ಸಂಚಾರ ಮುಕ್ತವಾಗಲಿದೆ ಕುಂದಾಪುರ ಫ್ಲೈ ಓವರ್ ; ಎಪ್ರಿಲ್ ತಿಂಗಳಿನಲ್ಲಿ ಲೋಕಾರ್ಪಣೆ -Vishwanews24

ಕುಂದಾಪುರ: ಇದೇ ಬರುವ ಎಪ್ರಿಲ್ ತಿಂಗಳಲ್ಲಿ ಕುಂದಾಪುರ ಶಾಸ್ತ್ರಿ ವೃತ್ತದಲ್ಲಿ ನಿರ್ಮಾಣವಾಗುತ್ತಿರುವ ಪ್ಲೈ ಓವರ್ ಸಂಚಾರ ಮುಕ್ತವಾಗಲಿದೆ. ಹಲವಾರು ಸಭೆ, ಚರ್ಚೆ, ಟೋಲ್ ಬಂದ್ ಎಚ್ಚರಿಕೆ ನಂತರ ಕಾಮಗಾರಿಗೆ ವೇಗ ಸಿಕ್ಕಿದ್ದು, ಕಾಮಗಾರಿ ಪೂರ್ಣಗೊಳ್ಳವ ಹಂತಕ್ಕೆ ಬಂದಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.

ಪ್ಲೇ ಓವರ್ ಕಾಮಗಾರಿ ಮುಗಿಸಿ ಆದಷ್ಟು ಶೀಘ್ರ ಸಂಚಾರಕ್ಕೆ ಬಿಟ್ಟುಕೊಡುವಂತೆ ಒತ್ತಾಯ, ಮಾಡಿದ್ದಲ್ಲದೆ, ಕುಂದಾಪುರದಲ್ಲಿ ಡಿಸಿ ಜೊತೆ ನಡೆಸಿದ ಸಭೆಯಲ್ಲಿ ಏಪ್ರಿಲ್ ತಿಂಗಳೊಳಗೆ ಸಂಚಾರಕ್ಕೆ ಬಿಟ್ಟುಕೊಡಬೇಕು ಇಲ್ಲದಿದ್ದರೆ ಟೋಲ್ ನಿರಾಕರಣೆ ಮೂಲಕ ಪ್ರತಿಭಟನೆ ಎಚ್ಚರಿಕೆ ನೀಡಲಾಗಿತ್ತು. ಪ್ರಸಕ್ತ ಕಾಮಗಾರಿ ವೇಗ ಪಡೆದುಕೊಂಡಿದ್ದು, ಎಪ್ರಿಲ್ ತಿಂಗಳಲ್ಲಿ ಸಂಚಾರಕ್ಕೆ ಬಿಟ್ಟುಕೊಡುವುದಾಗಿ ಕಂಪನಿ ಇಂಜಿನಿಯರ್ ಭರವಸೆ ನೀಡಿದ್ದಾರೆ ಎಂದು ಶುಕ್ರವಾರ ಪ್ಲೇ ಓವರ್ ಕಾಮಗಾರಿ ವೀಕ್ಷಣೆ ನಡೆಸಿ ಸುದ್ದಿಗಾರರಿಗೆ ತಿಳಿಸಿದರು.

ಬೆಂಗಳೂರಿಂದ ಕಾರವಾರಕ್ಕೆ ಮಂಜೂರಾದ ಹೊಸ ರೈಲ್ ಹಾಗೂ ಹಿಂದಿನ ಓಡುತ್ತಿದ್ದ ರೈಲು ಪಡೀಲ್ ಮೂಲಕ ಕುಂದಾಪುರ ಕಾರವಾರಕ್ಕೆ ಹೋಗುವಂತೆ ಮಾಡಲು ರೈಲ್ವೆ ಸಚಿವರ ಜೊತೆ ಮಾತನಾಡಿದ್ದು, ಎರಡೂ ರೈಲು ವಾರದಲ್ಲಿ ಏಳುದಿನವೂ ಓಡುವಂತೆ ಕೇಳಿಕೊಳ್ಳಲಾಗಿದೆ. ರೈಲು ಮಂಗಳೂರು ಸ್ಟೇಶನ್ನಿಗೆ ಹೋಗಿ ಬರುವುದರಿಂದ ಸಮಯ ವ್ಯಯವಾಗುವುದರಿಂದ ಪ್ರಯಾಣಿಕರಿಗೂ ಸಮಸ್ಯೆ ಆಗುತ್ತದೆ. ರೈಲು ಪೇಟೆ ಒಳಗಡೆ ಹೋಗುವುದರಿಂದ ಮಂಗಳೂರು ನಗರಕ್ಕೆ ಏನೂ ಪ್ರಯೋಜನವಿಲ್ಲ. ರೈಲ್ ಮಂಗಳೂರು ಸ್ಟೇಶನ್‌ಗೆ ಬರಬೇಕೆಂದು ಒತ್ತಾಯಿಸದಂತೆ ಸಂಸದ ನಳಿನ್ ಕುಮಾರ್ ಕಟೀಲ್ ಅವರ ಕೇಳಿಕೊಂಡಿದ್ದು, ಅವರು ಅದಕ್ಕೆ ಸಮ್ಮತಿ ವ್ಯಕ್ತಪಡಿಸಿದ್ದಾರೆ ಎಂದು ಹೇಳಿದರು.

ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಕಿರಣ್‌ ಕೊಡ್ಗಿ, ಜಿಲ್ಲಾ ಪಂಚಾಯತ್‌ ಸದಸ್ಯೆ ಶ್ರೀಲತಾ ಸುರೇಶ್‌ ಶೆಟ್ಟಿ, ಬಿಜೆಪಿ ನಿಕಟಪೂರ್ವ ಅಧ್ಯಕ್ಷ ಸುರೇಶ್‌ ಶೆಟ್ಟಿ ಕಾಡೂರು, ಪ್ರಧಾನ ಕಾರ್ಯದರ್ಶಿಗಳಾದ ಸುರೇಶ್‌ ಶೆಟ್ಟಿ ಬೀಜಾಡಿ, ಸತೀಶ್‌ ಪೂಜಾರಿ, ಮಾಜಿ ಪ್ರಧಾನ ಕಾರ್ಯದರ್ಶಿ ಭಾಸ್ಕರ ಬಿಲ್ಲವ, ಪುರಸಭೆ ಸದಸ್ಯರಾದ ಮೋಹನದಾಸ ಶೆಣೈ, ರಾಘವೇಂದ್ರ ಖಾರ್ವಿ, ಸಂದೀಪ ಖಾರ್ವಿ, ಶ್ವೇತಾ ಸಂತೋಷ್‌, ವೀಣಾ ಭಾಸ್ಕರ ಮೆಂಡನ್‌, ವನಿತಾ ಎಸ್‌. ಬಿಲ್ಲವ, ಸಂತೋಷ್‌ ಕುಮಾರ್‌ ಶೆಟ್ಟಿ, ಪ್ರೇಮಲತಾ, ಅಶ್ವಿ‌ನಿ ಪ್ರದೀಪ್‌, ಮಾಜಿ ಸದಸ್ಯರಾದ ವಿಜಯ್‌ ಎಸ್‌. ಪೂಜಾರಿ, ಸತೀಶ್‌ ಶೆಟ್ಟಿ, ವಸಂತಿ ಸಾರಂಗ, ಗುಣರತ್ನಾ, ಪುಷ್ಪಾ ಶೇಟ್‌, ಮುಖಂಡರಾದ ಕುತ್ಯಾರು ನವೀನ್‌ ಶೆಟ್ಟಿ, ಉದಯ ಕುಮಾರ್‌ ಶೆಟ್ಟಿ ಉಡುಪಿ, ಗೋಪಾಲ ಕಳಂಜಿ, ಸಂಗೀತಾ, ದಿವಾಕರ ಕಡ್ಗಿ, ಸದಾನಂದ ಬಳ್ಕೂರು, ವಿನೋದ್‌ರಾಜ್‌ ಪೂಜಾರಿ, ರೈಲ್ವೇ ಪ್ರಯಾಣಿಕರ ಹಿತರಕ್ಷಣಾ ಸಮಿತಿಯ ಅಧ್ಯಕ್ಷ ಗಣೇಶ್‌ ಪುತ್ರನ್‌, ವಿವೇಕ್‌ ನಾಯಕ್‌, ಪ್ರವೀಣ್‌ ಕುಮಾರ್‌ ಮೊದಲಾದವರು ಉಪಸ್ಥಿತರಿದ್ದರು.

Vishwa News 24

Recent Posts

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

13 hours ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

15 hours ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

15 hours ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

15 hours ago

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ – vishwanews24

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…

15 hours ago

ಹಿಜಬ್‌ಗೆ ಅವಕಾಶ :ಪ್ರಣಾಳಿಕೆಯಲ್ಲಿ ಸಮಾನತೆಯ ಮಾತು ಕೊಟ್ಟಿದ್ವಿ , ಯಾವುದೇ ಕಾರಣಕ್ಕೂ ಆದೇಶ ವಾಪಸ್ ಪಡೆಯಲ್ಲ : ಮಧು ಬಂಗಾರಪ್ಪ – vishwanews24

ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು  ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…

16 hours ago