Featured

ಸಂಘಟನೆ ಇಲ್ಲದಿದ್ದರೆ ದೇಶ ಉದ್ಧಾರವಾಗಲು ಸಾಧ್ಯವಿಲ್ಲ : ವಿನಯ್‌ ಗುರೂಜಿ -Vishwanews24

ಸಂಘಟನೆ ಇಲ್ಲದಿದ್ದರೆ ದೇಶ ಉದ್ಧಾರವಾಗಲು ಸಾಧ್ಯವಿಲ್ಲ : ವಿನಯ್‌ ಗುರೂಜಿ -Vishwanews24

ಸಂಘಟನೆ ಇಲ್ಲದಿದ್ದರೆ ದೇಶ ಉದ್ಧಾರವಾಗಲು ಸಾಧ್ಯವಿಲ್ಲ,  ಸಂಘಟನೆ ಮೂಲಕ ಎಲ್ಲರೂ ಒಗ್ಗೂಡಿ ಕೆಲಸ ಮಾಡಬೇಕಿದೆ : ವಿನಯ್‌ ಗುರೂಜಿ -Vishwanews24

ಸಮಾಜದಲ್ಲಿ ರಾಜಕೀಯ ಮಾಡುವುದು ನನ್ನ ಉದ್ದೇಶವಲ್ಲ. ದೇಶ ಕಟ್ಟುವುದೇ ನಮ್ಮ ಉದ್ದೇಶ..

ಬಾಳೆಹೊನ್ನೂರು: ಸಂಘಟನೆ ಇಲ್ಲದಿದ್ದರೆ ದೇಶ ಉದ್ಧಾರವಾಗಲು ಸಾಧ್ಯವಿಲ್ಲ. ಸಂಘಟನೆ ಮೂಲಕ ಎಲ್ಲರೂ ಒಗ್ಗೂಡಿ ಕೆಲಸ ಮಾಡಬೇಕಿದೆ. ಸಮಾಜದಲ್ಲಿ ರಾಜಕೀಯ ಮಾಡುವುದು ನನ್ನ ಉದ್ದೇಶವಲ್ಲ. ದೇಶ ಕಟ್ಟುವುದೇ ನಮ್ಮ ಉದ್ದೇಶ ಎಂದು ಮಹಾತ್ಮ ಗಾಂಧಿ ಸೇವಾ ಟ್ರಸ್ಟ್‌ ಸಂಸ್ಥಾಪಕರೂ ಆದ ಗೌರಿಗದ್ದೆಯ ಅವಧೂತ ವಿನಯ್‌ ಗುರೂಜಿ ನುಡಿದರು.

ಇಲ್ಲಿಗೆ ಸಮೀಪದ ಸೀಗೋಡು-ದೇವಗೋಡು ಗ್ರಾಮದ 2.20 ಕೋಟಿ ರು. ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.
ಡಿಸಿಎಂ ಗೋವಿಂದ ಕಾರಜೋಳ ಅವರ ಸಹಕಾರದಿಂದ ಸೀಗೋಡು ದೇವಗೋಡು ರಸ್ತೆಗೆ 1.5 ಕೋಟಿ ರು. ಹಾಗೂ ಶಾಸಕ ರಾಜೇಗೌಡ ಅನುದಾದಲ್ಲಿ 70 ಲಕ್ಷ ರು. ಅಭಿವೃದ್ಧಿ ಕಾಮಗಾರಿಗಾಗಿ ಮಂಜೂರಾಗಿರುವುದು ಶ್ಲಾಘನೀಯ ಎಂದರು.

ಮಾನವ ಸೇವೆಯೇ ಮಾಧವ ಸೇವೆಯಾಗಿದೆ. ಜಾತಿ, ಧರ್ಮ, ತತ್ವ ಎಲ್ಲವನ್ನೂ ಮೀರಿದ್ದೆ ಮನುಷ್ಯತ್ವ. ಮನುಷ್ಯತ್ವವೇ ದೇವರಾಗಿದ್ದು, ದೇವರನ್ನು ಮೀರಿರುವುದು ಸತ್ಯ ಮತ್ತು ಪ್ರೀತಿಯಾಗಿದೆ. ಹಳ್ಳಿಗಳ ಬಗ್ಗೆ ಪ್ರತಿಯೊಬ್ಬರೂ ಗಮನಹರಿಸಬೇಕಿದೆ. ಈ ನಿಟ್ಟಿನಲ್ಲಿ ತಮ್ಮ ಮಹಾತ್ಮ ಗಾಂಧಿ ಸೇವಾ ಟ್ರಸ್ಟ್‌ ಸಹ ಕಾರ್ಯನಿರ್ವಹಿಸುತ್ತಿದೆ. ರೈತ ನಿಧಿ ಆರಂಭಿಸಲಾಗಿದೆ ಎಂದು ಹೇಳಿದರು

