Featured

ಸಂಚಾರ ನಿಯಮ ಉಲ್ಲಂಘನೆ ಮಾಡಿದರೆ ಬೀಳಲಿದೆ ಬಾರೀ ದಂಡ ; ಕಠಿಣ ಕ್ರಮಕ್ಕೆ ಮುಂದಾದ ಸರ್ಕಾರ -Vishwanews24

ಬೆಂಗಳೂರು: ದೇಶದಲ್ಲಿ ಅಪಘಾತ ಪ್ರಮಾಣ ದಿನೇ ದಿನೇ ಹೆಚ್ಚುತ್ತಲೇ ಇದೆ. ಇದನ್ನು ತಡೆಯಲು ಸರ್ಕಾರ ಸಾಕಷ್ಟು ಕ್ರಮಗಳನ್ನು ಕೈಗೊಂಡರೂ ಪ್ರಯೋಜನವಾಗುತ್ತಿಲ್ಲ. ಸಂಚಾರಿ ನಿಯಮ ಉಲ್ಲಂಘನೆ ಹೆಚ್ಚುತ್ತಿರುವ ಅಪಘಾತಕ್ಕೆ ಪ್ರಮುಖ ಕಾರಣ. ಹೀಗಾಗಿ ಸಂಚಾರ ನಿಯಮವನ್ನು ಗಾಳಿಗೆ ತೂರುವವರಿಗೆ ಹೆಚ್ಚಿನ ದಂಡ ವಿಧಿಸುವುದರ ಜೊತೆಗೆ ಶಿಕ್ಷೆಗೊಳಪಡಿಸುವ ನಿಟ್ಟಿನಲ್ಲಿ ಮೋಟಾರು ವಾಹನ ತಿದ್ದುಪಡಿ ವಿಧೇಯಕವನ್ನು ಲೋಕಸಭೆಯಲ್ಲಿ ಮರುಮಂಡಿಸಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ.

ಕಳೆದ ಬಾರಿ ಈ ವಿಧೇಯಕಕ್ಕೆ ಲೋಕಸಭೆಯಲ್ಲಿ ಅನುಮತಿ ಸಿಕ್ಕಿತ್ತಾದರೂ ರಾಜ್ಯ ಸಭೆಯಲ್ಲಿ ಇದಕ್ಕೆ ವಿರೋಧ ವ್ಯಕ್ತವಾಗಿತ್ತು. ಹಾಗಾಗಿ ಈ ವಿಧೇಯಕಕ್ಕೆ ಇಂದು ಅನುಮತಿ ಸಿಗುವ ಸಾಧ್ಯತೆ ಇದೆ. ಸೋಮವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.

ಈ ವೀಧೆಯಕಕ್ಕೆ ಅನುಮೋದನೆ ದೊರೆತರೆ ಕನಿಷ್ಠ ದಂಡದ ಮೊತ್ತ 1 ಸಾವಿರ ರೂ. ಆಗಿರಲಿದೆ. ಅಲ್ಲದೆ 1 ಲಕ್ಷ ರೂ.ವರೆಗೆ ದಂಡ ವಿಧಿಸುವ ಅವಕಾಶ ಇರಲಿದೆ. ಒಂದೊಮ್ಮೆ ಈ ನಿಯಮ ಜಾರಿಗೆ ಬಂದರೆ ವಾಹನ ಸವಾರರಿಗೆ ಭಾರೀ ಹೊರೆ ಆಗಲಿದೆ.

ಈ ವಿಧೇಯಕ ಮಂಡನೆಗೆ ಈ ಮೊದಲು ಎಲ್ಲ ಕಡೆಗಳಲ್ಲಿ ಭಾರಿ ವಿರೋಧ ವ್ಯಕ್ತವಾಗಿತ್ತು. ಈಗ ಮತ್ತೆ ಈ ವಿಧೆಯಕ ಮರು ಮಂಡನೆಗೆ ಸರ್ಕಾರ ಮುಂದಾಗಿರುವುದರಿಂದ ಮತ್ತೆ ಪ್ರತಿಭಟನೆಗಳು ನಡೆಯುವ ಲಕ್ಷಣ ಗೋಚರವಾಗಿದೆ.

ಎಷ್ಟಷ್ಟು ದಂಡ?:

ಲೈಸೆನ್ಸ್​ ಇಲ್ಲದೆ ವಾಹನ ಚಾಲನೆ ಮಾಡಿದರೆ 5,000 ರೂ. ದಂಡ.

ವೇಗದ ಮಿತಿ ದಾಟಿದರೆ 1000 ರೂ. ದಂಡ.

ಅಡ್ಡಾದಿಡ್ಡಿ ಹಾಗೂ ಮೊಬೈಲ್​ ಬಳಕೆ ಮಾಡುತ್ತಾ ಬೈಕ್​ ಸವಾರಿ ಮಾಡಿದರೆ 1000 ರೂ. ದಂಡ,

ಕುಡಿದು ವಾಹನ ಚಲಾಯಿಸಿದರೆ 10,000 ರೂ ದಂಡ ಬೀಳಲಿದೆ.

ಹಿಟ್​ ಆ್ಯಂಡ್​ ರನ್​ ಪ್ರಕರಣದಲ್ಲಿ ಸಂತ್ರಸ್ತರಿಗೆ 25 ಸಾವಿರ ರೂ. ಬದಲು 2 ಲಕ್ಷ ರೂ.ವರೆಗೆ ಪರಿಹಾರ ನೀಡಬೇಕಾಗುತ್ತದೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

3 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

3 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

3 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

3 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

3 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

3 days ago