Featured

ಉಡುಪಿ : ಸಂಘಟನೆಯ ಶಕ್ತಿಯನ್ನು ಕುಗ್ಗಿಸಬೇಕು ಎಂದು ಜಿಹಾದಿಗಳು ಅಂದುಕೊಂಡಿದ್ದರೇ ಅದು ಸಾಧ್ಯವಿಲ್ಲ : ಕುಯಿಲಾಡಿ

ಜಿಲ್ಲಾ ಬಿಜೆಪಿಯಿಂದ ಪ್ರವೀಣ್ ನೆಟ್ಟಾರ್ ಹತ್ಯೆ ಖಂಡಿಸಿ ಶ್ರದ್ದಾಂಜಲಿ

ಹಿಂದೂ ಕಾರ್ಯಕರ್ತರ ಕೊಲೆ ಹಿಂದೆ ಮತಾಂಧಿಯರ ಹುನ್ನಾರ

ಕಾರ್ಯಕರ್ತರು ಮನನೊಂದು ರಾಜಿನಾಮೆ ಕೊಡುವುದು ಸೂಕ್ತ ಅಲ್ಲ..

ಪ್ರವೀಣ್ ನೆಟ್ಟಾರು ಅವರ ಮನೆಗೆ ಉಡುಪಿ ಜಿಲ್ಲಾ ಬಿಜೆಪಿಯಿಂದ ಆರ್ಥಿಕ ಸಹಾಯ

ನಾವೆಲ್ಲಾ ಒಟ್ಟಾಗಿ ಇಂತಹ ಸಂದರ್ಭವನ್ನು ಎದುರಿಸುವ – ಕಾರ್ಯಕರ್ತರಿಗೆ ಕರೆ ನೀಡಿದ ಕುಯಿಲಾಡಿ

ಉಡುಪಿ: ಸುಳ್ಯದ ಬೆಳ್ಳಾರೆಯಲ್ಲಿ ಜಿಹಾದಿಗಳಿಂದ ಪ್ರವೀಣ್ ನೆಟ್ಟಾರ್ ಕಗ್ಗೊಲೆಯಾಗಿದೆ‌. ಕೋಳಿ ಅಂಗಡಿ ಇಟ್ಟುಕೊಂಡು ಸಮಾಜ ಮುಖಿಯಾಗಿ ಕೆಲಸ ಮಾಡುತ್ತಿದ್ದನು. ಜಿಹಾದಿಗಳು ಭಾಜಪಕ್ಕೆ ನೀಡುವ ಬೆದರಿಕೆ ಹೊಸತಲ್ಲ. ಆದರೆ ಸಂಘಟನೆಯ ಶಕ್ತಿಯನ್ನು ಕುಗ್ಗಿಸಬೇಕು ಎಂದು ಜಿಹಾದಿಗಳು ಅಂದುಕೊಂಡಿದ್ದರೇ ಅದು ಸಾಧ್ಯವಿಲ್ಲ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು.

ಅವರು ಶನಿವಾರ ಉಡುಪಿ ಜಿಲ್ಲಾ ಕಚೇರಿಯಲ್ಲಿ ಜಿಲ್ಲಾ ಬಿಜೆಪಿಯಿಂದ ಪ್ರವೀಣ್ ನೆಟ್ಟಾರ್ ಹತ್ಯೆಯನ್ನು ಖಂಡಿಸಿ ನಡೆದ ಶ್ರದ್ದಾಂಜಲಿ ಸಭೆಯಲ್ಲಿ ಮಾತನಾಡಿದರು.

ಸರಕಾರ ಹರ್ಷ ಹತ್ಯೆ, ಪ್ರವೀಣ್ ಹತ್ಯೆಯನ್ನು ಗಂಭೀರವಾಗಿ ಪರಿಗಣಿಸಿ, ಎನ್.ಐ.ಎ ಗೆ ವಹಿಸಿದೆ. ಹಿಂದೂ ಕಾರ್ಯಕರ್ತರನ್ನು ಕೊಲೆ ಮಾಡುವುದು ನೆಪ ಮಾತ್ರ. ಆದರೆ ಇದರ ಹಿಂದೆ ಇರುವ ಮತಾಂಧಿಯರ ಹುನ್ನಾರವನ್ನು ಅರಿಯಬೇಕಿದೆ.

