Featured

ಸಂಗಾತಿ ಅನುಮತಿಯಿಲ್ಲದೇ ಕಾಲ್​ ರೆಕಾರ್ಡ್ ಮಾಡುವುದು ಕಾನೂನುಬಾಹಿರ : ಹೈಕೋರ್ಟ್ ಮಹತ್ವದ ಆದೇಶ – VIshwanews24

ಸಂಗಾತಿ ಅನುಮತಿಯಿಲ್ಲದೇ ಕಾಲ್​ ರೆಕಾರ್ಡ್ ಮಾಡುವುದು ಕಾನೂನುಬಾಹಿರ : ಹೈಕೋರ್ಟ್ ಮಹತ್ವದ ಆದೇಶ – VIshwanews24

ಚಂಢಿಗಡ : ಪತ್ನಿಯ ನಕಾರಾತ್ಮಕ ಗುಣಗಳನ್ನು ತೋರಿಸುವ ಸಲುವಾಗಿ ಆಕೆಯ ಅನುಮತಿ ಇಲ್ಲದೆಯೇ ಆಕೆಯ ಕಾಲ್​ ರೆಕಾರ್ಡ್ ಮಾಡುವುದು ಖಾಸಗಿತನದ ಉಲ್ಲಂಘನೆಯಾಗಿದೆ ಎಂದು ಪಂಜಾಬ್​ನ ಹೈಕೋರ್ಟ್​ ಹೇಳಿದೆ. ಈ ಮೂಲಕ ಪತ್ನಿಯ ಕಾಲ್​ ರೆಕಾರ್ಡ್​ನ್ನು ಸಾಕ್ಷ್ಯ ಎಂದು ಪರಿಗಣಿಸಿದ್ದ, ಕುಟುಂಬ ನ್ಯಾಯಾಲಯದ ಆದೇಶವನ್ನು ರದ್ದು ಮಾಡಿದೆ.

ಪಂಜಾಬ್​ ಹಾಗೂ ಹರಿಯಾಣ ಹೈಕೋರ್ಟ್​ನಲ್ಲಿ ಅರ್ಜಿ ಸಲ್ಲಿಸಿದ್ದ ಮಹಿಳೆಯು ತನ್ನ ಹಾಗೂ ಪತಿಯ ನಡುವೆ ವೈವಾಹಿಕ ಸಂಬಂಧ ಸರಿಯಾಗಿಲ್ಲ ಎಂದು ದೂರಿದ್ದರು.

ಈ ವಿವಾದ ನಡೆಯುತ್ತಿರುವಾಗಲೇ ಬಟಿಂಡಾ ಕೌಟುಂಬಿಕ ನ್ಯಾಯಾಲಯದಲ್ಲಿ ಪತಿಯು ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದರು. ಈ ವೇಳೆ ಪತಿಯು ತಮ್ಮ ಪತ್ನಿಯ ಕಾಲ್​ ರೆಕಾರ್ಡಿಂಗ್​ನ್ನು ಸಾಕ್ಷ್ಯದ ರೂಪದಲ್ಲಿ ಪ್ರಸ್ತುತ ಪಡಿಸಿದ್ದರು. ಇದನ್ನು ಕೌಟುಂಬಿಕ ನ್ಯಾಯಾಲಯ ಸಾಕ್ಷ್ಯ ಎಂದು ಪರಿಗಣಿಸಿತ್ತು. ಆದರೆ ಈ ಆದೇಶವನ್ನು ಪಂಜಾಬ್​ ಹಾಗೂ ಹರಿಯಾಣ ಹೈಕೋರ್ಟ್ ತಳ್ಳಿ ಹಾಕಿದೆ.

ಕಾಲ್​ ರೆಕಾರ್ಡಿಂಗ್​ನ್ನು ಪ್ರಸ್ತುತ ಪಡಿಸುವ ಮೂಲಕ ಪತ್ನಿಯು ತಪ್ಪಿತಸ್ಥೆ ಎಂಬುದನ್ನು ಈ ಸಂಭಾಷಣೆಯ ಮೂಲಕ ಸಾಬೀತುಪಡಿಸಲು ಮುಂದಾಗಿದ್ದ ಪತಿಯ ನಡೆ ವಿರುದ್ಧ ಆಶ್ಚರ್ಯ ವ್ಯಕ್ತಪಡಿಸಿದ ಪಂಜಾಬ್​ ಹಾಗೂ ಹರಿಯಾಣ ಹೈಕೋರ್ಟ್, ಒಬ್ಬ ವ್ಯಕ್ತಿಯ ಖಾಸಗಿತನದ ಹಕ್ಕನ್ನು ಹೇಗೆ ಉಲ್ಲಂಘನೆ ಮಾಡಲು ಸಾಧ್ಯ..? ಎಂದು ಪ್ರಶ್ನೆ ಮಾಡಿದೆ.

ಸಂಗಾತಿಯ ಒಪ್ಪಿಗೆ ಇಲ್ಲದೆಯೇ ಆಕೆಯ ಕಾಲ್​ ರೆಕಾರ್ಡ್​ನ್ನು ಪರಿಶೀಲಿಸುವುದು ಖಾಸಗಿತನದ ಹಕ್ಕಿನ ಉಲ್ಲಂಘನೆಯಾಗಿದೆ. ವಿಚ್ಚೇದನ ಪ್ರಕರಣ ಕುರಿತಂತೆ ಆರು ತಿಂಗಳ ಒಳಗಾಗಿ ನಿರ್ಧಾರ ತೆಗೆದುಕೊಳ್ಳುವಂತೆ ಬಂಟಿಂಡಾ ಕೌಟುಂಬಿಕ ನ್ಯಾಯಾಲಯಕ್ಕೆ ಹೈಕೋರ್ಟ್ ಸೂಚನೆ ನೀಡಿದೆ. ಹಾಗೂ ಫೋನ್​ ರೆಕಾರ್ಡಿಂಗ್​ನ್ನು ಯಾವುದೇ ಕಾರಣಕ್ಕೂ ಸಾಕ್ಷ್ಯವೆಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ಹೇಳಿದೆ.

ಖಾಸಗಿತನದ ಹಕ್ಕನ್ನು ಆರ್ಟಿಕಲ್ 21 ರ ಅಡಿಯಲ್ಲಿ ಜೀವಿಸುವ ಹಕ್ಕಿನ ಅತ್ಯಗತ್ಯ ಅಂಶವೆಂದು ಗುರುತಿಸಲಾಗಿದೆ ಆಂತ ತಿಳಿಸಿದೆ.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

45 minutes ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

57 minutes ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

1 hour ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

4 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

4 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

5 hours ago