Featured

ಸಂವಿಧಾನ  ಬದಲಾವಣೆ ಮಾಡಿದರೆ ದೇಶದಲ್ಲಿ ರಕ್ತಪಾತವಾಗುತ್ತದೆ ; ಇದು ಬಿಜೆಪಿಯವರ ಹಿಡನ್ ಅಜೆಂಡಾ : ಸಿದ್ದರಾಮಯ್ಯ ವಾಗ್ದಾಳಿ – Vishwanews24

ಸಂವಿಧಾನ  ಬದಲಾವಣೆ ಮಾಡಿದರೆ ದೇಶದಲ್ಲಿ ರಕ್ತಪಾತವಾಗುತ್ತದೆ ; ಇದು ಬಿಜೆಪಿಯವರ ಹಿಡನ್ ಅಜೆಂಡಾ : ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು: ಸಂವಿಧಾನ  ಬದಲಾವಣೆ ಮಾಡಿದರೆ ದೇಶದಲ್ಲಿ ರಕ್ತಪಾತವಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಸದ ಅನಂತ್ ಕುಮಾರ್ ಹೆಗಡೆಯವರ  ಸಂವಿಧಾನ ತಿದ್ದುಪಡಿ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ. ಅವರ ಹೇಳಿಕೆ ಮೊದಲ ಬಾರಿಯಲ್ಲ. ಈ ಹಿಂದೆ ಮಂತ್ರಿಯಾಗಿದ್ದಾಗಲೂ ಇದನ್ನೇ ಹೇಳಿದ್ದರು. ಮೋದಿ ಪ್ರಧಾನಿಯಾಗಿದ್ದಾಗಲೇ ಅವರು ಹೇಳಿದ್ದರು. ಮೋದಿಯವರು ಅವರ ಮೇಲೆ ಶಿಸ್ತುಕ್ರಮ ಕೈಗೊಳ್ಳಲಿಲ್ಲ. ಇದು ಬಿಜೆಪಿಯವರ ಹಿಡನ್ ಅಜೆಂಡಾ ಎಂದು ವಾಗ್ದಾಳಿ ನಡೆಸಿದ್ದಾರೆ.

ಸಂವಿಧಾನ ಬದಲಾವಣೆ ಮಾಡಬೇಕು ಎನ್ನುವುದು ಬಿಜೆಪಿಗರ ಹಿಡನ್ ಅಜೆಂಡಾ. ಸಂವಿಧಾನಕ್ಕೆ ಅನಗತ್ಯ ವಿಚಾರಗಳನ್ನ ಸೇರಿಸಿದ್ದಾರೆ ಎಂದು ಅವರು ಹೇಳಿದ್ದಾರೆ. ಸಂವಿಧಾನ ಬದಲಾವಣೆ ಮಾಡಬೇಕು, ಇದಕ್ಕಾಗಿ 2/3 ಬಹುಮತ ಬೇಕು ಎಂದಿದ್ದಾರೆ. ದೇಶ ಉದ್ದಾರಕ್ಕೆ, ಬಡವರ ಉದ್ದಾರಕ್ಕೆ ಅಲ್ಲ. ಸಂವಿಧಾನ ಬದಲಾವಣೆಗಾಗಿ 2/3 ಬಹುಮತ ಕೇಳುತ್ತಿದ್ದಾರೆ ಎಂದು ಅವರು ಕಿಡಿಕಾರಿದ್ದಾರೆ.

ಮನುವಾದವನ್ನು ಸಮರ್ಥನೆ ಮಾಡಿಕೊಳ್ಳೋದು, ಮನುಸ್ಮೃತಿಗೆ ಅನುಗುಣವಾಗಿ ಸಂವಿಧಾನ ಇರಬೇಕು ಎನ್ನುವುದು ಇವರ ಹಿಡನ್ ಅಜೆಂಡಾ. ಅದಕ್ಕೆ ಇಡೀ ದೇಶದ ಬಡವರು, ದಲಿತರು, ಅಲ್ಪಸಂಖ್ಯಾತರು ಹಾಗೂ ಹಿಂದುಳಿದವರು ಎಲ್ಲರೂ ಇದನ್ನ ವಿರೋಧ ಮಾಡ್ತಾರೆ. ಬಿಜೆಪಿಯ ಹಿರಿಯ ನಾಯಕ ಅನಂತ್ ಕುಮಾರ್ ಹೆಗಡೆ ಮೂಲಕ ಇದನ್ನು ಹೇಳಿಸುತ್ತಿದ್ದಾರೆ. ಒಂದು ವೇಳೆ ಸಂವಿಧಾನ ಬದಲಾವಣೆಯ ಕೆಲಸವಾದರೆ ದೇಶದಲ್ಲಿ ರಕ್ತಪಾತವಾಗಲಿದೆ ಎಂದು ಅವರು ಭವಿಷ್ಯ ನುಡಿದಿದ್ದಾರೆ.

