ಸಂವಿಧಾನ, ಪ್ರಜಾಪ್ರಭುತ್ವವನ್ನು ಉಳಿಸುವುದು ಕಾಂಗ್ರೆಸ್ ಜವಾಬ್ದಾರಿ, ಮೋದಿ, ಅಮಿತ್ ಶಾ ಜೋಡಿ ದೇಶವನ್ನು ನಾಶ ಮಾಡುತ್ತಿದೆ, ಬಿಜೆಪಿ ತೊಲಗಿಸುವವರೆಗೂ ಹೋರಾಟ ನಿಲ್ಲಲ್ಲ : ಸಿದ್ದರಾಮಯ್ಯ -Vishwanews24

ಸಂವಿಧಾನ, ಪ್ರಜಾಪ್ರಭುತ್ವವನ್ನು ಉಳಿಸುವುದು ಕಾಂಗ್ರೆಸ್ ಜವಾಬ್ದಾರಿ..

ಮೋದಿ, ಅಮಿತ್ ಶಾ ಜೋಡಿ ದೇಶವನ್ನು ನಾಶ ಮಾಡುತ್ತಿದೆ..

ಬಿಜೆಪಿ ತೊಲಗಿಸುವವರೆಗೂ ಹೋರಾಟ ನಿಲ್ಲಲ್ಲ : ಸಿದ್ದರಾಮಯ್ಯ

ಬೆಂಗಳೂರುಬೀದರ್​ನ ಶಾಹೀನ್ ಶಾಲೆಯ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಿರುವ ವಿಚಾರಕ್ಕೆ ಸಂಬಂಧಿಸಿ ಕಾಂಗ್ರೆಸ್​ ನಾಯಕರು ಶನಿವಾರ ಮೌರ್ಯ ಸರ್ಕಲ್​ ಬಳಿ ಪ್ರತಿಭಟನೆ ನಡೆಸಿದರು.

 

ಈ ಸಂದರ್ಭ ಮಾತನಾಡಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸಂವಿಧಾನ, ಪ್ರಜಾಪ್ರಭುತ್ವವನ್ನು ಉಳಿಸುವುದು ಕಾಂಗ್ರೆಸ್ ಜವಾಬ್ದಾರಿ. ಇವರು ಭಾವನಾತ್ಮಕ ವಿಚಾರವನ್ನ ಜನರ ಮುಂದಿಟ್ಟು ಜನರ ದಾರಿ ತಪ್ಪಿಸುತ್ತಿದ್ದಾರೆ. ಕಾನೂನು ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ. ನರೇಂದ್ರ ಮೋದಿ, ಅಮಿತ್ ಶಾ ಜೋಡಿ ದೇಶವನ್ನು ನಾಶ ಮಾಡುತ್ತಿದೆ. ಕಳೆದ ಆರು ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸಂವಿಧಾನ ಹತ್ತಿಕ್ಕುವ ಕೆಲಸ ಮಾಡುತ್ತಿದ್ದಾರೆ ಎಂದರು.

ಮೈಸೂರಿನಲ್ಲಿ ಯುವತಿ ಫ್ರೀ ಕಾಶ್ಮೀರ ಎಂದರೆ ಕೇಸ್ ಬೀಳುತ್ತದೆ. ಖಾದರ್ ಮಾತಾಡಿದರೆ ದೇಶದ್ರೋಹದ ಕೇಸ್ ಹಾಕುತ್ತಾರೆ. ಬೀದರ್‌‌ನ ಶಾಹೀನ ಶಾಲೆಯಲ್ಲಿ ಸಿಎಎ ಬಗ್ಗೆ ಮಕ್ಕಳು ನಾಟಕ ಮಾಡಿದ್ದರು. ನಾಟಕ ಮಾಡುವಾಗ ಹಿರಿಯರ ಮಾಹಿತಿ ಕೇಳಿದರೆ ಅವರು ಎಲ್ಲಿಂದ ತರುತ್ತಾರೆ? ಸಮಾಧಿಯಿಂದ ಬಗೆದು ತರಬೇಕಾ ? ಮಾಹಿತಿ ಕೇಳಲು ಬರೋರಿಗೆ ಚಪ್ಪಲಿ ತಗೊಂಡು ಹೊಡಿತೀನಿ, ಎಂದು 11 ವರ್ಷದ ಮಗು ಡೈಲಾಗ್ ಹೇಳುತ್ತದೆ. ಅದು ಮೋದಿ ವಿರುದ್ಧ ಹೇಳಿದ ಮಾತಲ್ಲ. ಮಾಹಿತಿ ಕೇಳಲು ಬರುವವರಿಗೆ ಹೇಳಿದ ಮಾತಾಗಿದೆ ಎಂದು ಹೇಳಿದರು.

ಯಡಿಯೂರಪ್ಪ, ಬೊಮ್ಮಾಯಿಗೆ ಗೊತ್ತಿಲ್ಲದೆ ಪೊಲೀಸರು ಕೇಸ್ ಹಾಕುವುದಿಲ್ಲ. ಪೊಲೀಸರಿಗೆ ನಾನು ಹೇಳೋದು ಒಂದೇ, ಯಡಿಯೂರಪ್ಪ ಶಾಶ್ವತವಾಗಿ ಗೂಟ ಹೊಡ್ಕೊಂಡು ಕೂತಿರಲ್ಲ. ದೆಹಲಿ ಜೆಎನ್​ಯು ವಿವಿಯಲ್ಲಿ ಗೂಂಡಾಗಳು ದಾಳಿ ಮಾಡಿದ್ದರು. ಇಂತಹವರ ಮೇಲೆ ಕೇಸ್ ಹಾಕಿಲ್ಲ. ಇದಕ್ಕಿಂತ ಕ್ರೂರವಾದ ಸರ್ಕಾರ ಮತ್ತೊಂದಿಲ್ಲ. ಬಿಜೆಪಿಯ ನಾಯಕರ ಮಾತನ್ನು ಕೇಳಿ ಕಾನೂನು ವಿರುದ್ಧವಾಗಿ ನಡೆದುಕೊಂಡರೆ ಮುಂದಿನ ದಿನದಲ್ಲಿ ತಕ್ಕ ಪಾಠ ಕಲಿಯಬೇಕಾಗುತ್ತೆ ಎಂದರು.

ಆರ್ ಅಶೋಕ ಮಗನ ಕೇಸ್ ಮುಚ್ಚಿ ಹಾಕುವ ಪ್ರಯತ್ನ ನಡೆಯುತ್ತಿದೆ. ಹ್ಯಾರಿಸ್ ಮಗನನ್ನ ಗೂಂಡಾ ಎಂದು ಪ್ರಚಾರ ಮಾಡಲಾಗುತ್ತಿದೆ. ಬಿಜೆಪಿ ತೊಲಗಿಸುವವರೆಗೂ ಹೋರಾಟ ನಿಲ್ಲಲ್ಲ ಎಂದು ಹೇಳಿದರು.

Vishwa News 24

Recent Posts

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ – vishwanews24

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…

8 hours ago

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ – vishwanews24

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…

8 hours ago

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಉಸ್ತುವಾರಿಯಾಗಿ ಯು.ಟಿ ಖಾದರ್ – vishwanews24

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…

9 hours ago

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ – vishwanews24

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…

9 hours ago

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ – vishwanews24

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…

9 hours ago

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ – vishwanews24

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…

9 hours ago