Featured

ಸಂಸತ್ತಿನಲ್ಲಿ ಬಹುಮತ ಕಳೆದುಕೊಂಡ ಪಾಕ್​​ ಪ್ರಧಾನಿ ಇಮ್ರಾನ್ ಖಾನ್ ; ರಾಜೀನಾಮೆ ಸಾಧ್ಯತೆ ! Vishwanews24

ಸಂಸತ್ತಿನಲ್ಲಿ ಬಹುಮತ ಕಳೆದುಕೊಂಡ ಪಾಕ್​​ ಪ್ರಧಾನಿ ಇಮ್ರಾನ್ ಖಾನ್ ; ರಾಜೀನಾಮೆ ಸಾಧ್ಯತೆ !

ಇಸ್ಲಾಮಬಾದ್ : ಪಾಕಿಸ್ತಾನದ ಪ್ರಧಾನಿ ಇಮ್ರಾನ್​​ ಖಾನ್​​​​​​​​​​ ಸಂಸತ್ತಿನಲ್ಲಿ ಬಹುಮತ ಕಳೆದುಕೊಂಡಿದ್ದಾರೆ. ಪಾಕಿಸ್ತಾನ್​​ ತೆಹರಿಕ್​​ ಇ ಇನ್ಸಾಫ್​ ಮೈತ್ರಿಕೂಟಕ್ಕೆ ನೀಡಿದ್ದ ಬೆಂಬಲವನ್ನು ಮುತಾಹಿದಾ ಖುವಾಮಿ ಮೂವ್​ಮೆಂಟ್​ ಪಾಕಿಸ್ತಾನ್​​ ವಾಪಸ್​ ಪಡೆದು ಪಾಕಿಸ್ತಾನ್​​ ಪೀಪಲ್​ ಪಾರ್ಟಿ ಜತೆ ಕೈಜೋಡಿಸಿದೆ.

ವಿಶ್ವಾಸಮತ ಯಾಚನೆಗೆ ಮೊದಲೇ ಮುತಾಹಿದಾ ಕ್ವಾಮಿ ಮೂವ್‌ಮೆಂಟ್ ಪಾಕಿಸ್ತಾನ್ (ಎಂಕ್ಯುಎಂ-ಪಿ) ಪಕ್ಷವು ಪಾಕಿಸ್ತಾನದ ತೆಹ್ರೀಕ್-ಇ-ಇನ್ಸಾಫ್‌ನ (ಪಿಟಿಐ) ಮೈತ್ರಿಯನ್ನು ತೊರೆದು ವಿರೋಧ ಪಕ್ಷಗಳೊಂದಿಗೆ ಕೈಜೋಡಿಸಿದೆ ಆ ಹಿನ್ನೆಲೆಯಲ್ಲಿ ಪಾಕ್‌ ಪ್ರಧಾನಿ ಇಮ್ರಾನ್‌ ಖಾನ್‌ ಅವರ ಪಿಟಿಐ ಪಕ್ಷವು ಬಹುಮತ ಕಳೆದುಕೊಂಡಿದೆ.ಈ ಕುರಿತು ಪಾಕಿಸ್ತಾನ್ ಪೀಪಲ್ಸ್ ಪಾರ್ಟಿ(ಪಿಪಿಪಿ) ಅಧ್ಯಕ್ಷ ಬಿಲಾವಲ್ ಭುಟ್ಟೋ ಬುಧವಾರ ಮುಂಜಾನೆ ಟ್ವೀಟ್ ಮಾಡಿದ್ದು, ಪಿಪಿಪಿ ಮತ್ತು ಎಂಕ್ಯೂಎಂ-ಪಿ ಪಕ್ಷಗಳು ಮೈತ್ರಿ ಒಪ್ಪಂದ ಮಾಡಿಕೊಂಡಿವೆ ಎಂದು ತಿಳಿಸಿದ್ದಾರೆ.

ಈ ಬೆಳವಣಿಗೆಗಳ ಬೆನ್ನಲ್ಲೇ ಇಮ್ರಾನ್​​ ಖಾನ್​ ರಾಜೀನಾಮೆ ಬಹುತೇಕ ಖಚಿತ ಎನ್ನಲಾಗುತ್ತಿದೆ. ಮಾರ್ಚ್​ 31 ಅಥವಾ ಏಪ್ರಿಲ್​​​​​ 2ರ ನಂತರ ಇಮ್ರಾನ್​​​​ ಖಾನ್​​ ವಿಶ್ವಾಸಮತ ಪರೀಕ್ಷೆ ಎದುರಿಸಬೇಕಿದೆ.ಪ್ರಧಾನಿ ಇಮ್ರಾನ್‌ ಖಾನ್‌ ಅಧಿಕಾರ ಉಳಿಸಿಕೊಳ್ಳಲು 342 ಸದಸ್ಯ ಬಲದ ಸಂಸತ್ತಿನಲ್ಲಿ 172 ಮತಗಳನ್ನು ಪಡೆಯುವುದು ಅನಿವಾರ್ಯವಾಗಿದೆ. ಆಡಳಿತಾರೂಢ ಪಕ್ಷದೊಂದಿಗೆ ಮೈತ್ರಿಯಲ್ಲಿದ್ದ 23 ಸದಸ್ಯರು ಇಮ್ರಾನ್‌ ಅವರಿಗೆ ನೀಡಿದ್ದ ಬೆಂಬಲವನ್ನು ವಾಪಸ್ಸು ಪಡೆದಿದ್ದಾರೆ.ಆಡಳಿತ ಪಕ್ಷ ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್‌ನ ಸುಮಾರು 24 ಸಂಸದರೂ ಬಂಡಾಯ ಘೋಷಿಸಿದ್ದಾರೆ.

Vishwa News 24

Recent Posts

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ 4 ತಿಂಗಳ ಕಾಲ ನಿಷೇಧ – vishwanews24

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…

9 hours ago

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ – vishwanews24

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್‌ 21 ರಂದು ನೀಟ್‌–ಯುಜಿ  ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…

9 hours ago

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

1 day ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

1 day ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

1 day ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

1 day ago