಟ್ಟಿರುವುದಕ್ಕೆ ಸಾಕ್ಷಿ ಎಂದು ಹೇಳಿದ್ದಾರೆ.

ಹೊಸ ವರ್ಷಾಚರಣೆ ಸರ್ಕಾರ ನಿಷೇಧ ಹೇರಿರುವುದು ಖಂಡನೀಯ. ಯುವ ಪೀಳಿಗೆಯ ಸಂಭ್ರಮಾಚರಣೆಗೆ ಕಡಿವಾಣ ಹಾಕುವ ಅಧಿಕಾರ ಸರ್ಕಾರಕ್ಕೆ ಇಲ್ಲ ಎಂದು ಸಾಗರದ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದರು.

ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಆರ್ ಎಸ್‌ಎಸ್ ಪ್ರೇರಿತ ಸಿದ್ಧಾಂತಗಳನ್ನು ಸರ್ಕಾರ ಜಾರಿಗೊಳಿಸಲು ಮುಂದಾಗಿದೆ. ಇದರ ಭಾಗವಾಗಿ ಕ್ರಿಸ್ಮಸ್ ಆಚರಣೆಗೆ ಗುಂಪು ಗೂಡುವುದನ್ನು ನಿಷೇಧಿಸಿತು., ಇದೀಗ ಯುವಕರ ಹೊಸ ವರ್ಷಾಚರಣೆಗೆ ಕಡಿವಾಣ ಹಾಕುತ್ತಿದೆ. ಯಡಿಯೂರಪ್ಪ ಅವರಿಗೆ ವಯಸ್ಸಾಗಿದೆ. ಅವರ ಸರ್ಕಾರಕ್ಕೆ ಕಣ್ಣು, ಕಿವಿ ಇಲ್ಲ ಎಂದು ಟೀಕಿಸಿದರು.

ಆರ್ ಆರ್ ನಗರ ಉಪ ಚುನಾವಣೆ ವೇಳೆಯಲ್ಲಿ 20 ಸಾವಿರ ಜನರ ಸೇರಿಸಿ ಸಭೆ, ಮೆರವಣಿಗೆ ಮಾಡಿದರು. ಆವಾಗ ಸರ್ಕಾರಕ್ಕೆ ಕೋವಿಡ್ ನೆನಪು ಇರಲಿಲ್ಲಲ್ವಾ, ಯಡಿಯೂರಪ್ಪ ಏನು ತಜ್ಞರೇ. ಯಾರಿಗೂ ಹೇಳದೆ, ಕೇಳದೆ ರಾತ್ರಿ ಕರ್ಫ್ಯೂ ಜಾರಿಗೊಳಿಸಿದರು. ಆದರೆ ಮರುದಿನವೇ ಅದನ್ನು ಹಿಂತೆಗೆದುಕೊಳ್ಳುವ ಕೆಲಸ ಮಾಡಿದ್ದಾರೆ ಎಂದರು.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

4 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

4 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

4 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

4 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

4 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

4 days ago