ಉಡುಪಿ: ಸುಳ್ಯದ ಬೆಳ್ಳಾರೆಯಲ್ಲಿ ಜಿಹಾದಿಗಳಿಂದ ಪ್ರವೀಣ್ ನೆಟ್ಟಾರ್ ಕಗ್ಗೊಲೆಯಾಗಿದೆ. ಕೋಳಿ ಅಂಗಡಿ ಇಟ್ಟುಕೊಂಡು ಸಮಾಜ ಮುಖಿಯಾಗಿ ಕೆಲಸ ಮಾಡುತ್ತಿದ್ದನು. ಜಿಹಾದಿಗಳು ಭಾಜಪಕ್ಕೆ ನೀಡುವ ಬೆದರಿಕೆ ಹೊಸತಲ್ಲ. ಆದರೆ ಸಂಘಟನೆಯ ಶಕ್ತಿಯನ್ನು ಕುಗ್ಗಿಸಬೇಕು ಎಂದು ಜಿಹಾದಿಗಳು ಅಂದುಕೊಂಡಿದ್ದರೇ ಅದು ಸಾಧ್ಯವಿಲ್ಲ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು.
ಅವರು ಶನಿವಾರ ಉಡುಪಿ ಜಿಲ್ಲಾ ಕಚೇರಿಯಲ್ಲಿ ಜಿಲ್ಲಾ ಬಿಜೆಪಿಯಿಂದ ಪ್ರವೀಣ್ ನೆಟ್ಟಾರ್ ಹತ್ಯೆಯನ್ನು ಖಂಡಿಸಿ ನಡೆದ ಶ್ರದ್ದಾಂಜಲಿ ಸಭೆಯಲ್ಲಿ ಮಾತನಾಡಿದರು.
ಸರಕಾರ ಹರ್ಷ ಹತ್ಯೆ, ಪ್ರವೀಣ್ ಹತ್ಯೆಯನ್ನು ಗಂಭೀರವಾಗಿ ಪರಿಗಣಿಸಿ, ಎನ್.ಐ.ಎ ಗೆ ವಹಿಸಿದೆ. ಹಿಂದೂ ಕಾರ್ಯಕರ್ತರನ್ನು ಕೊಲೆ ಮಾಡುವುದು ನೆಪ ಮಾತ್ರ. ಆದರೆ ಇದರ ಹಿಂದೆ ಇರುವ ಮತಾಂಧಿಯರ ಹುನ್ನಾರವನ್ನು ಅರಿಯಬೇಕಿದೆ.
ಬಿಜೆಪಿ ಪಕ್ಷಕ್ಕೆ ಇದು ಪರೀಕ್ಷೆಯ ಕಾಲಘಟ್ಟ. ಕಾರ್ಯಕರ್ತರು ಮನನೊಂದು ರಾಜಿನಾಮೆ ಕೊಡುವುದು ಸೂಕ್ತ ಅಲ್ಲ. ಮನೆಗೆ ಬೆಂಕಿ ಬಿದ್ದಾಗ ಅಗ್ನಿಶಾಮಕ ದಳವನ್ನು ಕರಿಯಬೇಕು, ಅದನ್ನು ಬಿಟ್ಟು ಪೆಟ್ರೋಲ್ ಹುಡುಕುವುದಲ್ಲ. ನಾವೆಲ್ಲಾ ಒಟ್ಟಾಗಿ ಇಂತಹ ಸಂದರ್ಭವನ್ನು ಎದುರಿಸುವ ಎಂದು ಕಾರ್ಯಕರ್ತರಿಗೆ ಕರೆ ನೀಡಿದರು.
ಪ್ರವೀಣ್ ನೆಟ್ಟಾರು ಅವರ ಮನೆಗೆ ಉಡುಪಿ ಜಿಲ್ಲಾ ಬಿಜೆಪಿಯ ತಂಡ ಭೇಟಿ ನೀಡಿ ಆರ್ಥಿಕ ಸಹಾಯ ಮಾಡುತ್ತೇವೆ ಎಂದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ರಘುಪತಿ ಭಟ್, ಎಸ್ ಡಿ ಪಿಐ ಪಿಎಫ್ ಐ ಸಂಘಟನೆಗಳನ್ನು ಮುಸ್ಲಿಂ ಸಮಾಜ ದೂರವಿಟ್ಟಾಗ ಸ್ವಾಸ್ಥ್ಯ ಸಮಾಜ ನಿರ್ಮಾಣ ಸಾಧ್ಯವಿದೆ. ಹಿಜಾಬ್ ವಿವಾದದಲ್ಲಿ ಕೈಜೋಡಿಸಿದ ಭಯೊತ್ಪಾಕ ಜಿಹಾದಿ ಸಂಘಟನೆಗಳು ಪ್ರವೀಣ್ ನೆಟ್ಟಾರ್ ಹತ್ಯೆಯಲ್ಲಿ ಕೈ ಜೋಡಿಸಿವೆ. ಪ್ರವೀಣ್ ಆತ್ಮಕ್ಕೆ ಚಿರಶಾಂತಿ ಕೋರುತ್ತೇನೆ ಎಂದರು.
ಬಿಜೆಪಿ ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್ ಅಧ್ಯಕ್ಷತೆ ವಹಿಸಿದ್ದರು. ಉಡುಪಿ ನಗರ ಸಭೆಯ ಅಧ್ಯಕ್ಷರಾದ ಸುಮಿತ್ರಾ ಆರ್ ನಾಯಕ್, ನಗರ ಬಿಜೆಪಿ ಅಧ್ಯಕ್ಷರಾದ ಮಹೇಶ್ ಠಾಕೂರ್, ಉಡುಪಿ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಾದ ವಿಖ್ಯಾತ್ ಶೆಟ್ಟಿ, ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷರಾದ ವೀಣಾ ಶೆಟ್ಟಿ, ರಾಜ್ಯ ಬಿಜೆಪಿ ಕಾರ್ಯಕಾರಣಿ ಸದಸ್ಯರಾದ ಗೀತಾಂಜಲಿ ಸುವರ್ಣ, ಉಡುಪಿ ನಗರ ಸಭೆಯ ಮಾಜಿ ಅಧ್ಯಕ್ಷರಾದ ಹೆರ್ಗ ದಿನಕರ್ ಶೆಟ್ಟಿ, ಯುವಮೋರ್ಚಾ ಜಿ.ಪ್ರ.ಕಾರ್ಯದರ್ಶಿ ಶರತ್ ಶೆಟ್ಟಿ ಉಪ್ಪುಂದ ಮತ್ತು ಪಕ್ಷದ ಹಿರಿಯರು, ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.
ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…
ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…
ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…
ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…
ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…