ಬೆಂಗಳೂರು: ಸಾರಿಗೆ ನಿಗಮಗಳ ನೌಕರರ ಸಂಘಟನೆಗಳು ಮತ್ತು ಸರ್ಕಾರದ ನಡುವೆ ಭಾನುವಾರ ನಡೆದ ಸಭೆಯಲ್ಲಿ ಅಂತಿಮಗೊಳಿಸಿರುವ ಸಂಧಾನ ಸೂತ್ರಗಳನ್ನು ಸಚಿವರು ಮುಷ್ಕರದ ವೇದಿಕೆಗೆ ಬಂದು ಸಲ್ಲಿಸಬೇಕು ಎಂಬ ಬೇಡಿಕೆಯನ್ನು ಕೋಡಿಹಳ್ಳಿ ಚಂದ್ರಶೇಖರ್ ಮುಂದಿಟ್ಟಿದ್ದಾರೆ.
ಸ್ವಾತಂತ್ರ್ಯ ಉದ್ಯಾನದ ಆವರಣದಲ್ಲಿ ಸಾರಿಗೆ ನೌಕರರ ಮುಷ್ಕರ ನಡೆಯುತ್ತಿರುವ ಸ್ಥಳದಲ್ಲಿ ಸೋಮವಾರ ಮಾತನಾಡಿದ ಅವರು, ‘ನಾವು ಹತ್ತು ಬೇಡಿಕೆಗಳನ್ನು ಮುಂದಿಟ್ಟಿದ್ದೆವು. ಒಂಭತ್ತು ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ಒಪ್ಪಿಕೊಂಡಿದೆ. ಸಂಧಾನ ಸೂತ್ರದ ಪ್ರತಿಯನ್ನು ಸಚಿವರು ಇಲ್ಲಿಗೆ ತಂದು ಒಪ್ಪಿಸಲಿ. ಆ ಬಳಿಕ ಹೋರಾಟದ ಮುಂದಿನ ಹೆಜ್ಜೆ ಕುರಿತು ನಿರ್ಧರಿಸುತ್ತೇವೆ’ ಎಂದರು.
ಮುಖಂಡರು ಸಂಪರ್ಕಕ್ಕೆ ಸಿಕ್ಕಿರಲಿಲ್ಲ: ‘ಸಾರಿಗೆ ನೌಕರರ ಕೂಟದ ಅಧ್ಯಕ್ಷ ಚಂದ್ರಶೇಖರ್ ಸೇರಿದಂತೆ ಸಂಘಟನೆಯ ಎಂಟು ಮುಖಂಡರು ಸೋಮವಾರ ಬೆಳಿಗ್ಗೆಯಿಂದ ಎರಡು ಗಂಟೆಗಳ ಕಾಲ ಸಂಪರ್ಕಕ್ಕೆ ಸಿಕ್ಕಿರಲಿಲ್ಲ. ಎಲ್ಲರ ಮೊಬೈಲ್ ಫೋನ್ ಗಳು ಸ್ವಿಚ್ಡ್ ಆಫ್ ಆಗಿದ್ದವು. ಮುಖಂಡರ ಅಪಹರಣ ನಡೆದಿರಬಹುದು ಎಂಬ ಆತಂಕ ಸೃಷ್ಟಿಯಾಗಿತ್ತು. ಪೊಲೀಸರಿಗೆ ದೂರು ನೀಡಲು ಯೋಚಿಸಲಾಗಿತ್ತು’ ಎಂದು ಕೋಡಿಹಳ್ಳಿ ಚಂದ್ರಶೇಖರ್ ಹೇಳಿದರು.
‘ಎರಡು ಗಂಟೆಗಳ ಬಳಿಕ ಒಂದು ನಂಬರ್ ನಿಂದ ಕರೆ ಬಂತು. ಆ ಕಡೆಯಿಂದ ಮಾತನಾಡಿದ ಬಿಎಂಟಿಸಿ ಅಧ್ಯಕ್ಷ ನಂದೀಶ್ ರೆಡ್ಡಿ ಮಾತನಾಡಿದರು. ಆತಂಕಪಡಬೇಡಿ ಸಂಘಟನೆಯ ಮುಖಂಡರು ನಮ್ಮೊಂದಿಗೆ ಇದ್ದಾರೆ ಎಂದರು. ಆ ಬಳಿಕ ಮುಖಂಡರು ನಮ್ಮ ಸಂಪರ್ಕಕ್ಕೆ ಬಂದರು’ ಎಂದು ತಿಳಿಸಿದರು.
ಸಚಿವರು ಸಂಧಾನ ಸೂತ್ರದ ಲಿಖಿತ ಪ್ರತಿಯೊಂದಿಗೆ ಇಲ್ಲಿಗೆ ಬರಲು. ಅಷ್ಟರವರೆಗೆ ಭಾನುವಾರದಿಂದ ನಡೆದಿರುವ ಎಲ್ಲ ಬೆಳವಣಿಗೆಗಳ ಕುರಿತು ಚರ್ಚೆ ನಡೆಯಲಿ. ಸಚಿವರು ಬಂದ ಬಳಿಕ ಚರ್ಚಿಸಿ ತೀರ್ಮಾನಕ್ಕೆ ಬರಲಾಗುವುದು ಎಂದರು.
ಆಮಿಷಕ್ಕೆ ಒಳಗಾಗಿಲ್ಲ: ಸಾರಿಗೆ ನೌಕರರ ಕೂಟದ ಅಧ್ಯಕ್ಷ ಚಂದ್ರಶೇಖರ್ ಮಾತನಾಡಿ, ‘ ನಮ್ಮ ಯಾವುದೇ ಬೇಡಿಕೆಗಳಿಂದ ಹಿಂದೆ ಸರಿದಿಲ್ಲ. ಸರ್ಕಾರಿ ನೌಕರರು ಎಂದು ಪರಿಗಣಿಸುವ ವಿಚಾರದಲ್ಲಿ ಆರ್ಥಿಕ ತೊಡಕುಗಳಿವೆ ಎಂದು ಸರ್ಕಾರ ಹೇಳಿದೆ’ ಎಂದರು.
‘ಜಾತಿ ಸಂಘಟನೆಗಳ ಕುರಿತು ಕೆಲವು ಆರೋಪಗಳು ಕೇಳಿಬರುತ್ತಿವೆ. ಯಾವುದೇ ಜಾತಿ ಸಂಘಟನೆಗಳ ಮಾತನ್ನು ನಾವು ಕೇಳಿಲ್ಲ. ಯಾವುದೇ ರೀತಿಯ ಆಮಿಷಕ್ಕೆ ಒಳಗಾಗಿಲ್ಲ. ಯಾರಿಂದಲೂ ಹಣ ಸೇರಿದಂತೆ ಯಾವುದನ್ನೂ ನಾವು ಪಡೆದಿಲ್ಲ’ ಎಂದು ಹೇಳಿದರು.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…