ಕೆಂಪುಕೋಟೆಯಲ್ಲಿ ಕಿಸಾನ್‌ ಯೂನಿಯನ್‌ ಧ್ವಜ ಹಾರಿಸಿದ ರೈತ -Vishwanews24

ಸಿಎಂ ಯಡಿಯೂರಪ್ಪ ನಮ್ಮ ಆಶ್ರಮಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಗೋ ಹತ್ಯೆ ನಿಷೇಧವಾಗಬೇಕು. ರೈತರ ಸಾಲ ಮನ್ನಾ ಆಗಬೇಕು ಎಂದು ಕೋರಿದ್ದೆವು. ಯಡಿಯೂರಪ್ಪ ಅವರು ಅದನ್ನು ನೆರವೇರಿಸಿದ್ದಾರೆ. ರೈತರ ಸಾಲ ಮನ್ನಾ ಮಾಡಿದರೆ ಅದೇ ನನಗೆ ನೀಡುವ ಗುರುದಕ್ಷಿಣೆ ಎಂದು ನಾನು ಹೇಳಿದ್ದೆ. ರಾಸಾಯನಿಕ ಗೊಬ್ಬರ ಬಳಕೆಯನ್ನು ನಾವು ನಿಲ್ಲಿಸಬೇಕಿದೆ. ಮನುಷ್ಯ ದುರಾಸೆಯಿಂದ ಬೇಗ ಹಣ ಮಾಡಬೇಕು ಎಂಬ ಉದ್ದೇಶದಿಂದ ತಮ್ಮ ಜಮೀನಿಗೆ ರಾಸಾಯನಿಕ ಗೊಬ್ಬರವನ್ನು ಹಾಕುತ್ತಿದ್ದಾನೆ. ಇದರಿಂದಾಗಿ 100 ವರ್ಷ ಬಾಳುವ ಮರಗಳು 10 ವರ್ಷಕ್ಕೆ ಕೊನೆಗಾಣುತ್ತಿವೆ. ರಾಸಾಯನಿಕದಿಂದ ಕ್ಯಾನ್ಸರ್‌ ಇಂದು ನಮ್ಮನ್ನು ಆವರಿಸುತ್ತಿದೆ. ಭಾರತ ಸಂಸ್ಕಾರದಿಂದ ದೊಡ್ಡದಾದ ದೇಶ. ಇದು ದುಡ್ಡಿನಿಂದ ದೊಡ್ಡದಾದಲ್ಲ. ಸಾಧನೆ, ಶೋಧನೆಯಿಂದ ನಾವು ಮುಂದೆ ಸಾಗೋಣ. ದೇವಸ್ಥಾನ ಕೇವಲ ದೇವರಿಗೆ ಸೀಮಿತವಲ್ಲ. ಪುರಾತನ ದೇವಸ್ಥಾನದಲ್ಲಿರುವ ಇರುವ ವಿಜ್ಞಾನವನ್ನು ನಮ್ಮ ಜನ ಅರಿತಿಲ್ಲ ಎಂದರು.

ವಿನಯ್‌ ಗುರೂಜಿ ಅವರು ಸೀಗೋಡು ಗ್ರಾಮದ ಕೆಫೆ ಕಾಫಿ ಡೇ ಮಾಲೀಕ ದಿ.ಸಿದ್ಧಾಥ್‌ರ್‍ ಹೆಗ್ಡೆ ಅವರ ವೃತ್ತದ ಸಮೀಪದಲ್ಲಿ ಸಿದ್ಧಾಥ್‌ರ್‍ ಮಹಾದ್ವಾರ ನಿರ್ಮಾಣ ಕಾರ್ಯಕ್ಕೂ ಸಹ ಗುದ್ದಲಿ ಪೂಜೆ ನೆರವೇರಿಸಿದರು.

ನಮ್ಮ ಪ್ರತಿಭಟನೆ ವೇಳೆ ನಡೆದ ಗಲಭೆಗೂ, ನಮಗೂ ಸಂಬಂಧ ಇಲ್ಲ : ಭಾರತೀಯ ಕಿಸಾನ್ ಒಕ್ಕೂಟದ ವಕ್ತಾರ ರಾಕೇಶ್ ಟಿಖಾಯತ್ -Vishwanews24

Vishwa News 24

Recent Posts

ಇಸ್ಲಾಂ ಧರ್ಮದಲ್ಲಿ ಹಿಜಾಬ್ ಕಡ್ಡಾಯವಲ್ಲ: ಅಲಹಾಬಾದ್ ಹೈಕೋರ್ಟ್ – vishwanews24

ಇಸ್ಲಾಂ ಧರ್ಮದಲ್ಲಿ ಹಿಜಾಬ್ ಕಡ್ಡಾಯವಲ್ಲ: ಅಲಹಾಬಾದ್ ಹೈಕೋರ್ಟ್ ಮುಸ್ಲಿಂ ವಿದ್ಯಾರ್ಥಿನಿಯ ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಪ್ರಯಾಗ್‌ರಾಜ್: ಶಾಲಾ ಸಮವಸ್ತ್ರದೊಂದಿಗೆ ಹಿಜಾಬ್…