ಬಿಜೆಪಿ ಪಕ್ಷಕ್ಕೆ ಇದು ಪರೀಕ್ಷೆಯ ಕಾಲಘಟ್ಟ. ಕಾರ್ಯಕರ್ತರು ಮನನೊಂದು ರಾಜಿನಾಮೆ ಕೊಡುವುದು ಸೂಕ್ತ ಅಲ್ಲ. ಮನೆಗೆ ಬೆಂಕಿ ಬಿದ್ದಾಗ ಅಗ್ನಿಶಾಮಕ ದಳವನ್ನು ಕರಿಯಬೇಕು, ಅದನ್ನು ಬಿಟ್ಟು ಪೆಟ್ರೋಲ್ ಹುಡುಕುವುದಲ್ಲ. ನಾವೆಲ್ಲಾ ಒಟ್ಟಾಗಿ ಇಂತಹ ಸಂದರ್ಭವನ್ನು ಎದುರಿಸುವ ಎಂದು ಕಾರ್ಯಕರ್ತರಿಗೆ ಕರೆ ನೀಡಿದರು.

ಪ್ರವೀಣ್ ನೆಟ್ಟಾರು ಅವರ ಮನೆಗೆ ಉಡುಪಿ ಜಿಲ್ಲಾ ಬಿಜೆಪಿಯ ತಂಡ ಭೇಟಿ ನೀಡಿ ಆರ್ಥಿಕ ಸಹಾಯ ಮಾಡುತ್ತೇವೆ ಎಂದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ರಘುಪತಿ ಭಟ್, ಎಸ್ ಡಿ ಪಿಐ ಪಿಎಫ್ ಐ ಸಂಘಟನೆಗಳನ್ನು ಮುಸ್ಲಿಂ ಸಮಾಜ ದೂರವಿಟ್ಟಾಗ ಸ್ವಾಸ್ಥ್ಯ ಸಮಾಜ ನಿರ್ಮಾಣ ಸಾಧ್ಯವಿದೆ. ಹಿಜಾಬ್ ವಿವಾದದಲ್ಲಿ ಕೈಜೋಡಿಸಿದ ಭಯೊತ್ಪಾಕ ಜಿಹಾದಿ ಸಂಘಟನೆಗಳು ಪ್ರವೀಣ್ ನೆಟ್ಟಾರ್ ಹತ್ಯೆಯಲ್ಲಿ ಕೈ ಜೋಡಿಸಿವೆ. ಪ್ರವೀಣ್ ಆತ್ಮಕ್ಕೆ ಚಿರಶಾಂತಿ ಕೋರುತ್ತೇನೆ ಎಂದರು.

ಬಿಜೆಪಿ ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್ ಅಧ್ಯಕ್ಷತೆ ವಹಿಸಿದ್ದರು. ಉಡುಪಿ ನಗರ ಸಭೆಯ ಅಧ್ಯಕ್ಷರಾದ ಸುಮಿತ್ರಾ ಆರ್ ನಾಯಕ್, ನಗರ ಬಿಜೆಪಿ ಅಧ್ಯಕ್ಷರಾದ ಮಹೇಶ್ ಠಾಕೂರ್, ಉಡುಪಿ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಾದ ವಿಖ್ಯಾತ್ ಶೆಟ್ಟಿ, ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷರಾದ ವೀಣಾ ಶೆಟ್ಟಿ, ರಾಜ್ಯ ಬಿಜೆಪಿ ಕಾರ್ಯಕಾರಣಿ ಸದಸ್ಯರಾದ ಗೀತಾಂಜಲಿ ಸುವರ್ಣ, ಉಡುಪಿ ನಗರ ಸಭೆಯ ಮಾಜಿ ಅಧ್ಯಕ್ಷರಾದ ಹೆರ್ಗ ದಿನಕರ್ ಶೆಟ್ಟಿ, ಯುವಮೋರ್ಚಾ ಜಿ.ಪ್ರ.ಕಾರ್ಯದರ್ಶಿ ಶರತ್ ಶೆಟ್ಟಿ ಉಪ್ಪುಂದ ಮತ್ತು ಪಕ್ಷದ ಹಿರಿಯರು, ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.

Vishwa News 24

Recent Posts

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ -vishwanews24

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…

4 hours ago

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ – vishwanews24

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್​ ಬಳಕೆಯ ಆಧಾರದ ಮೇಲೆ ಜುಲೈ…

10 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ – vishwanews24

 ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…

10 hours ago

ಸತೀಶ್ ಕಡತನಮಲೆ 6 ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ  – vishwanews24

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ  ಬೆಂಗಳೂರು: ರಾಜ್ಯ ರೈತ…

12 hours ago

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…

12 hours ago

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ – vishwanews24

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…

12 hours ago