ನವದೆಹಲಿ: ಹಲವು ದಶಕಗಳಿಂದ ಪರಿಹಾರ ಕಾಣದ ಸಮಸ್ಯೆಯಾಗಿರುವ ರಾಮಜನ್ಮಭೂಮಿ ವಿವಾದಕ್ಕೆ ಇದೀಗ ತಾರ್ಕಿಕ ಅಂತ್ಯವೊಂದು ಲಭಿಸುವ ಸೂಚನೆ ಸಿಕ್ಕಿದೆ. ಜನ್ಮಭೂಮಿ ವಿವಾದವನ್ನು ದಾವೆದಾರರು ಪರಸ್ಪರ ರಾಜೀ ಸಂಧಾನದ ಮೂಲಕವೇ ಬಗೆಹರಿಸಿಕೊಳ್ಳುವಂತೆ ದೇಶದ ಉಚ್ಛ ನ್ಯಾಯಾಲಯದ ಸಾಂವಿಧಾನಿಕ ಪೀಠವು ಇಂದು ಮಹತ್ವದ ತೀರ್ಪು ನೀಡಿದೆ.
ಇನ್ನೊಂದು ವಾರದಲ್ಲಿ ಸಂಧಾನ ಪ್ರಕ್ರಿಯೆ ಶುರುವಾಗಬೇಕು ಹಾಗೂ 2 ತಿಂಗಳ ಒಳಗೆ ಸಂಧಾನ ಪ್ರಕ್ರಿಯೆ ಅಂತ್ಯವಾಗಬೇಕು. ಉತ್ತರ ಪ್ರದೇಶದ ಫೈಜಾಬಾದ್ ನಲ್ಲಿ ಸಂಧಾನ ಮಾತುಕತೆ ನಡೆಸಿ ಇನ್ನೊಂದು ತಿಂಗಳಲ್ಲಿ ಸಂಧಾನದ ಫಲಶೃತಿ ಬಗ್ಗೆ ನಮಗೆ ಹೇಳಬೇಕು ಎಂದು ಖಲೀಫುಲ್ಲಾ ಸಂಧಾನಕಾರರ ತಂಡಕ್ಕೆ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ನೇತೃತ್ವದ ಐವರು ನ್ಯಾಯಾಧೀಶರ ಸಾಂವಿಧಾನಿಕ ಪೀಠ ಸೂಚಿಸಿದೆ.
ಕಾಲಮಿತಿಯಲ್ಲಿ ರಾಮ ಜನ್ಮಭೂಮಿ – ಬಾಬರಿ ಮಸೀದಿ ಜಮೀನು ವಿವಾದವನ್ನು ಸಂಧಾನ ಮಾತುಕತೆಯ ಮೂಲಕ ಪರಿಹರಿಸಿಕೊಳ್ಳುವಂತೆ ಸುಪ್ರೀಂಕೋರ್ಟ್ ನ ಸಾಂವಿಧಾನಿಕ ಪೀಠ ತನ್ನ ಆದೇಶದಲ್ಲಿ ಸ್ಪಷ್ಟವಾಗಿ ತಿಳಿಸಿದೆ. ಉತ್ತರಪ್ರದೇಶದ ಫೈಸಲಾಬಾದ್ ನಲ್ಲಿ ಈ ಸಂಧಾನ ಪ್ರಕ್ರಿಯೆ ನಡೆಯಬೇಕು ಎಂದು ಸುಪ್ರೀಂ ಕೋರ್ಟ್ ತನ್ನ ಆದೇಶದಲ್ಲಿ ಸ್ಪಷ್ಟಪಡಿಸಿದೆ. ನ್ಯಾಯಾಲವು ತಾನು ನಿಯಮಿಸುವ ಸಂಧಾನಕಾರರ ನೇತೃತ್ವದಲ್ಲಿ ಮತ್ತು ತನ್ನ ನಿಗಾವಹಣೆಯಲ್ಲಿ ಈ ಪ್ರಕ್ರಿಯೆ ನಡೆಯಬೇಕು ಎಂದು ಸ್ಪಷ್ಟಪಡಿಸಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…