1 hour ago

ಉಡುಪಿ: ನೂತನ ಜಿಲ್ಲಾಸ್ಪತ್ರೆಯನ್ನು ಶೀಘ್ರವೇ ಆರಂಭಿಸಿ : ಕರವೇ ಆಗ್ರಹ – vishwanews24

ನೂತನ ಜಿಲ್ಲಾಸ್ಪತ್ರೆಯನ್ನು ಶೀಘ್ರವೇ ಆರಂಭಿಸಿ : ಕರವೇ ಆಗ್ರಹ ಸೆ.30ರೊಳಗೆ ಆಸ್ಪತ್ರೆಯ ಸೇವೆ ಆರಂಭಿಸದಿದ್ದರೆ ಅ.1ರಿಂದ ಅನಿರ್ದಿಷ್ಟಾವಧಿ ಪ್ರತಿಭಟನೆಯ ಎಚ್ಚರಿಕೆ…

2 hours ago

ಮಂಗಳೂರಿಗೆ ಆಗಮಿಸಿದ ರಾಕಿಂಗ್ ಸ್ಟಾರ್ ಯಶ್ ; ಧರ್ಮಸ್ಥಳಕ್ಕೆ ಭೇಟಿ – vishwanews24

‘ಟಾಕ್ಸಿಕ್’ ಸಿನಿಮಾ ಬಿಡುಗಡೆ ಹಿನ್ನೆಲೆ: ಮಂಗಳೂರಿಗೆ ಆಗಮಿಸಿದ ರಾಕಿಂಗ್ ಸ್ಟಾರ್ ಯಶ್ ; ಧರ್ಮಸ್ಥಳಕ್ಕೆ ಭೇಟಿ ಮಂಗಳೂರು: ಸ್ಯಾಂಡಲ್‌ವುಡ್‌ನ ರಾಕಿಂಗ್ ಸ್ಟಾರ್…

2 hours ago

ಉಡುಪಿ: ಜಿಲ್ಲೆಯಲ್ಲಿ 97,706 ಮತದಾರರ ವಿವರಗಳಲ್ಲಿ ವ್ಯತ್ಯಾಸಗಳು ಪತ್ತೆ – vishwanews24

ಉಡುಪಿ: ಜಿಲ್ಲೆಯಲ್ಲಿ 97,706 ಮತದಾರರ ವಿವರಗಳಲ್ಲಿ ವ್ಯತ್ಯಾಸಗಳು ಪತ್ತೆ ಉಡುಪಿ: ಹಿಂದಿನ ಮತದಾರರ ಪಟ್ಟಿಯೊಂದಿಗೆ ಮತದಾರರ ವಿವರಗಳನ್ನು ಜೋಡಿಸಲು ಸಾಧ್ಯವಾಗದ…

2 hours ago

ವಿಷಕಾರಿ ದತ್ತೂರ ಬೀಜ ಮಾರಾಟ : ಅಮೆಜಾನ್,ಸ್ವಿಗ್ಗಿ ಇನ್‌ಸ್ಟಾಮಾರ್ಟ್‌ ನ ಆಹಾರ ಪರವಾನಗಿ ಅಮಾನತು – vishwanews24

ವಿಷಕಾರಿ ದತ್ತೂರ ಬೀಜ ಮಾರಾಟ : ಅಮೆಜಾನ್, ಸ್ವಿಗ್ಗಿ ಇನ್‌ಸ್ಟಾಮಾರ್ಟ್‌ನ ಆಹಾರ ಪರವಾನಗಿ ಅಮಾನತು ಬೆಂಗಳೂರು: ವಿಷಕಾರಿ ದತ್ತೂರ ಬೀಜಗಳನ್ನು…

2 hours ago

ಉಡುಪಿ: ಡೇವಿಡ್ ಡಿಸೋಜಾ ಶೂಟೌಟ್ ಪ್ರಕರಣ ; ಹತ್ಯೆಯ ಹಿಂದಿನ ಮಾಸ್ಟರ್ ಮೈಂಡ್ ಇನ್ನೂ ಪತ್ತೆಯಾಗಿಲ್ಲ: ಹರಿರಾಮ್ ಶಂಕರ್  – vishwanews24

ಉಡುಪಿ: ಡೇವಿಡ್ ಡಿಸೋಜಾ ಶೂಟೌಟ್ ಪ್ರಕರಣ ; ಹತ್ಯೆಯ ಹಿಂದಿನ ಮಾಸ್ಟರ್ ಮೈಂಡ್ ಇನ್ನೂ ಪತ್ತೆಯಾಗಿಲ್ಲ: ಹರಿರಾಮ್ ಶಂಕರ್  ಉಡುಪಿ: ಉದ್ಯಮಿ…

2 hours ago