Featured

ಸಂತ್ರಸ್ತ ಮಹಿಳೆಯ ಅಪಹರಣ ಪ್ರಕರಣ : ಜೂನ್ 1ರಂದು ವಿಚಾರಣೆಗೆ ಹಾಜರಾಗಲು ಭವಾನಿ ರೇವಣ್ಣನಿಗೆ ಎಸ್‌ಐಟಿ ನೋಟಿಸ್ – vishwanews24

ಸಂತ್ರಸ್ತ ಮಹಿಳೆಯ ಅಪಹರಣ ಪ್ರಕರಣ : ಜೂನ್ 1ರಂದು ವಿಚಾರಣೆಗೆ ಹಾಜರಾಗಲು ಭವಾನಿ ರೇವಣ್ಣನಿಗೆ ಎಸ್‌ಐಟಿ ನೋಟಿಸ್

ಬೆಂಗಳೂರು:  ಸಂತ್ರಸ್ತ ಮಹಿಳೆಯ ಅಪಹರಣ ಪ್ರಕರಣಕ್ಕೆ ಸಂಬಂಧಪಟ್ಟಂತೆ ಜೂನ್ 1ರಂದು ವಿಚಾರಣೆಗೆ ಖುದ್ದು ಹಾಜರಾಗುವಂತೆ ಎಸ್‌ಐಟಿ ತಂಡ, ಭವಾನಿ ರೇವಣ್ಣ ಅವರಿಗೆ ಮತ್ತೊಂದು ನೋಟಿಸ್ ಜಾರಿಗೊಳಿಸಿದೆ.

ಈ ಮುಂಚೆ ನೀಡಿದ್ದ ನೋಟಿಸ್‌ಗೆ ಪ್ರತಿಕ್ರಿಯಿಸಿದ್ದ ನೀವು, ತನಿಖೆಗೆ ಅವಶ್ಯವಿದ್ದರೆ ಹೊಳೆನರಸೀಪುರದ ಚೆನ್ನಾಂಬಿಕಾ ನಿವಾಸದಲ್ಲಿ ಇರುವುದಾಗಿ ತಿಳಿಸಿದ್ದೀರಿ. ಆದರೆ, ಈ ಹಿಂದೆ ನೀಡಿದ್ದ ನೋಟೀಸ್‌ಗೆ ನೀವು ಉತ್ತರ ನೀಡಿರಲಿಲ್ಲ. ಈ ಕೇಸ್‌ನಲ್ಲಿ ನಿಮ್ಮನ್ನು ವಿಚಾರಣೆಗೆ ಒಳಪಡಿಸುವ ಅಗತ್ಯವಿದೆ ಎಂದು ನೋಟಿಸ್‌ನಲ್ಲಿ ಹೇಳಲಾಗಿದೆ.

ಜೊತೆಗ ಮಹಿಳಾ ಅಧಿಕಾರಿಗಳೊಂದಿಗೆ ಜೂನ್ 1 ರಂದು ಬೆಳಿಗ್ಗೆ 10ರಿಂದ ಸಂಜೆ 5 ಗಂಟೆ ಒಳಗೆ ವಿಚಾರಣೆಗೆ ಬರುತ್ತೇವೆ. ಆ ವೇಳೆ ಮನೆಯಲ್ಲಿ ಖುದ್ದು ಹಾಜರಿರಬೇಕು ಎಂದು ಎಸ್‌ಐಟಿ ಇನ್‌ಸ್ಪೆಕ್ಟರ್ ಹೇಮಂತ್ ಕುಮಾರ್ ನೋಟಿಸ್‌ನಲ್ಲಿ ಸೂಚನೆ ನೀಡಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಭವಾನಿ ರೇವಣ್ಣ ಜಾಮೀನು ಅರ್ಜಿ ಸಲ್ಲಿಸಿದ್ದರು. ಇಂದು ವಿಚಾರಣೆ ನಡೆಯಲಿದೆ. ಈ ಮಧ್ಯೆ ಎಸ್‌ಐಟಿ ಖುದ್ದು ಹಾಜರಿರುವಂತೆ ನೋಟಿಸ್ ನೀಡಿದ್ದು, ನಿರೀಕ್ಷಣಾ ಜಾಮೀನು ಸಿಗದಿದ್ದರೆ ಭವಾನಿ ರೇವಣ್ಣ ಅವರು ಬಂಧನವಾಗುವ ಸಾಧ್ಯತೆ ಇದೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

4 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

5 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

5 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

5 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

5 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

5 days ago