ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ : ಸುದ್ದಿಗೋಷ್ಠಿ ಕರೆದ ಸಚಿವ ಈಶ್ವರಪ್ಪ – Vishwanews24
ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ : ಸುದ್ದಿಗೋಷ್ಠಿ ಕರೆದ ಸಚಿವ ಈಶ್ವರಪ್ಪ
ಶಿವಮೊಗ್ಗ,: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಈಶ್ವರಪ್ಪ ಅವರ ಹೆಸರು ಕೇಳಿ ಬಂದ ಬೆನ್ನಲ್ಲೇ ಇಂದು ಮಧ್ಯಾಹ್ನ ಶಿವಮೊಗ್ಗ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಈಶ್ವರಪ್ಪ ಸುದ್ದಿಗೋಷ್ಠಿ ಕರೆದಿದ್ದಾರೆ.
ಗುತ್ತಿಗೆದಾರ ಸಂತೋಷ್ ಅವರು ಸಚಿವ ಈಶ್ವರಪ್ಪ ಅವರ ಮೇಲೆ 40% ಕಮಿಷನ್ ಆರೋಪ ಮಾಡಿ ಉಡುಪಿಯ ಖಾಸಗಿ ಹೊಟೇಲ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಸಚಿವರ ರಾಜೀನಾಮೆಗೆ ಒತ್ತಾಯಿಸಿ ರಾಜ್ಯದೆಲ್ಲೆಡೆ ಪ್ರತಿಭಟನೆ ನಡೆಯುತ್ತಿದೆ.
ಇನ್ನು ಸಚಿವ ಈಶ್ವರಪ್ಪ ಶಿವಮೊಗ್ಗ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ಕರೆದಿದ್ದು, ಸುದ್ದಿಗೋಷ್ಠಿಯಲ್ಲಿ ರಾಜೀನಾಮೆ ನೀಡುತ್ತಾರ ಅಥವಾ ಬೇರೆ ಏನಾದರೂ ವಿಷಯವನ್ನು ತಿಳಿಸುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.
ಉಡುಪಿಯಲ್ಲೂ ಗುತ್ತಿಗೆದಾರರಿಂದ ಕಮಿಷನ್ ಡಿಮ್ಯಾಂಡ್ ದಂಧೆ ನಡೆಯುತ್ತಿದೆ : ಮಾಜಿ ಸಚಿವ ಸೊರಕೆ – Vishwanews24
