ಮುಂಬೈ :ಖ್ಯಾತ ಗಾಯಕ ಸೋನು ನಿಗಮ್ ಅವರ ಆರೋಗ್ಯದಲ್ಲಿ ಏರುಪೇರಾಗಿದೆ. ಪುಣೆಯಲ್ಲಿ ನಡೆಯುತ್ತಿದ್ದ ಸಂಗೀತ ಕಾರ್ಯಕ್ರಮದ ವೇಳೆ ಬೆನ್ನು ನೋವಿನಿಂದ ಬಳಲುತ್ತಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ತಮ್ಮ ಆರೋಗ್ಯದ ಬಗ್ಗೆ ಫ್ಯಾನ್ಸ್‌ಗೆ ಗಾಯಕ ಸೋಶಿಯಲ್ ಮೀಡಿಯಾದಲ್ಲಿ ವಿವರಿಸಿ ಪೋಸ್ಟ್ ಹಾಕಿದ್ದಾರೆ.
ಇತ್ತೀಚೆಗೆ ಲೈವ್ ಕಾನ್ಸರ್ಟ್ ವೇಳೆ ಅವರಿಗೆ ಬೆನ್ನು ನೋವಿನ ಸಮಸ್ಯೆ ಕಾಣಿಸಿಕೊಂಡಿದೆ. ನೋವು ಅನ್ನು ತೋರಿಸಿಕೊಳ್ಳದೇ ಒಪ್ಪಿಕೊಂಡಿದ್ದ ಸಂಗೀತ ಕಾರ್ಯಕ್ರಮವನ್ನು ಮುಗಿಸಿಕೊಟ್ಟು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಸೋನು ನಿಗಮ್ ಪೋಸ್ಟ್‌ನಲ್ಲಿ, ನನ್ನ ಜೀವನದ ಅತ್ಯಂತ ಕಷ್ಟದ ದಿನ. ನಾನು ಹಾಡು ಹೇಳುತ್ತಾ, ವೇದಿಕೆ ಮೇಲೆಲ್ಲ ಓಡಾಡುತ್ತಾ ಇದ್ದೆ. ಆಗ ನನಗೆ ಬೆನ್ನು ನೋವು ಕಾಣಿಸಿಕೊಂಡಿದೆ. ಆದರೆ, ಹೇಗೋ ಆ ಸಂದರ್ಭ ನಿಭಾಯಿಸಿದೆ. ಅಭಿಮಾನಿಗಳು ನನ್ನಿಂದ ಎಷ್ಟನ್ನು ನಿರೀಕ್ಷಿಸುತ್ತಾರೋ ಅದಕ್ಕಿಂತ ಕಡಿಮೆ ಕೊಡಲು ನನಗೆ ಇಷ್ಟ ಇಲ್ಲ ಎಂದು ಅವರು ಹೇಳಿದ್ದಾರೆ. ನನ್ನ ಬೆನ್ನು ಹುರಿಗೆ ಯಾರೋ ಇಂಜೆಕ್ಷನ್ ಸೂಜಿ ಇಟ್ಟಿದ್ದಾರೆ ಅನಿಸುತ್ತಿತ್ತು. ಸ್ವಲ್ಪ ಅಲ್ಲಾಡಿದರೂ ನೋವು ಹೆಚ್ಚಾಗುತ್ತಿತ್ತು ಎಂದು ಅವರು ಹೇಳಿರೋ ವಿಡಿಯೋ ಹಂಚಿಕೊಂಡಿದ್ದಾರೆ. ಪೋಸ್ಟ್‌ನಲ್ಲಿ ಕ್ಯಾಪ್ಶನ್‌ನಲ್ಲಿ ರಾತ್ರಿ ಸರಸ್ವತಿ ನನ್ನ ಕೈ ಹಿಡಿದರು ಎಂದಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…