ಅನಂತ್ ಕುಮಾರ್ ಹೆಗಡೆ ಹೇಳಿಕೆ ವೈಯಕ್ತಿಕ ಎಂಬ ಬಿಜೆಪಿ ನಿಲುವಿನ ಬಗ್ಗೆ ಪ್ರತಿಕ್ರಿಯಿಸಿದ ಅವರು, ಮಂತ್ರಿ ಮಂಡಲದಲ್ಲಿದ್ದುಕೊಂಡು ಅದು ವೈಯಕ್ತಿಕ ಹೇಳಿಕೆ ಆಗುತ್ತಾ? ಸರ್ಕಾರ ಎಂದರೆ ಅದು ಪಕ್ಷದ ಹೇಳಿಕೆ. ಈಗ ಸಿಟ್ಟಿಂಗ್ ಎಂಪಿ, ಅವರು ಸ್ಟೇಟ್ಮೆಂಟ್ ಕೊಡ್ತಾರೆ ಅಂದ್ರೆ ಏನು? ಅವರು ಸಿನೀಯರ್ ಸಂಸದರು. ನಮ್ಗೂ ಅದಕ್ಕೂ ಸಂಬಂಧವಿಲ್ಲ ಅಂದ್ರೆ ಹೇಗೆ ಎಂದು ಅವರು ಪ್ರಶ್ನಿಸಿದ್ದಾರೆ.

 

Vishwa News 24

Recent Posts

ಉಡುಪಿ : ಅಕ್ಕ ಕೆಫೆ ನಿರ್ವಹಣೆ ;  ಏ. 13 ರಂದು ನೇರ ಸಂದರ್ಶನ – vishwanews24

ಉಡುಪಿ : ಅಕ್ಕ ಕೆಫೆ ನಿರ್ವಹಣೆ ;  ಏ. 13 ರಂದು ನೇರ ಸಂದರ್ಶನ ಉಡುಪಿ : ರಾಷ್ಟ್ರೀಯ ಗ್ರಾಮೀಣ…

2 days ago

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ,  ದ.ಕ ಜಿಲ್ಲೆ ದ್ವೀತಿಯ – vishwanews24

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ,  ದ.ಕ ಜಿಲ್ಲೆ ದ್ವೀತಿಯ ಬೆಂಗಳೂರು: 2025-26ನೇ ಸಾಲಿನ ದ್ವೀತಿಯ…

2 days ago

ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ – vishwanews24

ಗುಜರಾತ್ ಜನರ ಭಾವನೆಗಳನ್ನು ನೋಯಿಸುವುದು ನನ್ನ ಉದ್ದೇಶವಾಗಿರಲಿಲ್ಲ .. ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ ಬೆಂಗಳೂರು: ಕೇರಳ…

3 days ago

ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ – vishwanews24

ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ ಮಂಗಳೂರು:…

3 days ago

ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು – vishwanews24

ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು ಬಾಗಲಕೋಟೆ: ಯುವ ಪ್ರೇಮಿಗಳಿಬ್ಬರು ನೇಣು ಹಾಕಿಕೊಂಡು ಸಾವಿಗೆ ಶರಣಾದಂತಹ ಆಘಾತಕಾರಿ…

3 days ago

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ – vishwanews24

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬಹುದಿನಗಳ ನಿರೀಕ್ಷೆ ಕೊನೆಗೂ ಅಂತ್ಯಗೊಳ್ಳಲಿದೆ. ನಾಳೆ (ಏಪ್ರಿಲ್…

3 days ago