ಉಡುಪಿ: ಉಡುಪಿಯಲ್ಲಿ ಬಹಳ ವಿವಾದ ಎಬ್ಬಿಸಿದ್ದ ಕಲ್ಯಾಣಪುರ ಸಂತೆಕಟ್ಟೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯಲ್ಲಿ ಮಹತ್ವದ ಪ್ರಗತಿಯಾಗಿದೆ.
ಪ್ರತಿನಿತ್ಯ ಎಂಬಂತೆ ಈ ಮಾರ್ಗದಲ್ಲಿ ಟ್ರಾಫಿಕ್ ಜಾಮ್ ಉಂಟಾಗುತ್ತಿತ್ತು. ಆಮೆ ಗತಿಯಲ್ಲಿ ಸಾಗುತ್ತಿರುವ ಕಾಮಗಾರಿಗೆ ರೋಸಿ ಹೋಗಿ ಜನ ಆಕ್ರೋಶ ವ್ಯಕ್ತಪಡಿಸಿದ್ದರು. ಅಂಡರ್ ಪಾಸ್ ಕಾಮಗಾರಿ ನಡೆಯುವ ಸ್ಥಳದಲ್ಲಿ ಭಾರಿ ಪ್ರಮಾಣದ ಬಂಡೆಕಲ್ಲು ಪತ್ತೆಯಾಗಿ, ಕಾಮಗಾರಿ ನನೆಗುದಿಗೆ ಬಿದ್ದಿತ್ತು.
ಇದೀಗ ಕಾಮಗಾರಿಯನ್ನು ತೀವ್ರಗೊಳಿಸಿದ್ದು ಉಡುಪಿಯಿಂದ ಕುಂದಾಪುರಕ್ಕೆ ಹೋಗುವ ಮೇಲ್ ಸೇತುವೆ ಮಾರ್ಗದಲ್ಲಿ ಲಘು ವಾಹನ ಸಂಚಾರಕ್ಕೆ ಅವಕಾಶ ನೀಡಲಾಗಿದೆ.
ಇದರಿಂದಾಗಿ ವಾಹನಗಳ ದಟ್ಟಣೆ ಕಡಿಮೆಯಾಗಲಿದ್ದು ಮುಂದಿನ ದಿನಗಳಲ್ಲಿ, ಅಂಡರ್ ಪಾಸ್ ಕಾಮಗಾರಿ ತ್ವರಿತಗತಿಯಲ್ಲಿ ಮುಗಿಸಲಾಗುವುದು ಎಂದು ಸ್ಥಳಕ್ಕೆ ಭೇಟಿ ನೀಡಿದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಭರವಸೆ ನೀಡಿದ್ದಾರೆ. ಅಂಡರ್ ಪಾಸ್ ಕಾಮಗಾರಿ ನಡೆಯುವ ರಸ್ತೆಗೆ ಶೀಘ್ರವೇ ಕಾಂಕ್ರೀಟೀಕರಣ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…
ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…