Featured

ಸಂಧಾನದ ಮೂಲಕ ರಾಮ ಜನ್ಮಭೂಮಿ ಅಯೋಧ್ಯೆ ವಿವಾದವನ್ನು ಬಗೆಹರಿಸಿ : ಸುಪ್ರೀಂ ಆದೇಶ- Vishwanews24

ನವದೆಹಲಿ: ಹಲವು ದಶಕಗಳಿಂದ ಪರಿಹಾರ ಕಾಣದ ಸಮಸ್ಯೆಯಾಗಿರುವ ರಾಮಜನ್ಮಭೂಮಿ ವಿವಾದಕ್ಕೆ ಇದೀಗ ತಾರ್ಕಿಕ ಅಂತ್ಯವೊಂದು ಲಭಿಸುವ ಸೂಚನೆ ಸಿಕ್ಕಿದೆ. ಜನ್ಮಭೂಮಿ ವಿವಾದವನ್ನು ದಾವೆದಾರರು ಪರಸ್ಪರ ರಾಜೀ ಸಂಧಾನದ ಮೂಲಕವೇ ಬಗೆಹರಿಸಿಕೊಳ್ಳುವಂತೆ ದೇಶದ ಉಚ್ಛ ನ್ಯಾಯಾಲಯದ ಸಾಂವಿಧಾನಿಕ ಪೀಠವು ಇಂದು ಮಹತ್ವದ ತೀರ್ಪು ನೀಡಿದೆ.

ಇನ್ನೊಂದು ವಾರದಲ್ಲಿ ಸಂಧಾನ ಪ್ರಕ್ರಿಯೆ ಶುರುವಾಗಬೇಕು ಹಾಗೂ 2 ತಿಂಗಳ ಒಳಗೆ ಸಂಧಾನ ಪ್ರಕ್ರಿಯೆ ಅಂತ್ಯವಾಗಬೇಕು. ಉತ್ತರ ಪ್ರದೇಶದ ಫೈಜಾಬಾದ್ ನಲ್ಲಿ ಸಂಧಾನ ಮಾತುಕತೆ ನಡೆಸಿ ಇನ್ನೊಂದು ತಿಂಗಳಲ್ಲಿ ಸಂಧಾನದ ಫಲಶೃತಿ ಬಗ್ಗೆ ನಮಗೆ ಹೇಳಬೇಕು ಎಂದು ಖಲೀಫುಲ್ಲಾ ಸಂಧಾನಕಾರರ ತಂಡಕ್ಕೆ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ನೇತೃತ್ವದ ಐವರು ನ್ಯಾಯಾಧೀಶರ ಸಾಂವಿಧಾನಿಕ ಪೀಠ ಸೂಚಿಸಿದೆ.

ಕಾಲಮಿತಿಯಲ್ಲಿ ರಾಮ ಜನ್ಮಭೂಮಿ – ಬಾಬರಿ ಮಸೀದಿ ಜಮೀನು ವಿವಾದವನ್ನು ಸಂಧಾನ ಮಾತುಕತೆಯ ಮೂಲಕ ಪರಿಹರಿಸಿಕೊಳ್ಳುವಂತೆ ಸುಪ್ರೀಂಕೋರ್ಟ್ ನ ಸಾಂವಿಧಾನಿಕ ಪೀಠ ತನ್ನ ಆದೇಶದಲ್ಲಿ ಸ್ಪಷ್ಟವಾಗಿ ತಿಳಿಸಿದೆ. ಉತ್ತರಪ್ರದೇಶದ ಫೈಸಲಾಬಾದ್ ನಲ್ಲಿ ಈ ಸಂಧಾನ ಪ್ರಕ್ರಿಯೆ ನಡೆಯಬೇಕು ಎಂದು ಸುಪ್ರೀಂ ಕೋರ್ಟ್ ತನ್ನ ಆದೇಶದಲ್ಲಿ ಸ್ಪಷ್ಟಪಡಿಸಿದೆ. ನ್ಯಾಯಾಲವು ತಾನು ನಿಯಮಿಸುವ ಸಂಧಾನಕಾರರ ನೇತೃತ್ವದಲ್ಲಿ ಮತ್ತು ತನ್ನ ನಿಗಾವಹಣೆಯಲ್ಲಿ ಈ ಪ್ರಕ್ರಿಯೆ ನಡೆಯಬೇಕು ಎಂದು ಸ್ಪಷ್ಟಪಡಿಸಿದೆ.

Vishwa News 24

Recent Posts

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ – vishwanews24

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…

14 hours ago

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ – vishwanews24

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…

14 hours ago

ದೇಣಿಗೆ ಕಳ್ಳತನ ವಿವಾದ: ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ – vishwanews24

ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…

14 hours ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್‌ ಖರ್ಗೆ – vishwanews24

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ  ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…

14 hours ago

ರಾಮ ಮಂದಿರ ದೇಣಿಗೆ ಹಣದಲ್ಲಿ ಅಕ್ರಮ ಎಸಗುವವರನ್ನು ಬಿಡುವುದಿಲ್ಲ: ಯೋಗಿ ಆದಿತ್ಯನಾಥ್‌ ಎಚ್ಚರಿಕೆ – vishwanews24

ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್‌ ಲಕ್ನೋ: ರಾಮಭಕ್ತರ…

14 hours ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

16 hours ago