ಬೆಂಗಳೂರು: ಪರಿಷ್ಕೃತ ಸಂಚಾರಿ ನಿಯಮ ಉಲ್ಲಂಘನೆ ದಂಡ ಜಾರಿಯಾದ ಮೊದಲ ದಿನವೇ 30 ಲಕ್ಷ ರೂ. ದಂಡ ವಸೂಲಿ ಮಾಡಲಾಗಿದೆ ಅಂತ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರು ಹೇಳಿದ್ದಾರೆ.
ಅವರು ಗುರುವಾರ ಮಾಧ್ಯಮಗಳಿಗೆ ಈ ಬಗ್ಗೆ ಮಾಹಿತಿ ನೀಡಿದರು. ಇನ್ನು ಇದೇ ವೇಳೆ ಅವರು ದಂಡ ಪರಿಷ್ಕರಣೆ ಮಾಡಿರುವುದು ಆದಾಯ ಸಂಗ್ರಹಕ್ಕಲ್ಲ, ಜನರ ಸುರಕ್ಷತೆ ದೃಷ್ಟಿಯಿಂದ. ಮದ್ಯ ಸೇವಿಸಿ ಚಾಲನೆ ಮಾಡಿದರೆ ಪ್ರಾಣಹಾನಿ ಉಂಟಾಗುತ್ತದೆ ಎಂಬುದು ಗೊತ್ತಿದ್ದರೂ ತಪ್ಪು ಮಾಡುತ್ತಾರೆ. ಏಕಮುಖ ಸಂಚಾರ, ರಾಂಗ್ ಸೈಡ್ನಲ್ಲಿ ವಾಹನ ಚಾಲನೆ ಮಾಡುತ್ತಾರೆ. ಹೆಲ್ಮೆಟ್ರಹಿತ ಚಾಲನೆ ಪ್ರಾಣ ಹಾನಿಗೆ ಕಾರಣವಾಗಿದೆ.
ಈ ಸಂಗತಿ ಗೊತ್ತಿದ್ದರೂ ಕಾನೂನು ಉಲ್ಲಂಘಿಸುತ್ತಿದ್ದಾರೆ. ಇಂತಹ ಸನ್ನಿವೇಶದಲ್ಲಿ ಜನರಿಗೆ ಬುದ್ಧಿ ಹೇಳುವ ಅಗತ್ಯ ಇಲ್ಲ ಅಂತ ಹೇಳಿದರು ಇನ್ನು ವಾಹನ ನಿಲುಗಡೆ ನೀತಿ ಜಾರಿಗೊಳಿಸುವಂತೆ ಕೋರಿ ಬಿಬಿಎಂಪಿ ಆಯುಕ್ತರಿಗೆ ಪತ್ರ ಬರೆಯಲಾಗಿದೆ. ಶಾಲಾ- ಕಾಲೇಜು, ಸಿಬಿಡಿ ಮತ್ತು ಜನವಸತಿ ಪ್ರದೇಶಗಳಲ್ಲಿ ವಾಹನಗಳನ್ನು ರಸ್ತೆಗಳಲ್ಲಿ ಅಡ್ಡಾದಿಡ್ಡಿ ನಿಲುಗಡೆ ಮಾಡದಿರಲು ನೀತಿ ರೂಪಿಸುವಂತೆ ಬಿಬಿಎಂಪಿಗೆ ಮನವಿ ಮಾಡಲಾಗಿದೆ.
ಸಿಬಿಡಿ ವ್ಯಾಪ್ತಿಯಲ್ಲಿ ಇರುವ ಶಾಲೆ-ಕಾಲೇಜು ಆಡಳಿತ ಮಂಡಳಿ ತಮ್ಮ ವಾಹನಗಳಿಗೆ ಶಾಲಾ ಆವರಣದಲ್ಲಿ ರ್ಪಾಂಗ್ವ್ಯವಸ್ಥೆ ಮಾಡಲಿ. ರಸ್ತೆಬದಿ ನಿಲ್ಲಿಸಿ ಜನರಿಗೆ ತೊಂದರೆ ಕೊಟ್ಟರೆ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ ಜಾಗ ಇಲ್ಲದಿದ್ದರೆ ನಗರ ಬಿಟ್ಟು ಹೊರಗಡೆ ಹೋಗಿ ಎಂದು ಶಾಲಾ ಆಡಳಿತ ಮಂಡಳಿಗಳಿಗೆ ಭಾಸ್ಕರ್ ರಾವ್ ಖಡಕ್ ವಾರ್ನಿಂಗ್ ನೀಡಿದರು.
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…
ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ : ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…