Featured

ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರಿಗೆ ಹೆಚ್ಚು ಅವಮಾನ ಮಾಡಿದ್ದು ಕಾಂಗ್ರೆಸ್‌ : ನಳಿನ್‌‌ ಕುಮಾರ್ ಕಟೀಲ್ -Vishwanews24

ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರಿಗೆ ಹೆಚ್ಚು ಅವಮಾನ ಮಾಡಿದ್ದು ಕಾಂಗ್ರೆಸ್‌ : ನಳಿನ್‌‌ ಕುಮಾರ್ ಕಟೀಲ್ -Vishwanews24

ಚಿತ್ರದುರ್ಗ : “ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರಿಗೆ ಹೆಚ್ಚು ಅವಮಾನ ಮಾಡಿದ್ದು ಕಾಂಗ್ರೆಸ್‌. ಅಂಬೇಡ್ಕರ್‌ ಅವರು ಮೊದಲ ಸಚಿವ ಸಂಪುಟದಲ್ಲಿಯೇ ನೋವಿನಿಂದ ಹೊರಬಂದಿದ್ದರು” ಎಂದು ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

ಚಿತ್ರದುರ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಅಂಬೇಡ್ಕರ್‌ ಅವರಿಗೆ ಹೆಚ್ಚು ಅವಮಾನ ಮಾಡಿದ್ದು ಕಾಂಗ್ರೆಸ್‌ ಪಕ್ಷ. ಅಂಬೇಡ್ಕರ್‌ ಅವರು ಲೋಕಸಭೆ ಚುನಾವಣೆಗೆ ನಿಂತಾಗ ಅವರನ್ನು ಸೋಲಿಸಿದ್ದು ಕಾಂಗ್ರೆಸ್‌. ಅಂಬೇಡ್ಕರ್‌ ಅವರ ಅಂತ್ಯಸಂಸ್ಕಾರಕ್ಕೂ ಜಾಗ ನೀಡಲಿಲ್ಲ. ಅಲ್ಲದೇ, ಅವರಿಗೆ ಭಾರತ ರತ್ನ ಪುರಸ್ಕಾರವನ್ನು ನೀಡಲಿಲ್ಲ. ಅಂಬೇಡ್ಕರ್‌ ಅವರಿಗೆ ಭಾರತ ರತ್ನ ಕೊಟ್ಟಿದ್ದು ನಾವು” ಎಂದು ದಲಿತ ಸಿಎಂ ವಿಚಾರವಾಗಿ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.

ಸಿಎಂ ಬದಲಾವಣೆ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, “ಸಿಎಂ ಬದಲಾವಣೆ ಬಗ್ಗೆ ಹೈಕಮಾಂಡ್‌‌ ಹಾಗೂ ರಾಷ್ಟ್ರೀಯ ಅಧ್ಯಕ್ಷರು ತೀರ್ಮಾನಿಸುತ್ತಾರೆ” ಎಂದಿದ್ದಾರೆ.

“ಸಿದ್ದರಾಮಯ್ಯ ಅವರು ಕಾಂಗ್ರೆಸ್‌ಗೆ ಬಂದ ಬಳಿಕ ಸಿಎಂ ಆದವರು. ಕಾಂಗ್ರೆಸ್ ಜಗಜೀವನ್‌ ರಾಮ್‌ ಅವರನ್ನು ಪ್ರಧಾನಿ ಮಾಡಲಿಲ್ಲ. ಜಿ. ಪರಮೇಶ್ವರ್‌ ಅವರನ್ನು ಡಿಸಿಎಂ ಮಾಡಿಲ್ಲ, ಬದಲಾಗಿ ಅವರನ್ನು ಸೋಲಿಸಿದರು. ಧ್ರುವನಾರಾಯಣ ಸೇರಿದಂತೆ ಮಲ್ಲಿಕಾರ್ಜುನ ಖರ್ಗೆ, ಬಿ.ಎನ್‌‌.ಚಂದ್ರಪ್ಪ ಹಾಗೂ ದಲಿತ ಮುಖಂಡರನ್ನು ಸೋಲಿಸಿದರು. ಇಂದಿಗೂ ಕಾಂಗ್ರೆಸ್‌ ಮಲ್ಲಿಕಾರ್ಜುನ ಖರ್ಗೆ ಹಾಗೂ ಪರಮೇಶ್ವರ್‌ ಅವರನ್ನು ಮುಂದೆ ಬರಲು ಬಿಡುತ್ತಿಲ್ಲ” ಎಂದು ಹೇಳಿದ್ದಾರೆ.

“ನಾವು ಅಬ್ದುಲ್‌ ಕಲಾಂ ಅವರನ್ನು ರಾಷ್ಟ್ರಪತಿ ಮಾಡಿದ್ದೇವೆ. ದಲಿತರಾದ ರಾಮನಾಥ್ ಕೋವಿಂದ್‌ ಅವರನ್ನು ರಾಷ್ಟ್ರಪತಿ ಮಾಡಿದ್ದೇವೆ. ಗೋವಿಂದ ಕಾರಜೋಳ ಅವರನ್ನು ಡಿಸಿಎಂ ಮಾಡಿದ್ದೇವೆ. ಬಿಜೆಪಿ ಕಡಿಮೆ ಅವಧಿಯಲ್ಲಿ ಅಧಿಕಾರ ನಡೆಸಿದೆ” ಎಂದಿದ್ದಾರೆ.

