ಬೆಂಗಳೂರು: ಬೀದರ್‌ನ ಶಾಹೀನ್ ಶಾಲೆಯ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಿರುವ ವಿಚಾರಕ್ಕೆ ಸಂಬಂಧಿಸಿ ಕಾಂಗ್ರೆಸ್ ನಾಯಕರು ಶನಿವಾರ ಮೌರ್ಯ ಸರ್ಕಲ್ ಬಳಿ ಪ್ರತಿಭಟನೆ ನಡೆಸಿದರು.
ಈ ಸಂದರ್ಭ ಮಾತನಾಡಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸಂವಿಧಾನ, ಪ್ರಜಾಪ್ರಭುತ್ವವನ್ನು ಉಳಿಸುವುದು ಕಾಂಗ್ರೆಸ್ ಜವಾಬ್ದಾರಿ. ಇವರು ಭಾವನಾತ್ಮಕ ವಿಚಾರವನ್ನ ಜನರ ಮುಂದಿಟ್ಟು ಜನರ ದಾರಿ ತಪ್ಪಿಸುತ್ತಿದ್ದಾರೆ. ಕಾನೂನು ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ. ನರೇಂದ್ರ ಮೋದಿ, ಅಮಿತ್ ಶಾ ಜೋಡಿ ದೇಶವನ್ನು ನಾಶ ಮಾಡುತ್ತಿದೆ. ಕಳೆದ ಆರು ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸಂವಿಧಾನ ಹತ್ತಿಕ್ಕುವ ಕೆಲಸ ಮಾಡುತ್ತಿದ್ದಾರೆ ಎಂದರು.
ಮೈಸೂರಿನಲ್ಲಿ ಯುವತಿ ಫ್ರೀ ಕಾಶ್ಮೀರ ಎಂದರೆ ಕೇಸ್ ಬೀಳುತ್ತದೆ. ಖಾದರ್ ಮಾತಾಡಿದರೆ ದೇಶದ್ರೋಹದ ಕೇಸ್ ಹಾಕುತ್ತಾರೆ. ಬೀದರ್‌ನ ಶಾಹೀನ ಶಾಲೆಯಲ್ಲಿ ಸಿಎಎ ಬಗ್ಗೆ ಮಕ್ಕಳು ನಾಟಕ ಮಾಡಿದ್ದರು. ನಾಟಕ ಮಾಡುವಾಗ ಹಿರಿಯರ ಮಾಹಿತಿ ಕೇಳಿದರೆ ಅವರು ಎಲ್ಲಿಂದ ತರುತ್ತಾರೆ? ಸಮಾಧಿಯಿಂದ ಬಗೆದು ತರಬೇಕಾ ? ಮಾಹಿತಿ ಕೇಳಲು ಬರೋರಿಗೆ ಚಪ್ಪಲಿ ತಗೊಂಡು ಹೊಡಿತೀನಿ, ಎಂದು 11 ವರ್ಷದ ಮಗು ಡೈಲಾಗ್ ಹೇಳುತ್ತದೆ. ಅದು ಮೋದಿ ವಿರುದ್ಧ ಹೇಳಿದ ಮಾತಲ್ಲ. ಮಾಹಿತಿ ಕೇಳಲು ಬರುವವರಿಗೆ ಹೇಳಿದ ಮಾತಾಗಿದೆ ಎಂದು ಹೇಳಿದರು.
ಯಡಿಯೂರಪ್ಪ, ಬೊಮ್ಮಾಯಿಗೆ ಗೊತ್ತಿಲ್ಲದೆ ಪೊಲೀಸರು ಕೇಸ್ ಹಾಕುವುದಿಲ್ಲ. ಪೊಲೀಸರಿಗೆ ನಾನು ಹೇಳೋದು ಒಂದೇ, ಯಡಿಯೂರಪ್ಪ ಶಾಶ್ವತವಾಗಿ ಗೂಟ ಹೊಡ್ಕೊಂಡು ಕೂತಿರಲ್ಲ. ದೆಹಲಿ ಜೆಎನ್ಯು ವಿವಿಯಲ್ಲಿ ಗೂಂಡಾಗಳು ದಾಳಿ ಮಾಡಿದ್ದರು. ಇಂತಹವರ ಮೇಲೆ ಕೇಸ್ ಹಾಕಿಲ್ಲ. ಇದಕ್ಕಿಂತ ಕ್ರೂರವಾದ ಸರ್ಕಾರ ಮತ್ತೊಂದಿಲ್ಲ. ಬಿಜೆಪಿಯ ನಾಯಕರ ಮಾತನ್ನು ಕೇಳಿ ಕಾನೂನು ವಿರುದ್ಧವಾಗಿ ನಡೆದುಕೊಂಡರೆ ಮುಂದಿನ ದಿನದಲ್ಲಿ ತಕ್ಕ ಪಾಠ ಕಲಿಯಬೇಕಾಗುತ್ತೆ ಎಂದರು.
ಆರ್ ಅಶೋಕ ಮಗನ ಕೇಸ್ ಮುಚ್ಚಿ ಹಾಕುವ ಪ್ರಯತ್ನ ನಡೆಯುತ್ತಿದೆ. ಹ್ಯಾರಿಸ್ ಮಗನನ್ನ ಗೂಂಡಾ ಎಂದು ಪ್ರಚಾರ ಮಾಡಲಾಗುತ್ತಿದೆ. ಬಿಜೆಪಿ ತೊಲಗಿಸುವವರೆಗೂ ಹೋರಾಟ ನಿಲ್ಲಲ್ಲ ಎಂದು ಹೇಳಿದರು.
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…
ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…