ಬೆಂಗಳೂರು: ಸಂತ್ರಸ್ತೆ ಹೇಳಿಕೆ ಆಧರಿಸಿ ರಮೇಶ್ ಜಾರಕಿಹೊಳಿ ವಿರುದ್ಧ ಎಫ್‍ಐಆರ್ ದಾಖಲಿಸಬೇಕು. ಈಗಾಗಲೇ ಕೋರ್ಟಿಗೆ ಹೋಗಿರುವ 6 ಮಂದಿ ಸಚಿವರು ರಾಜೀನಾಮೆ ಕೊಡಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಬೇಡಿಕೆಯಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ಸದನದಲ್ಲಿ ಹೋರಾಟ ಮುಂದುವರಿಯುತ್ತೆ ಎಂದು ಎಚ್ಚರಿಕೆ ನೀಡಿದ್ದಾರೆ.
6 ಸಚಿವರು ರಾಜೀನಾಮೆ ಕೊಡಬೇಕು. ಹಾಗೆಯೇ ಸಂತ್ರಸ್ತೆ ಹೇಳಿಕೆ ಆಧರಿಸಿ ರಮೇಶ್ ಜಾರಕಿಹೊಳಿ ವಿರುದ್ಧ ಎಫ್‍ಐಆರ್ ದಾಖಲಿಸಬೇಕು. ಹೋರಾಟ ಮುಂದುವರಿಸುತ್ತೇವೆ. ಸರ್ಕಾರ ಪ್ರಕರಣ ನಿಭಾಯಿಸಲು ವಿಫಲವಾಗಿದೆ. ತಾರತಮ್ಯ ಧೋರಣೆ ಸರಿಯಲ್ಲಎಂದು ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಮಾಜಿ ಸಚಿವರ ರಾಸಲೀಲೆ ಸಿಡಿ ಹೊರಬರುತ್ತಿದ್ದಂತೆಯೇ 6 ಮಂದಿ ಸಚಿವರು ತಮ್ಮ ವಿರುದ್ಧ ಮಾಧ್ಯಮಗಳು ವರದಿ ಪ್ರಸಾರ ಮಾಡಬಾರದು ಎಂದು ಕೋರ್ಟ್ ಮೊರೆ ಹೋಗಿದ್ದರು. ಸಚಿವರಾದ ಶಿವರಾಮ್ ಹೆಬ್ಬಾರ್, ಬಿ.ಸಿ.ಪಾಟೀಲ್, ಎಸ್.ಟಿ.ಸೋಮಶೇಖರ್, ಕೆ.ಸುಧಾಕರ್, ನಾರಾಯಣಗೌಡ, ಭೈರತಿ ಬಸವರಾಜ್ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್‍ನಲ್ಲಿ ಅರ್ಜಿ ಸಲ್ಲಿಸಿದ್ದರು. ತಮ್ಮ ವಿರುದ್ಧ ಸುದ್ದಿ ಪ್ರಸಾರ ಮಾಡದಂತೆ ಮಾಧ್ಯಮಗಳಿಗೆ ನಿರ್ಬಂಧ ವಿಧಿಸಬೇಕೆಂದು ಕೋರ್ಟಿನಲ್ಲಿ ಅರ್ಜಿ ಸಲ್ಲಿಸಿ ಮನವಿ ಮಾಡಿದ್ದರು. ಆದರೆ ಆರು ಸಚಿವರಿಗೆ ಭೀತಿ ಹುಟ್ಟಿರುವುದು ಏಕೆ ಪ್ರಶ್ನೆಗೆ ಉತ್ತರ ಸಿಕ್ಕಿಲ್ಲ ಎಂದರು
ಕಾಂಗ್ರೆಸ್ನಿಂದ ಆಹ್ವಾನ ಬಂದಿರುವುದು ನಿಜ .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…
ಉಡುಪಿ: ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…
ಉಡುಪಿ : ಒಳಚರಂಡಿ ಕಾಮಗಾರಿ; ಸಂಚಾರ ನಿಷೇಧ ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ಶಿರಿಬೀಡು ವಾರ್ಡಿನ ಶಾಂಭವಿ ಹೋಟೇಲ್ ಎದುರು ರಸ್ತೆಯಲ್ಲಿ…
ಉಡುಪಿ : ಸರಳ ವಿವಾಹಕ್ಕೆ ಪ್ರೋತ್ಸಾಹಧನ: ಅರ್ಜಿ ಆಹ್ವಾನ ಉಡುಪಿ, : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಪ್ರಸಕ್ತ ಸಾಲಿನ ಆರ್ಥಿಕವಾಗಿ…
ಅ. 18ರಂದು ರಕ್ಷಣಾಪುರ ಜವನೆರ್ ಕಾಪು ವತಿಯಿಂದ ನಾಲ್ಕನೇ ವರ್ಷದ ‘ಕಾಪು ಪಿಲಿ ಪರ್ಬ’ ವಿನಯ್ ಕುಮಾರ್ ಸೊರಕೆ ಮಾರ್ಗದರ್ಶನದಲ್ಲಿ…
ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…