ಸಿದ್ದರಾಮಯ್ ಅವರ ವಿರುದ್ದ ವಾಗ್ದಾಳಿ ನಡೆಸಿದ ಅವರು, “ಸಿದ್ದರಾಮಯ್ಯ ಅವರು ಆಡಳಿತದ ನಡೆಸಿದ ಸಂದರ್ಭ ಆದಷ್ಟು ಭ್ರಷ್ಟಾಚಾರ ರಾಜ್ಯದ ಇತಿಹಾಸದಲ್ಲಿ ಯಾವ ಸರ್ಕಾರವೂ ಮಾಡಿಲ್ಲ. ಅವರು ಅರ್ಕಾವತಿ ಪ್ರಕರಣವನ್ನು ಮುಚ್ಚಿ ಹಾಕಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Vishwa News 24

Recent Posts

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

5 minutes ago

ಸುರತ್ಕಲ್ ಬಾಲಕಿ ಆತ್ಮಹತ್ಯೆ ಪ್ರಕರಣ : ಪೋಷಕರ ನಡೆ ಕುರಿತು ವಿಷಾದ ವ್ಯಕ್ತಪಡಿಸಿದ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ – vishwanews24

ಸುರತ್ಕಲ್ ಬಾಲಕಿ ಆತ್ಮಹತ್ಯೆ ಪ್ರಕರಣ : ಪೋಷಕರ ನಡೆ ಕುರಿತು ವಿಷಾದ ವ್ಯಕ್ತಪಡಿಸಿದ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಮಂಗಳೂರು …

16 minutes ago

ಗೃಹಲಕ್ಷ್ಮಿ ಯೋಜನೆಯಲ್ಲಿ ಯಾವುದೇ ಗೋಲ್‌ಮಾಲ್ ಆಗಿಲ್ಲ:  ಮಹಿಳಾ & ಮಕ್ಕಳಾಭಿವೃದ್ಧಿ ಇಲಾಖೆ ಸ್ಪಷ್ಟನೆ  – vishwanews24

ಗೃಹಲಕ್ಷ್ಮಿ ಯೋಜನೆಯಲ್ಲಿ ಗೋಲ್‌ಮಾಲ್ ಆಗಿಲ್ಲ:  ಮಹಿಳಾ & ಮಕ್ಕಳಾಭಿವೃದ್ಧಿ ಇಲಾಖೆ ಸ್ಪಷ್ಟನೆ  ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಲ್ಲಿ ಮಹಾಲೋಪವಾಗಿದೆ ಅಂತ ಸಿಎಜಿ…

24 minutes ago

ನನ್ನ , ಡಿ.ಕೆ.ಶಿವಕುಮಾರ್ ಮಧ್ಯೆ ಯಾವುದೇ ವ್ಯವಹಾರಿಕ ಸಂಬಂಧ ಇಲ್ಲ , ಆತ್ಮೀಯತೆಯೂ ಇಲ್ಲ : ವಿಜಯೇಂದ್ರ – vishwanews24

ನನ್ನ , ಡಿ.ಕೆ.ಶಿವಕುಮಾರ್ ಮಧ್ಯೆ ಯಾವುದೇ ವ್ಯವಹಾರಿಕ ಸಂಬಂಧ ಇಲ್ಲ , ಆತ್ಮೀಯತೆಯೂ ಇಲ್ಲ : ವಿಜಯೇಂದ್ರ ಮಂಗಳೂರು :…

33 minutes ago

ಅಯೋಧ್ಯಾ ರಾಮ ಮಂದಿರದಲ್ಲಿ ದೇಣಿಗೆ ದುರುಪಯೋಗ ಆರೋಪ: ಎಂಟು ಆರೋಪಿಗಳ ಬಂಧನ – vishwanews24

ಅಯೋಧ್ಯಾ ರಾಮ ಮಂದಿರದಲ್ಲಿ ದೇಣಿಗೆ ದುರುಪಯೋಗ ಆರೋಪ: ಎಂಟು ಆರೋಪಿಗಳ ಬಂಧನ ಅಯೋಧ್ಯೆ: ಅಯೋಧ್ಯೆ ರಾಮ ಮಂದಿರಕ್ಕೆ ಭಕ್ತಾದಿಗಳು ನೀಡಿದ್ದ…

40 minutes ago

ಆರ್‌ ಎಸ್‌ ಎಸ್ ವಿವಿಧ ಆಯಾಮಗಳಲ್ಲಿ ಸಮಾಜ ಸೇವೆ ನಡೆಸಿಕೊಂಡು ಬಂದಿದೆ : ಸತ್ಯಜಿತ್ ಸುರತ್ಕಲ್ – vishwanews24

ಆರ್‌ ಎಸ್‌ ಎಸ್ ವಿವಿಧ ಆಯಾಮಗಳಲ್ಲಿ ಸಮಾಜ ಸೇವೆ ನಡೆಸಿಕೊಂಡು ಬಂದಿದೆ : ಸತ್ಯಜಿತ್ ಸುರತ್ಕಲ್ ಮಂಗಳೂರು: ರಾಷ್ಟ್ರೀಯ ಸ್ವಯಂಸೇವಕ…

1 hour ago